ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ; ಬಿಜೆಪಿಯ ಮಾಜಿ ಶಾಸಕ ಬಂಧನ

Date:

ಮಣಿಪುರದ ಇಂಫಾಲ್‌ನಲ್ಲಿ ಪುನಃ  ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಬಿಜೆಪಿಯ ಮಾಜಿ ಶಾಸಕ ಸೇರಿ ಮೂವರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಬಿರೇನ್ ಸಿಂಗ್‌ ತಿಳಿಸಿದ್ದಾರೆ.

- Advertisement -

ಹದಿನೈದು ದಿನಗಳ ಹಿಂದೆ ಕನಿಷ್ಠ 71 ಜನರು ಸಾವನ್ನಪ್ಪಿದ ಮತ್ತು 35,000 ಜನರು ಸ್ಥಳಾಂತರಗೊಂಡ ಕಲಹ ಪೀಡಿತ ರಾಜ್ಯದಲ್ಲಿ ಮತ್ತೊಮ್ಮೆ ಹಿಂಸಾಚಾರಕ್ಕೆ ಪ್ರಚೋದಿಸುವ ಪಿತೂರಿಯ ಹಿಂದೆ ಮಾಜಿ ಶಾಸಕನ ಕೈವಾಡವಿದೆ. ಬಂಧಿತ ಶಾಸಕ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯ ನಿರ್ವಹಿಸಿದ್ದರು ಎಂದು ಮಣಿಪುರ ಮುಖ್ಯಮಂತ್ರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರತೆಯ ಹೆಸರಿನಲ್ಲಿ ಮಾಂಸದಂಗಡಿಗಳಿಗೆ ಬೀಗ: ಸರ್ಕಾರದ ಈ ನಿರ್ಧಾರದ...

ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರದ ಆಡಳಿತಾತ್ಮಕ ಹೊಣೆಗಾರಿಕೆಯನ್ನೂ ಮುನ್ನೆಲೆಗೆ ತಂದಿದೆ. ಪ್ರಧಾನಿಯ ಭೇಟಿಯ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ಗಳ ಆಗಮನ ಮತ್ತು ನಿರ್ಗಮನದ ಭದ್ರತೆಯನ್ನು ನಿರ್ಬಂಧಕ್ಕೆ ಕಾರಣವೆಂದು ಸಮರ್ಥಿಸಲಾಗುತ್ತಿದ್ದರೆ, ಅದಕ್ಕೂ ಸಮಗ್ರ ವಿವರಣೆ ಬೇಕಾಗುತ್ತದೆ. ಪ್ರಧಾನಿ...

ನಿಜಕ್ಕೂ ಭಾರತದ ಬಡತನ 16%ಗೆ ಇಳಿದಿದೆಯೇ? ವಾಸ್ತವ ಹೇಳುವುದೇನು?

ವಿಶ್ವಬ್ಯಾಂಕ್ ವರದಿ ಪ್ರಕಾರ, ಭಾರತದಲ್ಲಿ ಬಡತನ 16.1%ಗೆ ಮತ್ತು ತೀವ್ರ ಬಡತನ 2.6%ಗೆ ಇಳಿದಿದೆ. ಇದೇ ಅಂಕಿಅಂಶವನ್ನು ಬಳಸಿಕೊಂಡು ತಮ್ಮ ಸಾಧನೆ ಎಂಬಂತೆ ಕೇಂದ್ರ ಸರ್ಕಾರ ಸಂಭ್ರಮಿಸುತ್ತಿದೆ. ಆದರೆ, ದೇಶದ ಸುಮಾರು 80...

