ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿರುವ ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಗುಣಮುಖರಾಗಲು 6 ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಗುರುವಾರ ಮಧ್ಯರಾತ್ರಿ ತಮ್ಮ ನಿವಾಸದ ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿದ್ದರು. ಗಾಯಗೊಂಡ ಅವರನ್ನು ಹೈದರಾಬಾದ್‌ನ ಸೋಮಾಜಿಗುಡದ ಯಶೋದಾ ಆಸ್ಪತ್ರೆಗೆ ದಾಖಲಿಸಲಾಗಿದೆ.
“ಸಿಟಿ ಸ್ಕ್ಯಾನ್‌ಗಳನ್ನು ಒಳಗೊಂಡ ಮೌಲ್ಯಮಾಪನದಲ್ಲಿ, ಅವರು ಸೊಂಟದ ಮುರಿತವಾಗಿರುವುದು ಕಂಡುಬಂದಿದೆ [ಎಲುಬು ಮುರಿತ]. ಅವರಿಗೆ ಬದಲಿ ಎಡ ಸೊಂಟದ ಅಗತ್ಯವಿರುತ್ತದೆ ಮತ್ತು ಅಂತಹ ಪ್ರಕರಣಗಳಿಗೆ ಸಾಮಾನ್ಯ ಚೇತರಿಕೆಯ ಚಿಕಿತ್ಸೆ ಆರರಿಂದ ಎಂಟು ವಾರಗಳವರೆಗೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ” ಎಂದು ಆಸ್ಪತ್ರೆಯ ಆಡಳಿತ ಮಂಡಳಿ ನೀಡಿರುವ ಆರೋಗ್ಯ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ
ಆರ್ಥೋಪೆಡಿಕ್, ಅರಿವಳಿಕೆ, ಜನರಲ್ ಮೆಡಿಸಿನ್ ಮತ್ತು ನೋವು ಔಷಧಿ ಸೇರಿದಂತೆ ವೈದ್ಯಕೀಯ ತಂಡವು ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ.
ಇತ್ತೀಚಿಗೆ ನಡೆದ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಬಿಆರ್‌ಎಸ್ ಪಕ್ಷ 39 ಸ್ಥಾನಗಳನ್ನು ಪಡೆಯುವುದರ ಮೂಲಕ ಚುನಾವಣೆಯಲ್ಲಿ ಸೋಲು ಅನುಭವಿಸಿತು. 64 ಕ್ಷೇತ್ರಗಳನ್ನು ಗೆದ್ದ ಕಾಂಗ್ರೆಸ್‌ನಿಂದ ರೇವಂತ್ ರೆಡ್ಡಿ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.