2027ರ ಯುಪಿ ಚುನಾವಣೆಗೆ ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್ ಸಜ್ಜು; ʼಜನ ನೀತಿ ಭಾರತ್ʼ ಹೊಸ ಪಕ್ಷ ಘೋಷಣೆ

Date:

ಮಾಜಿ ಐಎಎಸ್ ಅಧಿಕಾರಿ ದಿವ್ಯಾ ಮಿತ್ತಲ್, ‘ಜನ ನೀತಿ ಭಾರತ್’ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದು, 2027ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಜನರೇ ಆಡಳಿತ ನೀತಿಗಳ ಕೇಂದ್ರಬಿಂದುವಾಗಿರಬೇಕು ಎಂಬ ಆಶಯದೊಂದಿಗೆ ಪಕ್ಷವನ್ನು ಆರಂಭಿಸಿರುವುದಾಗಿ ಅವರು ಹೇಳಿದ್ದಾರೆ.

- Advertisement -

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ದಿವ್ಯಾ ಮಿತ್ತಲ್, ತಮ್ಮ ಪಕ್ಷವು ಜನರ ಸಮಸ್ಯೆಗಳನ್ನು ಪ್ರಮುಖವಾಗಿ ಪ್ರಸ್ತಾಪಿಸುವುದರ ಜೊತೆಗೆ ಅವುಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಿದೆ. ಜನರಿಗಾಗಿ ಮೂರು ಪ್ರಮುಖ ಭರವಸೆಗಳನ್ನು ನೀಡುವುದಾಗಿ ಹೇಳಿದ್ದಾರೆ. “ರಾಜಕೀಯವು ನಿಮ್ಮ ಮೇಲೆ ಅಧಿಕಾರ ಚಲಾಯಿಸುತ್ತದೆ. ಆದರೆ ಜನ ನೀತಿಯಲ್ಲಿ ನೀವೇ ಅಧಿಕಾರ ಚಲಾಯಿಸುವವರು. ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು ಮತ್ತು ಅವರ ಅಭಿಪ್ರಾಯಗಳಿಗೆ ಆಡಳಿತದಲ್ಲಿ ಮಹತ್ವ ನೀಡುವುದು ಪಕ್ಷದ ಉದ್ದೇಶ” ಎಂದು ಅವರು ವಿಡಿಯೋದಲ್ಲಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಸುಮಾರು ಒಂದು ತಿಂಗಳ ಹಿಂದೆ ಸ್ವಯಂ ನಿವೃತ್ತಿ ಪಡೆದು ರಾಜಕೀಯ ಪ್ರವೇಶಿಸುವುದಾಗಿ ಘೋಷಿಸಿದ್ದ ದಿವ್ಯಾ ಮಿತ್ತಲ್, ಆಗಲೇ ಅಧಿಕಾರದ ಕೇಂದ್ರಗಳಿಗೆ ತಲುಪದ ಜನರ ಸಮಸ್ಯೆಗಳಿಗೆ ಧ್ವನಿಯಾಗಲು ಬಯಸುವುದಾಗಿ ಹೇಳಿದ್ದರು. ಯಾವುದೇ ರಾಜಕೀಯ ಪಕ್ಷದ ಚಿಹ್ನೆಯಡಿ ಸ್ಪರ್ಧಿಸುವುದಿಲ್ಲ. ಜನರ ಬೆಂಬಲದೊಂದಿಗೆ ರಾಜಕೀಯ ಪ್ರವೇಶಿಸುವುದಾಗಿ ಅವರು ತಿಳಿಸಿದ್ದರು. ಇದೀಗ ಸ್ವಂತ ಪಕ್ಷ ಸ್ಥಾಪಿಸುವ ಮೂಲಕ ತಮ್ಮ ಮುಂದಿನ ರಾಜಕೀಯ ಹೆಜ್ಜೆಯನ್ನು ಪ್ರಕಟಿಸಿದ್ದಾರೆ.

