ಗಾಂಧಿ-ಟ್ಯಾಗೋರ್ ಹಾದಿಯಲ್ಲೇ ಪಯಣ: ‘ವಂದೇ ಮಾತರಂ’ 2 ಪ್ಯಾರಾಗಳನ್ನಷ್ಟೇ ಹಾಡಲು ಕಾಂಗ್ರೆಸ್ ನಿರ್ಣಯ

Date:

ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆಯಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಗಾಯನಕ್ಕೆ ಸಂಬಂಧಿಸಿದಂತೆ ಸ್ಪಷ್ಟ ಹಾಗೂ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಾಗಿದೆ. ಇನ್ಮುಂದೆ ಪಕ್ಷದ ಅಧಿಕೃತ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ ಗೀತೆಯ ಮೊದಲ ಎರಡು ಪ್ಯಾರಾಗಳನ್ನು (ಚರಣ) ಮಾತ್ರ ಹಾಡಲಾಗುವುದು ಮತ್ತು ಸ್ವಾತಂತ್ರ್ಯ ಸಂಗ್ರಾಮದ ಅಗ್ರಗಣ್ಯ ನಾಯಕರಾದ ಮಹಾತ್ಮ ಗಾಂಧಿ ಹಾಗೂ ರವೀಂದ್ರನಾಥ ಟ್ಯಾಗೋರ್ ಅವರು ಹಾಕಿಕೊಟ್ಟ ಹಾದಿಯಲ್ಲೇ ಸಾಗಲಾಗುವುದು ಎಂದು ಕಾಂಗ್ರೆಸ್ ಸ್ಪಷ್ಟಪಡಿಸಿದೆ.

- Advertisement -

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ CWC ಸಭೆಯ ನಂತರ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಮಾಧ್ಯಮ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಅವರು ಈ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಜೈಲಿಗೆ ಹಾಕ್ಲಿ, ನೇಣಿಗೇರಿಸಲಿ, ಕಾಂಗ್ರೆಸ್ ಕಾರ್ಯಕ್ರಮದಲ್ಲಿ ವಂದೇ ಮಾತರಂ ಎರಡೇ ಚರಣ ಹಾಡೋದು: ಬಿ ಕೆ ಹರಿಪ್ರಸಾದ್

1937ರ CWC ಐತಿಹಾಸಿಕ ನಿರ್ಣಯದ ಹಿನ್ನೆಲೆ

1937ರ ಅಕ್ಟೋಬರ್ 28 ರಂದು ಕೋಲ್ಕತ್ತಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ರವೀಂದ್ರನಾಥ ಟ್ಯಾಗೋರ್ ಅವರ ಸಲಹೆಯಂತೆ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಹಾಡಲು ನಿರ್ಣಯ ಅಂಗೀಕರಿಸಲಾಗಿತ್ತು. ಆ ಸಭೆಯಲ್ಲಿ ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರೂ, ಸರ್ದಾರ್ ವಲ್ಲಭಭಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಮೌಲಾನಾ ಅಬುಲ್ ಕಲಾಂ ಆಜಾದ್ ಸೇರಿದಂತೆ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಬಂಕಿಮಚಂದ್ರ ಚಟ್ಟೋಪಾಧ್ಯಾಯರು ರಚಿಸಿದ ಈ ಗೀತೆಯ ಮೊದಲ ಎರಡು ಪ್ಯಾರಾಗಳು ಮಾತೃಭೂಮಿಯ ಪ್ರಾಕೃತಿಕ ಸೌಂದರ್ಯ ಮತ್ತು ದೇಶಭಕ್ತಿಯನ್ನು ಪ್ರತಿಬಿಂಬಿಸುತ್ತವೆ. ಆದರೆ ನಂತರದ ಚರಣಗಳು ನಿರ್ದಿಷ್ಟ ಧಾರ್ಮಿಕ ಸಂಕೇತಗಳನ್ನು ಒಳಗೊಂಡಿರುವುದರಿಂದ, ದೇಶದ ವಿವಿಧ ಸಮುದಾಯಗಳನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಕೇವಲ ಮೊದಲ 2 ಪ್ಯಾರಾಗಳನ್ನು ಮಾತ್ರ ಹಾಡುವುದೆಂದು ಅಂದು ತೀರ್ಮಾನಿಸಲಾಗಿತ್ತು. ಈಗಲೂ ಅದೇ ಐತಿಹಾಸಿಕ ನಿರ್ಣಯಕ್ಕೆ ಕಾಂಗ್ರೆಸ್ ಬದ್ಧವಾಗಿದೆ.

ಇದನ್ನೂ ಓದಿ: ಮುಸ್ಲಿಮರಿಗೆ ಒಬಿಸಿ ಮೀಸಲಾತಿ ರದ್ದು, ಮದರಸಾಗಳಲ್ಲಿ ವಂದೇಮಾತರಂ ಕಡ್ಡಾಯ: ಸುವೇಂದು ಸರ್ಕಾರದ ಆದೇಶ

CWC ಸಭೆಯಲ್ಲಿ ಕೈಗೊಂಡ ಇತರ ಪ್ರಮುಖ ನಿರ್ಣಯಗಳು

  • ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Paper Leak) ಪ್ರಕರಣಗಳ ವಿರುದ್ಧ ರಾಹುಲ್ ಗಾಂಧಿ ನೇತೃತ್ವದ “ಛಾತ್ರೋಂ ಕಿ ಗೂಂಜ್” ಅಭಿಯಾನವನ್ನು ತೀವ್ರಗೊಳಿಸಲು ತೀರ್ಮಾನಿಸಲಾಗಿದೆ.
  • ರಾಮಮಂದಿರ ಸೇರಿದಂತೆ ಸಾರ್ವಜನಿಕ ಧಾರ್ಮಿಕ ಕೇಂದ್ರಗಳ ಹಾಗೂ ದೇವಾಲಯಗಳ ದೇಣಿಗೆ ಸಂಬಂಧಿತ ಅವ್ಯವಹಾರ ಮತ್ತು ರಾಜಕೀಯ ದುರ್ಬಳಕೆ ವಿರುದ್ಧ ಹಳ್ಳಿ ಹಾಗೂ ಪಂಚಾಯತ್ ಮಟ್ಟದಿಂದಲೇ ಹೋರಾಟ ರೂಪಿಸಲು ನಿರ್ಣಯಿಸಲಾಗಿದೆ.
  • ಅರುಣಾಚಲ ಪ್ರದೇಶದ ಗಡಿ ಭಾಗದಲ್ಲಿ ಚೀನಾದ ಅತಿಕ್ರಮಣದ ವಿಚಾರದಲ್ಲಿ ಕೇಂದ್ರ ಸರ್ಕಾರದ ಮೃದು ಧೋರಣೆಯನ್ನು ಖಂಡಿಸಿದ್ದು, ದೇಶದ ಗಡಿ ಭದ್ರತೆಯ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬಾರದೆಂದು ಒತ್ತಾಯಿಸಲಾಗಿದೆ.
  • ಲೋಕಸಭೆಯ ಹಾಲಿ 543 ಸಂಸದೀಯ ಕ್ಷೇತ್ರಗಳ ಬಲದ ಆಧಾರದಲ್ಲೇ ಮಹಿಳಾ ಮೀಸಲಾತಿ ಕಾಯ್ದೆಯನ್ನು ವಿಳಂಬವಿಲ್ಲದೆ ತಕ್ಷಣವೇ ಜಾರಿಗೆ ತರಬೇಕೆಂದು CWC ಪುನರುಚ್ಚರಿಸಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...