ಸಿಎಂ ಯೋಗಿಗೆ ಪ್ರಶ್ನೆ ಕೇಳಿದ್ದಕ್ಕೆ ಕೆಲಸಕ್ಕೆ ಕುತ್ತು; ಆನ್‌ಲೈನ್ ನಿಂದನೆ, ಬುಲ್ಡೋಜರ್ ಬೆದರಿಕೆ: ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಆರೋಪ

Date:

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೆ ಕೇಳಲು ಯತ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್ ಅವರಿಗೆ ಸಂಘಪರಿವಾರವು ಆನ್‌ಲೈನ್‌ನಲ್ಲಿ ಬೆದರಿಕೆ ಹಾಕುತ್ತಿದೆ, ನಿಂದನೆ ಮಾಡುತ್ತಿದೆ. ಅಷ್ಟು ಮಾತ್ರವಲ್ಲದೆ ದಿವ್ಯಾ ಶ್ರೀವಾಸ್ತವ್ ಅವರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಎದುರಾಗಿದೆ. ಈ ಘಟನೆಯು ದೇಶದಲ್ಲಿ ಅದರಲ್ಲೂ ಮುಖ್ಯವಾಗಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶದಲ್ಲಿ ಮಾಧ್ಯಮ ಸ್ವಾತಂತ್ರ್ಯ ಹಾಗೂ ಮಾಧ್ಯಮ ಪ್ರತಿನಿಧಿಗಳ ಭದ್ರತೆಯ ಕುರಿತು ಮತ್ತೊಮ್ಮೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ.

- Advertisement -

ಲಖನೌದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ಹೇಳಿಕೆ ನೀಡಿದ ಬಳಿಕ, ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸದೆ ಹೊರಡಲು ಅನುವಾದರು. ಈ ವೇಳೆ ದಿವ್ಯಾ ಶ್ರೀವಾಸ್ತವ್ ಸೇರಿದಂತೆ ಕೆಲ ಪತ್ರಕರ್ತರು, “ಇದು ಪತ್ರಿಕಾಗೋಷ್ಠಿ, ಸಿಎಂ ಸಾಹೇಬರೇ ಪ್ರಶ್ನೆಗೆ ಉತ್ತರಿಸಿ” ಎಂದು ಗಟ್ಟಿಯಾಗಿ ವಿನಂತಿಸಿಕೊಂಡಿದ್ದರು. ಬುಲ್ಡೋಜರ್ ಕ್ರಮಗಳು ಹಾಗೂ ಕಾನೂನು ಸುವ್ಯವಸ್ಥೆ ಕುರಿತು ಪ್ರಶ್ನೆ ಕೇಳಲು ಪ್ರಯತ್ನಿಸಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಇದನ್ನೂ ಓದಿ: ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ: ಸಾಧನೆ ಮತ್ತು ಸಂಪಾದನೆಗಳತ್ತ ಒಂದು ನೋಟ

ಈ ಘಟನೆಯ ನಂತರ ತಮ್ಮ ಮೇಲೆ ತೀವ್ರ ಒತ್ತಡ ಮತ್ತು ಬೆದರಿಕೆಗಳು ಬಂದಿವೆ ಎಂದು ದಿವ್ಯಾ ಶ್ರೀವಾಸ್ತವ್ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿ ಮುಗಿದ ನಂತರ ತಮ್ಮ ಮನೆಗೆ ಬುಲ್ಡೋಜರ್ ಕಳುಹಿಸುವುದಾಗಿ ಬೆದರಿಕೆ ಹಾಕಲಾಯಿತು ಮತ್ತು ತಮ್ಮ ಉದ್ಯೋಗಕ್ಕೆ ಕುತ್ತು ತರಲಾಯಿತು ಎಂದು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಬೆಂಬಲಿಗರು ಹಾಗೂ ಕೆಲ ಕಿಡಿಗೇಡಿಗಳು ತಮ್ಮ ವಿರುದ್ಧ ಚಾರಿತ್ರ್ಯ ವಧೆಯ ದಾಳಿ ನಡೆಸುತ್ತಿದ್ದು, ತೀವ್ರ ಆನ್‌ಲೈನ್ ನಿಂದನೆ ಮಾಡುತ್ತಿದ್ದಾರೆ. ತಮ್ಮನ್ನು ಪ್ರಸಕ್ತ ವಿರೋಧ ಪಕ್ಷಗಳ (ಸಮಾಜವಾದಿ ಪಾರ್ಟಿ ಅಥವಾ ಕಾಂಗ್ರೆಸ್) ಏಜೆಂಟ್ ಎಂದು ಬಿಂಬಿಸಲು ಯತ್ನಿಸಲಾಗುತ್ತಿದೆ. ತಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವಳಲ್ಲ, ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತೆ ಎಂದು ದಿವ್ಯಾ ಸ್ಪಷ್ಟಪಡಿಸಿದ್ದಾರೆ.

ಈ ಘಟನೆಯು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾದ ಮಾಧ್ಯಮದ ಮೇಲಿನ ದಾಳಿ ಎಂದು ಸಾರ್ವಜನಿಕ ವಲಯದಲ್ಲಿ ಹಾಗೂ ವಿರೋಧ ಪಕ್ಷಗಳಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಗಳನ್ನು ಹಾಗೂ ಸರ್ಕಾರವನ್ನು ಪ್ರಶ್ನಿಸುವುದು ಪತ್ರಕರ್ತರ ಮೂಲಭೂತ ಕರ್ತವ್ಯವಾಗಿದೆ. ಆದರೆ, ಪ್ರಶ್ನೆ ಕೇಳಿದ್ದಕ್ಕೇ ಉದ್ಯೋಗ ಕಳೆದುಕೊಳ್ಳುವಂತೆ ಮಾಡುವುದು, ಬುಲ್ಡೋಜರ್ ಬೆದರಿಕೆ ಒಡ್ಡುವುದು ಮತ್ತು ಹೆಣ್ಣುಮಗಳೊಬ್ಬಳ ಚಾರಿತ್ರ್ಯವನ್ನು ಕೀಳಾಗಿ ಬಿಂಬಿಸುವುದು ಪ್ರಜಾಪ್ರಭುತ್ವದ ಆಶಯಗಳಿಗೆ ಧಕ್ಕೆ ತರುತ್ತದೆ ಎಂದು ಮಾಧ್ಯಮ ವಿಶ್ಲೇಷಕರು ಕಳವಳ ವ್ಯಕ್ತಪಡಿಸಿದ್ದಾರೆ.

ಮತ್ತೊಂದೆಡೆ, ಆಡಳಿತ ಪಕ್ಷದ ಬೆಂಬಲಿಗರು ಈ ಘಟನೆಯನ್ನು ನಿಯಮಬಾಹಿರವಾಗಿ ಮಾಧ್ಯಮಗೋಷ್ಠಿಗೆ ಅಡ್ಡಿಪಡಿಸಿದ ಘಟನೆ ಎಂದು ಸಮರ್ಥಿಸಿಕೊಳ್ಳಲು ಯತ್ನಿಸುತ್ತಿದ್ದು, ವೃತ್ತಿಪರ ನಡವಳಿಕೆಯ ಚರ್ಚೆಯನ್ನೂ ಮುನ್ನೆಲೆಗೆ ತಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಮೊಬೈಲ್ ಒಡೆದು ಹಾಕಿ’: ‘ಡಿಜಿಟಲ್ ಅರೆಸ್ಟ್’ ಬಲೆಗೆ ಬೀಳುತ್ತಿರುವ ಸುಶಿಕ್ಷಿತರ ಬಗ್ಗೆ ಸುಪ್ರೀಂ ಬೇಸರ

ದೇಶಾದ್ಯಂತ ಹೆಚ್ಚುತ್ತಿರುವ 'ಡಿಜಿಟಲ್ ಅರೆಸ್ಟ್' (Digital Arrest) ಪ್ರಕರಣಗಳ ಕುರಿತು ತೀವ್ರ...

2027ನೇ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅಂತಿಮ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2027ನೇ ಸಾಲಿನ...

ಬೀದರ್‌ | ಶಿಕ್ಷಕರು ಬದುಕಿನ ಭವಿಷ್ಯ ರೂಪಿಸಿದ ಶಿಲ್ಪಿಗಳು: ಪತ್ರಕರ್ತ ಗೌರೀಶ ಅಕ್ಕಿ

ಶಿಕ್ಷಕರು ನಮಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಿ, ಬದುಕಿನ ಭವಿಷ್ಯವನ್ನು ರೂಪಿಸಿದ...