2013ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ದಿವ್ಯಾ ಮಿತ್ತಲ್, ರಾಜೀನಾಮೆ ನೀಡಿದ ಬಳಿಕ ಮುಂದೇನು ಮಾಡಬೇಕು ಎಂಬುದರ ಕುರಿತು ಯೋಚಿಸಲು ಸಮಯ ತೆಗೆದುಕೊಂಡಿದ್ದಾಗಿ ಹೇಳಿದ್ದಾರೆ. “ನಾನು ಐಎಎಸ್‌ಗೆ ರಾಜೀನಾಮೆ ನೀಡಿ ಹಲವು ಪ್ರಶ್ನೆಗಳನ್ನು ಹಾಗೆಯೇ ಬಿಟ್ಟು ಬಂದಿದ್ದೆ. ಇದು ದೊಡ್ಡ ಜವಾಬ್ದಾರಿ. ಅದಕ್ಕಾಗಿ ಧೈರ್ಯ ಸಂಗ್ರಹಿಸುತ್ತಿದ್ದೆ. ಇಂದು ಆ ಪ್ರಶ್ನೆಗಳಿಗೆ ಉತ್ತರ ನೀಡಲು ಬಂದಿದ್ದೇನೆ. ಮುಂದೇನು ಎಂಬ ಪ್ರಶ್ನೆಗೆ ಉತ್ತರ ರಾಜಕೀಯ” ಎಂದು ಅವರು ಹೇಳಿದ್ದಾರೆ.

ದಿವ್ಯಾ ಮಿತ್ತಲ್ ಅವರು ಐಐಟಿ ದೆಹಲಿಯ ಹಳೆಯ ವಿದ್ಯಾರ್ಥಿನಿಯಾಗಿದ್ದು, ಬೆಂಗಳೂರಿನ ಭಾರತೀಯ ನಿರ್ವಹಣಾ ಸಂಸ್ಥೆ (IIM)ಯಿಂದ ಎಂಬಿಎ ಪದವಿಯನ್ನೂ ಪಡೆದಿದ್ದಾರೆ. ನಾಗರಿಕ ಸೇವೆಗೆ ಸೇರುವ ಮೊದಲು ಲಂಡನ್‌ನಲ್ಲಿ ವಿದೇಶಿ ಹಣಕಾಸು ಮಾರುಕಟ್ಟೆಗೆ ಸಂಬಂಧಿಸಿದ ‘ಎಕ್ಸಾಟಿಕ್ ಡೆರಿವೇಟಿವ್ಸ್ ಟ್ರೇಡರ್’ ಆಗಿ ಕೆಲಸ ಮಾಡಿದ್ದರು. ಐಎಎಸ್ ಅಧಿಕಾರಿಯಾಗಿ ತಮ್ಮ ವೃತ್ತಿಜೀವನದಲ್ಲಿ ಅವರು ಸಂತ ಕಬೀರ್ ನಗರ ಮತ್ತು ಮಿರ್ಜಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಗೋಂಡಾದ ಮುಖ್ಯ ಅಭಿವೃದ್ಧಿ ಅಧಿಕಾರಿ, ಉತ್ತರ ಪ್ರದೇಶ ರಾಜ್ಯ ಕೈಗಾರಿಕಾ ಅಭಿವೃದ್ಧಿ ಪ್ರಾಧಿಕಾರದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಬರೇಲಿ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷೆ ಸೇರಿದಂತೆ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದಾರೆ. ಮಿರ್ಜಾಪುರ ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಕೈಗೊಂಡ ಕೆಲಸಗಳಿಂದ ಅವರು ಸಾರ್ವಜನಿಕ ಗಮನ ಸೆಳೆದಿದ್ದರು. ವಿಶೇಷವಾಗಿ, ಬೆಟ್ಟದ ಮೇಲಿರುವ ಲಹುರಿಯಾ ದಹ್ ಗ್ರಾಮದಲ್ಲಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವ ಪ್ರಯತ್ನಗಳು ಅವರ ಸೇವಾವಧಿಯಲ್ಲಿ ಗಮನಾರ್ಹವಾಗಿದ್ದವು.

2023ರ ಸೆಪ್ಟೆಂಬರ್‌ನಲ್ಲಿ ಅವರನ್ನು ಮಿರ್ಜಾಪುರದಿಂದ ವರ್ಗಾವಣೆ ಮಾಡಲಾಗಿತ್ತು. ಬಳಿಕ 2024ರ ಫೆಬ್ರವರಿಯಲ್ಲಿ ಉತ್ತರ ಪ್ರದೇಶ ಗ್ರಾಮೀಣ ರಸ್ತೆ ಅಭಿವೃದ್ಧಿ ಏಜೆನ್ಸಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕಗೊಂಡಿದ್ದರು. 42 ವರ್ಷದ ದಿವ್ಯಾ ಮಿತ್ತಲ್ ಅವರು ಆಗಸ್ಟ್ 31ರಂದು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಅವರ ರಾಜೀನಾಮೆಯನ್ನು ಶೀಘ್ರದಲ್ಲೇ ಅಂಗೀಕರಿಸಲಾಯಿತು.

