1984ರ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ ನಿಧನ

Date:

1984ರ ಸಿಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಜೈಲಿನಲ್ಲಿದ್ದ ಮಾಜಿ ಕಾಂಗ್ರೆಸ್ ಸಂಸದ ಸಜ್ಜನ್ ಕುಮಾರ್ (80) ಅವರು ಗುರುವಾರ ನವದೆಹಲಿಯಲ್ಲಿ ನಿಧನರಾಗಿದ್ದಾರೆ.

- Advertisement -

ದೆಹಲಿಯ ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಸಜ್ಜನ್ ಕುಮಾರ್ ಅವರ ಆರೋಗ್ಯದಲ್ಲಿ ಏಕಾಏಕಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಇದನ್ನೂ ಓದಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆ

ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಯ ನಂತರ 1984ರಲ್ಲಿ ದೆಹಲಿಯ ಪಾಲಂ ಕಾಲೋನಿ (ರಾಜ್ ನಗರ) ಪ್ರದೇಶದಲ್ಲಿ ನಡೆದ ಸಿಖ್ ವಿರೋಧಿ ಗಲಭೆಯಲ್ಲಿ ಐವರ ಹತ್ಯೆ ಹಾಗೂ ಗುರುದ್ವಾರಕ್ಕೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ಪ್ರಮುಖ ಆರೋಪಿಯಾಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 2018ರ ಡಿಸೆಂಬರ್ 17ರಂದು ದೆಹಲಿ ಹೈಕೋರ್ಟ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಹೈಕೋರ್ಟ್ ತೀರ್ಪಿನ ನಂತರ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೈಲು ಪಾಲಾಗಿದ್ದರು. ಅವರು ದೆಹಲಿಯ ಹೊರ ವಲಯ (ಔಟರ್ ಡೆಲ್ಲಿ) ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ವೀಡಿಯೋ ಲೀಕ್ ಮಾಡಿದ ದುಷ್ಕರ್ಮಿ: ಶೀಘ್ರ ಬಂಧನಕ್ಕೆ ಒತ್ತಾಯ

ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಬಂದ ಆರೋಪಿಯೊಬ್ಬ, ಸಂತ್ರಸ್ತೆಯ ಖಾಸಗಿ...