ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಶನಿವಾರದಂದು ಈ ಕುರಿತು ಅಧಿಕೃತ ಗೆಜೆಟ್ ಅಧಿಸೂಚನೆ ಹೊರಡಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, ಹಿರಿಯ ವಕೀಲ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ
ಸಂವಿಧಾನದ 80(1)(ಎ) ವಿಧಿಯಡಿಯಲ್ಲಿ ನೀಡಲಾದ ವಿಶೇಷ ಅಧಿಕಾರದನ್ವಯ ದ್ರೌಪದಿ ಮುರ್ಮು ಅವರು ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ.
ಉಜ್ವಲ್ ನಿಕಮ್ ಖ್ಯಾತ ವಕೀಲರಾಗಿದ್ದು, ಮುಂಬೈ ಭಯೋತ್ಪಾದಕ ದಾಳಿ ಸೇರಿದಂತೆ ಉನ್ನತ ಕ್ರಿಮಿನಲ್ ಪ್ರಕರಣಗಳಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿ ಕಾರ್ಯನಿರ್ವಹಿಸಿದ್ದರು.
