ಬಿಸಿಸಿಐ ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ; ಯಾರಿವರು?

Date:

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ನೂತನ ಅಧ್ಯಕ್ಷರಾಗಿ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್‌ ಅವರನ್ನು ಆಯ್ಕೆ ಮಾಡಲಾಗಿದೆ. ಭಾನುವಾರ, ಮುಂಬೈನಲ್ಲಿ ನಡೆದ ಬಿಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (ಎಜಿಎಂ) ಮಿಥುನ್ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

- Advertisement -

ಮಿಥುನ್ ಅವರನ್ನು ಸಭೆಯು ಅವಿರೋಧವಾಗಿ ಆಯ್ಕೆ ಮಾಡಿದೆ. ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿ ನಂತರ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದ ಮೂರನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಮಿಥುನ್ ಪಾತ್ರರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈವರೆಗೆ ರೋಜರ್ ಬಿನ್ನಿ ಅವರು ಬಿಸಿಸಿಐ ಅಧ್ಯಕ್ಷರಾಗಿದ್ದರು. ಅವರು ಕಾರ್ಯಕ್ಷಮತೆ ಮತ್ತು ನಾವೀನ್ಯತೆಯೊಂದಿಗೆ ಬಿಸಿಸಿಐಅನ್ನು ಮುನ್ನಡೆಸಿದ್ದರು. ಅವರ ನಿವೃತ್ತಿಯಿಂದ ತೆರವಾದ ಸ್ಥಾನಕ್ಕೆ ಮಿಥುನ್ ಅವರು ಆಯ್ಕೆಯಾಗಿದ್ದಾರೆ. ಅವರ ಜೊತೆಗೆ, ರಾಜೀವ್ ಶುಕ್ಲಾ ಅವರನ್ನು ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕರ್ನಾಟಕದ ಮಾಜಿ ಕ್ರಿಕೆಟಿಗ ರಘುರಾಮ್ ಭಟ್‌ ಅವರು ಖಜಾಂಚಿಯಾಗಿ ನೇಮಕಗೊಂಡಿದ್ದಾರೆ. ಅವರಿಗೆ ಬಿಸಿಸಿಐನ ಆರ್ಥಿಕ ಜವಾಬ್ದಾರಿಗಳನ್ನು ವಹಿಸಲಾಗಿದೆ. ಪ್ರಭತೇಜ್ ಭಾಟಿಯಾ ಜಂಟಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಮಿಥುನ್ ಅವರು ಈ ಹಿಂದೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್‌ನ ಕ್ರಿಕೆಟ್ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಮಿಥುನ್ ಮನ್ಹಾಸ್ ಯಾರು?

1979ರ ಅಕ್ಟೋಬರ್ 12ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಜನಿಸಿದ ಮಿಥುನ್ ಮನ್ಹಾಸ್ ಅವರು ಭಾರತೀಯ ಕ್ರಿಕೆಟ್‌ ತಂಡದ ಜೆರ್ಸಿಯನ್ನು ಎಂದಿಗೂ ಧರಿಸಲಿಲ್ಲ. ಆದಾಗ್ಯೂ, ಅವರು ಭಾರತೀಯ ದೇಶೀಯ ಕ್ರಿಕೆಟ್‌ನ ಪ್ರಮುಖ ವ್ಯಕ್ತಿಯಾಗಿ ಬೆಳೆದವರು. ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ಮಿಥುನ್, ಬಲಗೈ ಬ್ಯಾಟ್ಸ್‌ಮನ್ ಆಗಿದ್ದರು. ಸಾಂದರ್ಭಿಕವಾಗಿ ಆಫ್-ಸ್ಪಿನ್ ಬೌಲಿಂಗ್ ಮಾಡಬಲ್ಲವರು. ಅಗತ್ಯವಿದ್ದಾಗ ವಿಕೆಟ್ ಕೀಪರ್ ಆಗಿಯೂ ಕ್ರೀಡಾಂಗಣಕ್ಕೆ ಇಳಿಯುತ್ತಿದ್ದವರು.

ಮಿಥುನ್ ಅವರು ರಣಜಿಯಲ್ಲಿ ದೆಹಲಿ ತಂಡವನ್ನು ಮುನ್ನಡೆಸುತ್ತಿದ್ದರು. ಗಮನಾರ್ಹವಾಗಿ, ವಿರಾಟ್ ಕೊಹ್ಲಿ ಕ್ರಿಕೆಟ್‌ ಅಂಗಳಕ್ಕೆ ಪಾದಾರ್ಪಣೆ ಮಾಡಿದಾಗ, ಮಿಥುನ್ ದೆಹಲಿ ತಂಡದ ನಾಯಕನಾಗಿದ್ದರು.

ಈ ಲೇಖನ ಓದಿದ್ದೀರಾ?: ಬೌದ್ಧರು, ಮುಸ್ಲಿಮರನ್ನು ಒಂದು ಮಾಡಿದೆ ಅಸ್ಮಿತೆಯ ಹೋರಾಟ: ಬಿಜೆಪಿ ಕುತಂತ್ರಕ್ಕಿಲ್ಲ ಆಸ್ಪದ

18 ವರ್ಷಗಳ ಕ್ರಿಕೆಟ್‌ ವೃತ್ತಿ ಜೀವನದಲ್ಲಿ ಮಿಥುನ್ 157 ಪಂದ್ಯಗಳಲ್ಲಿ ಆಡಿದ್ದಾರೆ. ಸರಾಸರಿ 46 ರನ್‌ ರೇಟ್‌ನೊಂದಿಗೆ 9,714 ರನ್ ಗಳಿಸಿದ್ದಾರೆ. ಅವರು 2007-08ರಲ್ಲಿ 27 ಶತಕಗಳು ಮತ್ತು 49 ಅರ್ಧಶತಕಗಳನ್ನು ಗಳಿಸಿದ್ದರು. ಆ ವರ್ಷ, ರಣಜಿ ಟ್ರೋಪಿಯಲ್ಲಿ ದೆಹಲಿ ತಂಡ ವಿಜಯ ಸಾಧಿಸುವಲ್ಲಿ ಬಹುಮುಖ್ಯ ಕೊಡುಗೆ ನೀಡಿದ್ದರು. ಆ ಟೂರ್ನಿಯಲ್ಲಿ ಅವರು 921 ರನ್‌ಗಳನ್ನು ಗಳಿಸಿದ್ದರು.

ಮಿಥುನ್ ಮನ್ಹಾಸ್ ಅವರು ಐಪಿಎಲ್‌ನಲ್ಲಿ ಹಲವು ತಂಡಗಳಲ್ಲಿ ಆಟವಾಡಿದ್ದಾರೆ. ಅವರು 2008 ರಿಂದ 2010 ರವರೆಗೆ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಭಾಗವಾಗಿದ್ದರು. ಬಳಿಕ, ಪುಣೆ ವಾರಿಯರ್ಸ್‌ ತಂಡ ಸೇರಿದ ಮಿಥುನ್, 2011ರಿಂದ 2013ರವರೆಗೆ ತಂಡದ ಭಾಗವಾಗಿದ್ದರು. 2014 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್‌ ತಂಡ ಸೇರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ಸಿಎಂಆರ್‌ಎಲ್ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಹೈಕೋರ್ಟ್ ಸೂಚನೆ

ಬಹುಚರ್ಚಿತ ₹1.72 ಕೋಟಿ ಮೊತ್ತದ ಸಿಎಂಆರ್‌ಎಲ್-ಎಕ್ಸಾಲಾಜಿಕ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ...