‘ಮನೆಗೆ ನುಗ್ಗಿ ಬಟ್ಟೆ ಎಳೆದರೆ ಅತ್ಯಾಚಾರ ಯತ್ನವಲ್ಲ’ – ಜಾರ್ಖಂಡ್ ಹೈಕೋರ್ಟ್‌ ತೀರ್ಪಿಗೆ ನೆಟ್ಟಿಗರ ತೀವ್ರ ವಿರೋಧ

Date:

ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯ ಬಟ್ಟೆ ಎಳೆಯುವ ಕೃತ್ಯ ‘ಅತ್ಯಾಚಾರ ಯತ್ನ’ ಅಲ್ಲ, ವಿನಯಭಂಗ ಮಾತ್ರ ಎಂದು ಜಾರ್ಖಂಡ್ ಹೈಕೋರ್ಟ್ ನೀಡಿದ ತೀರ್ಪು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ಮತ್ತು ತೀವ್ರ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ನ್ಯಾಯಾಲಯದ ಈ ವ್ಯಾಖ್ಯಾನವು ಮಹಿಳೆಯರ ಭದ್ರತೆ ಮತ್ತು ಕಾನೂನಿನ ಮೇಲಿನ ನಂಬಿಕೆಗೆ ಭಂಗ ತರುತ್ತದೆ ಎಂದು ನೆಟ್ಟಿಗರು, ಮಹಿಳಾ ಹಕ್ಕುಗಳ ಹೋರಾಟಗಾರರು ಹಾಗೂ ಕಾನೂನು ತಜ್ಞರು ತೀವ್ರವಾಗಿ ಟೀಕಿಸುತ್ತಿದ್ದಾರೆ.

- Advertisement -

ಎಕ್ಸ್‌ (ಟ್ವಿಟರ್), ಇನ್‌ಸ್ಟಾಗ್ರಾಮ್ ಹಾಗೂ ಫೇಸ್‌ಬುಕ್‌ ಸೇರಿದಂತೆ ಹಲವು ಡಿಜಿಟಲ್ ವೇದಿಕೆಗಳಲ್ಲಿ ಈ ಆದೇಶದ ವಿರುದ್ಧ ಭಾರಿ ವಿರೋಧ ವ್ಯಕ್ತವಾಗುತ್ತಿದ್ದು, “ನ್ಯಾಯಾಂಗ ವ್ಯವಸ್ಥೆಯು ಕಠಿಣ ಅಪರಾಧಗಳನ್ನು ಹಗುರವಾಗಿ ಪರಿಗಣಿಸುತ್ತಿದೆಯೇ?” ಎಂಬ ಪ್ರಶ್ನೆಗಳು ಎದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿ: ಗುಜರಾತ್ | ಅತ್ಯಾಚಾರಕ್ಕೆ ಯತ್ನ: ಬಾಲಕಿಯ ಖಾಸಗಿ ಅಂಗಕ್ಕೆ ರಾಡ್‌ನಿಂದ ಚುಚ್ಚಿ ವಿಕೃತಿ

ಅರ್ಧರಾತ್ರಿ ಅಕ್ರಮವಾಗಿ ಮನೆಗೆ ನುಗ್ಗಿ ಮಹಿಳೆಯ ಶಾರೀರಿಕ ದೌರ್ಜನ್ಯ ನಡೆಸುವುದನ್ನು ‘ಕೇವಲ ವಿನಯಭಂಗ’ ಎಂದು ಪರಿಗಣಿಸಿದರೆ, ಅಪರಾಧಿಗಳಿಗೆ ಭಯವೇ ಇಲ್ಲದಂತಾಗುತ್ತದೆ. ಇಂತಹ ತೀರ್ಪುಗಳು ಅಪರಾಧಿಗಳಿಗೆ ಮತ್ತಷ್ಟು ಧೈರ್ಯ ತುಂಬುತ್ತವೆ ಎಂದು ಹಲ ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಅತ್ಯಾಚಾರ ಯತ್ನ’ಕ್ಕೆ ನಿಖರವಾದ ನೇರ ಕೃತ್ಯ ಇರಬೇಕು ಎಂಬ ಕಾನೂನಿನ ತಾಂತ್ರಿಕ ವಿವರಣೆಯನ್ನು ಹಿಡಿದು ಅಪರಾಧದ ತೀವ್ರತೆಯನ್ನು ಕಡಿಮೆ ಮಾಡುವುದು ಎಷ್ಟು ಸರಿ ಎಂದು ನೆಟಿಜನ್‌ಗಳು ಪ್ರಶ್ನಿಸುತ್ತಿದ್ದಾರೆ. ಹಲವು ಮಹಿಳಾ ಪರ ಸಂಘಟನೆಗಳು ಹಾಗೂ ಕಾರ್ಯಕರ್ತರು, ಈ ತೀರ್ಪು ಸಂತ್ರಸ್ತೆಯರ ಸಂಕಟ ಮತ್ತು ಅನುಭವಿಸಿದ ಮಾನಸಿಕ ಆಘಾತವನ್ನು ಅಲಕ್ಷಿಸುತ್ತದೆ; ಇಂತಹ ಸಡಿಲವಾದ ಶಿಕ್ಷೆಗಳು ಸಮಾಜಕ್ಕೆ ತಪ್ಪು ಸಂದೇಶ ರವಾನಿಸುತ್ತವೆ ಎಂದು ಕಳವಳ ವ್ಯಕ್ತಪಡಿಸಿವೆ.

ಏನಿದು ಪ್ರಕರಣ, ಹೈಕೋರ್ಟ್ ಹೇಳಿದ್ದೇನು?

1999ರ ಪ್ರಕರಣವೊಂದರಲ್ಲಿ, ರಾತ್ರಿ ವೇಳೆ ಮನೆಗೆ ನುಗ್ಗಿ ಮಹಿಳೆಯ ಬಟ್ಟೆ ಎಳೆದು ದೌರ್ಜನ್ಯ ಎಸಗಿದ ಆರೋಪಿಗೆ ಕೆಳ ನ್ಯಾಯಾಲಯ ನೀಡಿದ್ದ 4 ವರ್ಷಗಳ ಜೈಲು ಶಿಕ್ಷೆಯನ್ನು ಜಾರ್ಖಂಡ್ ಹೈಕೋರ್ಟ್‌ ಇತ್ತೀಚೆಗೆ ಮಾರ್ಪಡಿಸಿತ್ತು. ‘ಅತ್ಯಾಚಾರ ಯತ್ನ’ಕ್ಕೆ ಸೂಕ್ತ ಸಾಕ್ಷ್ಯಾಧಾರ ಕೊರತೆಯಿದೆ ಎಂದು ತಿಳಿಸಿ, ಐಪಿಸಿ ಸೆಕ್ಷನ್ 354 (ವಿನಯಭಂಗ) ಅಡಿಯಲ್ಲಿ ಶಿಕ್ಷೆಯನ್ನು 8 ತಿಂಗಳಿಗೆ ಇಳಿಸಿ ಆದೇಶಿಸಿತ್ತು. ಈ ಸುದ್ದಿಯು ಮಾಧ್ಯಮಗಳಲ್ಲಿ ಪ್ರಕಟಗೊಳ್ಳುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ವಿರೋಧದ ಅಲೆ ಎದ್ದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...