ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಯುಪಿಎಸ್‌ಸಿ ಅಧ್ಯಕ್ಷರಾಗಿ ನೇಮಕ

Date:

ಮಾಜಿ ರಕ್ಷಣಾ ಕಾರ್ಯದರ್ಶಿ ಅಜಯ್ ಕುಮಾರ್ ಅವರನ್ನು ಯುಪಿಎಸ್‌ಸಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕುಮಾರ್ ಅವರ ನೇಮಕಾತಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅನುಮೋದಿಸಿದ್ದಾರೆ.

- Advertisement -

ಏಪ್ರಿಲ್ 29ರಂದು ಪ್ರೀತಿ ಸೂದನ್ ಅವರ ಅಧಿಕಾರಾವಧಿ ಪೂರ್ಣಗೊಂಡ ನಂತರ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಅಧ್ಯಕ್ಷರ ಹುದ್ದೆ ಖಾಲಿಯಾಗಿತ್ತು. ಇದೀಗ ಅಜಯ್ ಕುಮಾರ್ ಯುಪಿಎಸ್‌ಸಿ ಅಧ್ಯಕ್ಷರಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಯುಪಿಎಸ್‌ಸಿ ಅಧ್ಯಕ್ಷೆಯಾಗಿ ಮಾಜಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ಪ್ರೀತಿ ಸೂದನ್ ನೇಮಕ

1985ರ ಬ್ಯಾಚ್‌ನ ನಿವೃತ್ತ ಐಎಎಸ್ ಅಧಿಕಾರಿಯಾಗಿರುವ ಕುಮಾರ್ ಅವರ ಸೇವಾ ದಾಖಲೆಗಳ ಪ್ರಕಾರ, 2019ರ ಆಗಸ್ಟ್ 23ರಿಂದ 2022ರ ಅಕ್ಟೋಬರ್ 31ರವರೆಗೆ ರಕ್ಷಣಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ಐಎಎಸ್, ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಸೇರಿದಂತೆ ಇತರ ಹುದ್ದೆಗಳಿಗೆ ಅಧಿಕಾರಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವಾ ಪರೀಕ್ಷೆಗಳನ್ನು ಯುಪಿಎಸ್‌ಸಿ ನಡೆಸುತ್ತದೆ.

ಇದರ ಅಧ್ಯಕ್ಷತೆಯನ್ನು ಈಗ ಕುಮಾರ್ ವಹಿಸಿಕೊಳ್ಳಲಿದ್ದಾರೆ. ಸಮಿತಿ ಗರಿಷ್ಠ 10 ಸದಸ್ಯರನ್ನು ಹೊಂದಿರಬಹುದಾಗಿದೆ. ಪ್ರಸ್ತುತ, ಆಯೋಗದಲ್ಲಿ ಇಬ್ಬರು ಸದಸ್ಯರ ಹುದ್ದೆಗಳು ಖಾಲಿ ಇವೆ. ಯುಪಿಎಸ್‌ಸಿ ಅಧ್ಯಕ್ಷರನ್ನು ಆರು ವರ್ಷಗಳ ಅವಧಿಗೆ ಅಥವಾ 65 ವರ್ಷ ವಯಸ್ಸಾಗುವವರೆಗೆ ನೇಮಿಸಲಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಕಾಂಗ್ರೆಸ್‌ಗೆ ಫಲ ನೀಡುವುದೇ ಬ್ರಾಹ್ಮಣ-ಮುಸ್ಲಿಂ ಸಮೀಕರಣ

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷದ ಫೆಬ್ರವರಿ-ಮಾರ್ಚ್‌ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ...

ಕಗ್ಗತ್ತಲು, ಅಪರಾಧಗಳ ತಾಣವಾಯ್ತಾ ದೆಹಲಿಯ ಪಾರ್ಕ್‌ಗಳು; 736ರ ಪೈಕಿ 16 ಉದ್ಯಾನಗಳಲ್ಲಷ್ಟೇ ಸಿಸಿಟಿವಿ ಕಣ್ಗಾವಲು!

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ...

ಗ್ಯಾನೇಶ್ ರಾಜೀನಾಮೆ ನೀಡದಿದ್ದರೆ ಅ. 10ರಂದು ದೆಹಲಿ ಚಲೋ: ಸಿಜೆಪಿಯ ಅಭಿಜೀತ್ ದೀಪ್ಕೆ ಎಚ್ಚರಿಕೆ

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಚುನಾವಣಾ ಅಕ್ರಮಗಳನ್ನು ಖಂಡಿಸಿ...