ಶಾಂಘೈ ಕೌಶಲ್ಯ ಶೃಂಗಸಭೆಯಲ್ಲಿ ಮಿಂಚಿದ ಕರ್ನಾಟಕದ ಪ್ರತಿಭೆಗಳು…ಪದಕಗಳ ಸೂರೆ

ಚೀನಾದ ಶಾಂಘೈನಲ್ಲಿ ನಡೆದ ಜಾಗತಿಕ 'ಕೌಶಲ್ಯ ಒಲಿಂಪಿಕ್ಸ್' ವೇದಿಕೆಯಲ್ಲಿ ನಮ್ಮ ಕರುನಾಡಿನ ಯುವಪ್ರತಿಭೆಗಳು ಹೊಸ ಇತಿಹಾಸ ಬರೆದಿದ್ದಾರೆ. ಕೇವಲ ಕನಸುಗಳನ್ನಷ್ಟೇ ಹೊತ್ತೊಯ್ದಿದ್ದ ನಮ್ಮ ನಾಡಿನ ಪ್ರತಿಭೆಗಳು, ತಮ್ಮ ಬೆವರು, ಕಠಿಣ ಪರಿಶ್ರಮ ಹಾಗೂ...

ಇಂಫಾಲ್‌ನ ನ್ಯೂ ಚೆಕ್ಕಾನ್ ಮಾರುಕಟ್ಟೆ ಪ್ರದೇಶದಲ್ಲಿ ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೊಸ ಹಿಂಸಾಚಾರವು ನಡೆದಿದೆ. ಈ ಪ್ರದೇಶದಲ್ಲಿ ಕುಕಿಗಳು, ಮೀತೀಗಳು ಮತ್ತು ಇತರ ಜನಾಂಗೀಯ ಗುಂಪುಗಳು ನೆಲೆಸಿದ್ದಾರೆ.

ಸೋಮವಾರ ಬೆಳಗ್ಗೆ, ಕರ್ಫ್ಯೂ ಸಡಿಲಗೊಂಡಿದ್ದರಿಂದ, ಮಾಜಿ ಶಾಸಕರ ನೇತೃತ್ವದ ತಂಡ ಬಂದೂಕುಗಳೊಂದಿಗೆ ಶಸ್ತ್ರಸಜ್ಜಿತವಾಗಿ ಬಂದು ವ್ಯಾಪಾರಸ್ಥರಿಗೆ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಹೇಳಿದ್ದಾರೆ. ಈ ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಸಿಬ್ಬಂದಿ ಮಧ್ಯಪ್ರವೇಶಿಸಿದರು ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬಂಗಾಳದಲ್ಲಿ ಕುಸಿಯುತ್ತಿರುವ ಮಮತಾ ಅಲೆಯ ನಡುವೆ ಎಡಪಕ್ಷ-ಕಾಂಗ್ರೆಸ್‌ ಮೈತ್ರಿ ಕಸರತ್ತು

”ಕೆಲವು ಕಡೆಗಳಲ್ಲಿ ಹಿಂಸಾಚಾರದ ಘಟನೆಗಳು ಕಡಿಮೆಯಾಗಿವೆ. ಇತ್ತೀಚೆಗೆ ಯಾವುದೇ ದೊಡ್ಡ ಮಟ್ಟದ ಹಿಂಸಾಚಾರ ಅಥವಾ ಜೀವಹಾನಿಯಾಗಿಲ್ಲ. ರಾಜ್ಯದಲ್ಲಿ ಈಗಾಗಲೇ ಸೇನೆ ಮತ್ತು ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಒಂದುವೇಳೆ ಅಹಿತಕರ ಘಟನೆಗಳು ನಡೆದರೆ, ಈ ಸ್ಥಳಗಳಿಗೆ ತಲುಪಿ, ಹಿಂಸಾಚಾರವನ್ನು ನಿಯಂತ್ರಣಕ್ಕೆ ತರುತ್ತೇವೆ” ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸೈನಿಕರನ್ನು ನಿಯೋಜಿಸಲಾಗಿದೆ. ಭದ್ರತಾ ಪಡೆಗಳು ಮಾನವ ರಹಿತ ವೈಮಾನಿಕ ವಾಹನಗಳು ಮತ್ತು ಚೀತಾ ಹೆಲಿಕಾಪ್ಟರ್‌ಗಳ ಮೂಲಕ ಸ್ಥಳದಲ್ಲಿ ವೈಮಾನಿಕ ಕಣ್ಗಾವಲು ನಡೆಸುತ್ತಿವೆ. ರಾಜ್ಯದ ಒಳಗೆ ಮತ್ತು ಹೊರಗೆ ಸಾಮಾಜಿಕ ಮಾಧ್ಯಮಗಳಲ್ಲಿ ದ್ವೇಷವನ್ನು ಪ್ರಚೋದಿಸುವವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಎಫ್‌ಐಆರ್‌ಗಳನ್ನು ದಾಖಲಿಸಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಭಾನುವಾರ, ಮಣಿಪುರ ಗೃಹ ಇಲಾಖೆಯು, ಸಾಮಾಜಿಕ ಮಾಧ್ಯಮವನ್ನು ದ್ವೇಷ ಭಾಷಣಕ್ಕಾಗಿ ಬಳಸಬಹುದೆಂಬ ಆತಂಕವನ್ನು ಉಲ್ಲೇಖಿಸಿ, ಇಂಟರ್‌ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಮೇ 26 ರವರೆಗೆ ವಿಸ್ತರಿಸಿದೆ.

ಸೋಮವಾರ ನಡೆದ ಘಟನೆಯಿಂದ ಕರ್ಫ್ಯೂ ಸಡಿಲಿಕೆಯ ಸಮಯವನ್ನು ಬೆಳಗ್ಗೆ 6 ರಿಂದ ಮಧ್ಯಾಹ್ನ 2ಕ್ಕೆ ರಾಜ್ಯ ಸರ್ಕಾರವು ಇಳಿಸಿದೆ. ಮೊದಲು ವಿಶ್ರಾಂತಿ ಅವಧಿಯು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ಸಡಿಲಿಸಲಾಗಿತ್ತು.

ಕಳೆದ 10 ದಿನಗಳಲ್ಲಿ ಮಣಿಪುರದಲ್ಲಿ ಪರಿಸ್ಥಿತಿ ಹೆಚ್ಚಾಗಿ ಶಾಂತಿಯುತವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದು, ಸಾರ್ವಜನಿಕರು ಶಾಂತವಾಗಿರಲು ಮತ್ತು ಸಹಜತೆಯನ್ನು ಪುನಃಸ್ಥಾಪಿಸಲು ಸಹಾಯ ಮಾಡುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಡಿಪಿ ಅಂಕಿಅಂಶಗಳ ಆಚೆಗಿನ ವಾಸ್ತವ: ಭಾರತದ ಆರ್ಥಿಕ ಸವಾಲುಗಳ ಕುರಿತು ರಘುರಾಮ್ ರಾಜನ್ ಒಳನೋಟ

ಜಾಗತಿಕ ಆರ್ಥಿಕತೆಯು ಭೌಗೋಳಿಕ-ರಾಜಕೀಯ ಸಂಘರ್ಷಗಳು ಮತ್ತು ತಂತ್ರಜ್ಞಾನದ ಕ್ಷಿಪ್ರ ಬದಲಾವಣೆಗಳ ನಡುವೆ...

ಜಾರ್ಖಂಡ್‌ನಲ್ಲಿ ಕಲ್ಲಿದ್ದಲು ಗಣಿಗಾರಿಕೆಗೆ ಅಸ್ತು: 6 ಲಕ್ಷ ಮರಗಳ ಮಾರಣಹೋಮ, ಆನೆಗಳ ಆವಾಸಸ್ಥಾನಕ್ಕೆ ಕುತ್ತು 

 ಜಾರ್ಖಂಡ್‌ನ ಚತ್ರಾ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿಗಾರಿಕೆಗಾಗಿ ಬೃಹತ್ ಪ್ರಮಾಣದ ಅರಣ್ಯ ಭೂಮಿಯನ್ನು...

ಛತ್ ಪೂಜೆ: ಬಂಗಾಳದ ರಾಂಪುರಹಾಟ್‌ನಲ್ಲಿ ಮುಸ್ಲಿಂ ವ್ಯಕ್ತಿಗೆ ಸೇರಿದ ಏಕೈಕ ಮಾಂಸದಂಗಡಿ ಬಂದ್

ಈ ಬಾರಿಯ ಛತ್ ಪೂಜೆಯು ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ರಾಂಪುರಹಾಟ್...