ದೆಹಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ವಿಂದರ್ ಸಿಂಗ್ ಲವ್ಲಿ ಅವರು ಇಂದು ಕೆಲವು ನಾಯಕರೊಂದಿಗೆ ಬಿಜೆಪಿಗೆ ಸೇರ್ಪಡೆಯಾದರು. ಕೇಸರಿ ಪಕ್ಷಕ್ಕೆ ಸೇರ್ಪಡೆಯಾದವರಲ್ಲಿ ಮಾಜಿ ಸಚಿವ ರಾಜ್ ಕುಮಾರ್ ಚೌಹಾಣ್ ಹಾಗೂ ಮಾಜಿ ಶಾಸಕರಾದ ನೀರಜ್ ಬಸೋಯಾ ಹಾಗೂ ನಸೀಬ್ ಸಿಂಗ್ ಕೂಡ ಸೇರಿದ್ದಾರೆ.
ದೆಹಲಿ ಲೋಕಸಭಾ ಚುನಾವಣೆಯಲ್ಲಿ ಎಎಪಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿದ ಈ ನಾಯಕರು ಕೇಂದ್ರ ಸಚಿವ ಹರ್‌ದೀಪ್ ಸಿಂಗ್ ಪೂರಿ ಹಾಗೂ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಕಮಲ ಪಕ್ಷವನ್ನು ಹೊಗಳಿದ ಅರ್ವಿಂದರ್ ಸಿಂಗ್ ಲವ್ಲಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅತೀ ಹೆಚ್ಚು ಬಹುಮತದಿಂದ ಪುನಃ ಅಧಿಕಾರಕ್ಕೆ ಬರುತ್ತಾರೆ ಎಂದು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಯನ್ನಾಗಿಸಿದ ಹಾಸನಕ್ಕೆ ಗೌಡರು ಕೊಟ್ಟ ಉಜ್ವಲ ಕೊಡುಗೆ ಈ ಪ್ರಜ್ವಲ
ಎಎಪಿಯೊಂದಿಗಿನ ಮೈತ್ರಿಯನ್ನು ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ರಾಷ್ಟ್ರ ರಾಜಧಾನಿಯಲ್ಲಿ ಕನ್ಹಯ್ಯ ಕುಮಾರ್ ಹಾಗೂ ಉದಿತ್ ರಾಜ್ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿ ಪಕ್ಷದಿಂದ ಹೊರಬಂದಿದ್ದರು.
ಅರ್ವಿಂದರ್ ಸಿಂಗ್ ಲವ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವುದು ಇದು ಎರಡನೇ ಬಾರಿಯಾಗಿದೆ. 2017ಕ್ಕೂ ಮುನ್ನ ಕೆಲ ಕಾಲ ಬಿಜೆಪಿಯಲ್ಲಿದ್ದ ಲವ್ಲಿ 2018ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.
