‘ಬಿಹಾರದ ಕೋಗಿಲೆ’ ಖ್ಯಾತಿಯ ಜಾನಪದ ಗಾಯಕಿ ಶಾರದಾ ಸಿನ್ಹಾ ನಿಧನ

Date:

Advertisements

ದೇಶದ ಪ್ರಸಿದ್ಧ ಜಾನಪದ ಗಾಯಕಿ, ‘ಬಿಹಾರದ ಕೋಗಿಲೆ’ ಎಂದೇ ಜನಪ್ರಿಯರಾಗಿದ್ದ ‘ಪದ್ಮಭೂಷಣ’ ಪ್ರಶಸ್ತಿ ಪುರಸ್ಕೃತರಾದ ಶಾರದಾ ಸಿನ್ಹಾ (72) ಮಂಗಳವಾರ ರಾತ್ರಿ ನಿಧನರಾಗಿದ್ದಾರೆ.

ಕ್ಯಾನ್ಸರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು ದೆಹಲಿಯ ‘ಏಮ್ಸ್’ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲಕಾಲ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿತ್ತು. ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಹೆಸರಾದ ಚೇತನ. ಭೋಜ್‌ಪುರಿ, ಮೈಥಿಲಿ ಮತ್ತು ಹಿಂದಿ ಜಾನಪದ ಸಂಗೀತಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.

“ಕಾರ್ತಿಕ್ ಮಾಸ್ ಇಜೋ ರಿಯಾ’, ‘ಕೋಯಲ್ ಬಿನ್’ ತರಹದ ಜನಪದ ಗೀತೆಗಳು, ‘ಗ್ಯಾಂಗ್ಸ್ ಆಫ್ ವಸೇಪುರ್’ ಹಿಂದಿ ಸಿನಿಮಾದ ‘ತಾರ್ ಬಿಜಿಲಿ’, ‘ಹಮ್ ಆಪೈ ಹೈ ಕೌನ್’ ಚಿತ್ರದ ‘ಬಾಬುಲ್’ ಹಾಡುಗಳ ಗಾಯನದಿಂದ ಶಾರದಾ ಅವರು ಛಾಪು ಮೂಡಿಸಿದ್ದರು. ಶಾರದಾ ಅವರನ್ನು ಅಭಿಮಾನಿಗಳು ‘ಬಿಹಾರಿ ಕೋಕಿಲಾ’ ಎಂದು ಕರೆಯುತ್ತಿದ್ದರು.

Advertisements

ಬಿಹಾರದ ಜಾನಪದ ಲೋಕಕ್ಕೆ ಸಿನ್ಹಾ ಸಾಂಸ್ಕೃತಿಕ ರಾಯಭಾರಿಯಂತಿದ್ದರು. ಅದರಲ್ಲೂ ವಿಶೇಷವಾಗಿ ಚತ್ ಗೀತೆ ಎಂದರೆ ತಕ್ಷಣ ಇವರ ಹೆಸರೇ ಜನಜನಿತ. ಈ ಹಿನ್ನೆಲೆಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಶಾರದಾ ಸಿನ್ಹಾರ ಹೆಸರು ಚತ್ ಉತ್ಸವದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಬಿಹಾರ ಹಾಗೂ ಉತ್ತರ ಭಾರತದ ವಿವಿಧೆಡೆ ಈ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ.

ಮೋದಿ ಸಂತಾಪ

“ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾಜೀ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಅವರ ಮೈಥಿಲಿ ಮತ್ತು ಭೋಜ್‌ಪುರಿ ಜಾನಪದ ಹಾಡುಗಳು ಹಲವು ದಶಕಗಳಿಂದ ಜನಪ್ರಿಯವಾಗಿವೆ. ಅವರ ನಿಧನ ಸಂಗೀತ ಲೋಕಕ್ಕೆ ತುಂಬಲಾರದ ನಷ್ಟ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ನನ್ನ ಸಂತಾಪಗಳು” ಎಂದು ಪ್ರಧಾನಿ ಮೋದಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X