ಮೇವು ಹಗರಣ: ಲಾಲೂ ಯಾದವ್ ಜಾಮೀನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

Date:

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಮಂಜೂರು ಮಾಡಿದ್ದ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

- Advertisement -

ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನರಾಕರಿಸಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಜಾರ್ಖಂಡ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕೇಂದ್ರೀಯ ತನಿಖಾ ದಳ (CBI) ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಂ. ಎಂ. ಸುಂದರೇಶ್ ಮತ್ತು ಪಿ. ಬಿ. ವರಾಳೆ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠ ವಿಚಾರಣೆ ನಡೆಸಿದೆ. “ನಾವು ಹೈಕೋರ್ಟ್‌ನ ಆದೇಶದಲ್ಲಿ ಮಧ್ಯಪ್ರವೇಶಿಸಲು ಇಚ್ಛಿಸುವುದಿಲ್ಲ,” ಎಂದು ಸ್ಪಷ್ಟಪಡಿಸಿದೆ.

ಇದೇ ವೇಳೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಮೇಲ್ಮನವಿಗಳ ವಿಚಾರಣೆಯನ್ನು ತ್ವರಿತಗೊಳಿಸುವಂತೆ ಮತ್ತು ಆದಷ್ಟು ಆರು ತಿಂಗಳ ಒಳಗಾಗಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಜಾರ್ಖಂಡ್ ಹೈಕೋರ್ಟ್‌ಗೆ ಸೂಚನೆ ನೀಡಿದೆ.

ದೇವಘರ್ ಖಜಾನೆಯಿಂದ ನಿಯಮಬಾಹಿರವಾಗಿ 89.27 ಲಕ್ಷ ರೂ. ಹಣವನ್ನು ಹಿಂಪಡೆದ ಆರೋಪದ ಮೇಲಿನ ಪ್ರಕರಣದಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯವು ಮೂರೂವರೆ ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಆದರೆ, 2019ರ ಜುಲೈನಲ್ಲಿ ಜಾರ್ಖಂಡ್ ಹೈಕೋರ್ಟ್, ಲಾಲೂ ಅವರು ಈಗಾಗಲೇ ತಮಗೆ ವಿಧಿಸಲಾದ ಶಿಕ್ಷೆಯ ಅರ್ಧದಷ್ಟು ಅವಧಿಯನ್ನು ಪೂರೈಸಿರುವುದನ್ನು ಪರಿಗಣಿಸಿ, ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್‌ನ ಈ ಕ್ರಮವು ತಪ್ಪಾಗಿದೆ ಎಂದು ವಾದಿಸಿದ್ದ ಸಿಬಿಐ, ಜಾಮೀನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಆದರೀಗ ಸುಪ್ರೀಂ ಕೋರ್ಟ್ ಸಿಬಿಐ ಅರ್ಜಿಯನ್ನು ತಿರಸ್ಕರಿಸಿದ್ದು, ಹೈಕೋರ್ಟ್ ತೀರ್ಪನ್ನು ಎತ್ತಿಹಿಡಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...