ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ಭಾಗಿಯಾದ ಹರಿಯಾಣದ ಮಾಜಿ ಸಿಎಂ ಭೂಪಿಂದರ್ ಸಿಂಗ್ ಹೂಡಾ

Date:

Advertisements
  • ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನಾ ನಿರತರೊಂದಿಗೆ ಭಾಗಿಯಾದ ಭೂಪಿಂದರ್ ಸಿಂಗ್ ಹೂಡಾ
  • ಬ್ರಿಜ್ ಭೂಷಣ್ ವಿರುದ್ಧ ದೂರು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ ಎಂದು ಪ್ರತಿಭಟನಾ ನಿರತರ ಆರೋಪ

ಹರಿಯಾಣದ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಕಾಂಗ್ರೆಸ್ ನಾಯಕ ಉದಿತ್ ರಾಜ್ ಸೇರಿದಂತೆ ಹಲವು ಪ್ರಮುಖರು ಮಂಗಳವಾರ ದೆಹಲಿಯ ಜಂತರ್ ಮಂತರ್‌ಗೆ ಭೇಟಿ ನೀಡಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಬೆಂಬಲ ನೀಡಿದರು.

ಮಹಿಳಾ ಕುಸ್ತಿಪಟುಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ಇತರ ಕೋಚ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಭಾರತೀಯ ಕುಸ್ತಿಪಟುಗಳಾದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಸೋಮವಾರ(ಏಪ್ರಿಲ್ 24) ಟ್ವೀಟ್ ಮಾಡಿರುವ ಭೂಪಿಂದರ್ ಸಿಂಗ್ ಹೂಡಾ, “ದೇಶಕ್ಕೆ ಕೀರ್ತಿ ತಂದ ಅಂತರರಾಷ್ಟ್ರೀಯ ಮಟ್ಟದ ಆಟಗಾರರು ಧರಣಿ ಕುಳಿತಿರುವುದು ವಿಷಾದದ ಸಂಗತಿ. ಅವರಿಗೆ ನ್ಯಾಯ ಸಿಗಬೇಕು. ನಾನು ಕೂಡ ದೆಹಲಿಯ ಜಂತರ್ ಮಂತರ್‌ನಲ್ಲಿರುವ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತೇನೆ” ಎಂದು ತಿಳಿಸಿದ್ದರು.

ಸುದ್ದಿ ಸಂಸ್ಥೆಯೊಂದು ಪೋಸ್ಟ್ ಮಾಡಿದ ವಿಡಿಯೋದಲ್ಲಿ, ಹೂಡಾ ಸೇರಿದಂತೆ ಹಲವು ಕುಸ್ತಿಪಟುಗಳನ್ನು ಕಾಣಬಹುದು.

ಮಂಗಳವಾರ (ಏಪ್ರಿಲ್ 25) ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ಹಂಗಾಮಿ ಅಧ್ಯಕ್ಷೆ ನೆಟ್ಟಾ ಡಿಸೋಜಾ ಅವರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಕಣ್ಣೀರು ಹಾಕುತ್ತಿರುವ ಕುಸ್ತಿಪಟು ಸಾಕ್ಷಿ ಮಲಿಕ್ ಅವರೊಂದಿಗೆ ಮಾತನಾಡಿರುವ ದೃಶ್ಯಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಳ್ಳಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸೋಜಾ, “ದೇಶದ ಕೀರ್ತಿಯನ್ನು ಎತ್ತಿ ಹಿಡಿದ ಈ ಹೆಣ್ಣು ಮಕ್ಕಳಿಗೆ ಅನ್ಯಾಯವಾಗಿದೆ. ಮಹಿಳಾ ಸುರಕ್ಷತೆಯ ಬಗ್ಗೆ ದೊಡ್ಡ ಕಥೆಗಳನ್ನು ಹೇಳುವ ಪ್ರಧಾನಿ ಮತ್ತು ಅವರ ಕೂಟ ಲೈಂಗಿಕ ದೌರ್ಜನ್ಯವೆಸಗಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಉಳಿಸಲು ಮೌನವಾಗಿ ಕುಳಿತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿಜೆಪಿ, ಕಾಂಗ್ರೆಸ್, ಆಮ್ ಆದ್ಮಿ ಪಕ್ಷ ಅಥವಾ ಇನ್ನಾವುದೇ ಪಕ್ಷವಿರಲಿ ಎಲ್ಲ ಪಕ್ಷಗಳಿಗೂ ಸ್ವಾಗತವಿದೆ. ನಾವು ಪದಕವನ್ನು ಗೆದ್ದಾಗ, ನಾವು ಯಾವುದೇ ಪಕ್ಷದ ಧ್ವಜವನ್ನು ಹಿಡಿಯದೆ ಭಾರತೀಯ ಧ್ವಜವನ್ನು ಮಾತ್ರ ಹಿಡಿಯುತ್ತೇವೆ. ನಾವು ಕೇವಲ ಒಂದು ಪಕ್ಷದೊಂದಿಗೆ ಮಾತ್ರ ಸಂಬಂಧ ಹೊಂದಿಲ್ಲ. ನಾವು ದೇಶದ ಮಹಿಳೆಯರಿಗಾಗಿ ಹೋರಾಡದಿದ್ದರೆ, ಮತ್ಯಾವುದರ ವಿರುದ್ಧವೂ ಹೋರಾಡಲು ಸಾಧ್ಯವಿಲ್ಲ” ಎಂದು ಬಜರಂಗ್ ಪೂನಿಯಾ ಸೋಮವಾರ ಜಂತರ್ ಮಂತರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

“ಬ್ರಿಜ್ ಭೂಷಣ್ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಏಳು ಮಹಿಳೆಯರಿಗೆ ತಮ್ಮ ದೂರನ್ನು ಹಿಂಪಡೆಯುವಂತೆ ಒತ್ತಾಯಿಸಲಾಗುತ್ತಿದೆ. ಡಬ್ಲ್ಯುಎಫ್‌ಐನ ಹಲವಾರು ಸದಸ್ಯರು ದೂರುದಾರ ಕುಸ್ತಿಪಟುಗಳನ್ನು ಸಂಪರ್ಕಿಸಲಾಗಿದೆ” ಎಂದು ಪುನಿಯಾ ಆರೋಪಿಸಿದ್ದಾರೆ.

ಜನವರಿಯಲ್ಲಿ ಡಬ್ಲ್ಯುಎಫ್‌ಐ ಅಧ್ಯಕ್ಷರು ಮತ್ತು ಇತರ ತರಬೇತುದಾರರ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಹೊರಿಸಿ ಮಹಿಳಾ ಕುಸ್ತಿಪಟುಗಳು ಪ್ರತಿಭಟನೆ ನಡೆಸಿದ ಮೂರು ತಿಂಗಳ ನಂತರ ಪುನಃ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

Download Eedina App Android / iOS

X