ಇದನ್ನೂ ಓದಿ: 2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ತಮ್ಮ ಆಡಳಿತಾತ್ಮಕ ಅನುಭವದಲ್ಲಿ ಕಂಡ ಹಲವು ಸಮಸ್ಯೆಗಳು ರಾಜಕೀಯ ಪ್ರವೇಶಿಸುವ ನಿರ್ಧಾರಕ್ಕೆ ಕಾರಣವಾಗಿವೆ. ಮಂಜೂರಾದರೂ ನಿರ್ಮಾಣವಾಗದ ಶಾಲೆಗಳು, ಗುತ್ತಿಗೆ ಅಥವಾ ಲೀಸ್‌ಗೆ ನೀಡಿದರೂ ಸಂಬಂಧಪಟ್ಟವರಿಗೆ ಹಸ್ತಾಂತರವಾಗದ ಜಮೀನು, ಜೀವಹಾನಿಗೆ ಕಾರಣವಾಗುವ ಹದಗೆಟ್ಟ ರಸ್ತೆಗಳು ಮತ್ತು ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯಿಂದ ಭವಿಷ್ಯದ ಬಗ್ಗೆ ಆತಂಕಕ್ಕೊಳಗಾದ ವಿದ್ಯಾರ್ಥಿಗಳ ಸಮಸ್ಯೆಗಳೇ ತಮ್ಮನ್ನು ರಾಜಕೀಯದತ್ತ ಮುಖ ಮಾಡುವಂತೆ ಪ್ರೇರೇಪಿಸಿವೆ ಎಂದು ಹೇಳಿಕೊಂಡಿದ್ದಾರೆ.

ಮಿರ್ಜಾಪುರದ ಜಿಲ್ಲಾಧಿಕಾರಿಯಾಗಿದ್ದಾಗ ಲಹುರಿಯಾ ದಹ್ ಗ್ರಾಮಕ್ಕೆ ಭೇಟಿ ನೀಡಿದ ಘಟನೆಯನ್ನು ಅವರು ನೆನಪಿಸಿಕೊಂಡಿದ್ದಾರೆ. ಅಲ್ಲಿ ಮಹಿಳೆಯೊಬ್ಬರು ಪಿಂಚಣಿ ಅಥವಾ ಮನೆಗಾಗಿ ಮನವಿ ಮಾಡಬಹುದು ಎಂದು ಭಾವಿಸಿದ್ದೆ. ಆದರೆ, ಆ ಮಹಿಳೆಯ ಮನೆಗೆ ಕುಡಿಯುವ ನೀರಿನ ಸಂಪರ್ಕವೇ ಇಲ್ಲದಿದ್ದರೂ, ತಮ್ಮ ಗ್ರಾಮಕ್ಕೆ ಶಾಲೆ ಬೇಕೆಂದು ಕೇಳಿದ್ದರು. ಆ ಮಹಿಳೆಯ ಮನವಿಯ ಮೇರೆಗೆ ಶಾಲೆಗೆ ಅನುಮೋದನೆ ನೀಡಿದ್ದರೂ, ಮೂರು ವರ್ಷಗಳಾದರೂ ಅದರ ನಿರ್ಮಾಣ ಕಾರ್ಯ ಆರಂಭವಾಗಿರಲಿಲ್ಲ. ಯಾವುದು ಲಭ್ಯವಿರಲಿಲ್ಲ ಎಂದು ಹೇಳಿ? ಹಣವಿರಲಿಲ್ಲವೇ, ನಿಯಮಗಳಿರಲಿಲ್ಲವೇ ಅಥವಾ ಅನುಮೋದನೆಗಳು ಸಿಕ್ಕಿರಲಿಲ್ಲವೇ? ಎಲ್ಲವೂ ಲಭ್ಯವಿದ್ದವು. ಆದರೆ, ಕೆಲಸ ಮಾಡುವ ಉದ್ದೇಶ ಇರಲಿಲ್ಲ. ಇಂತಹ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳಬೇಕು ಮತ್ತು ಕಾಗದದಲ್ಲಷ್ಟೇ ಉಳಿಯುವ ಯೋಜನೆಗಳ ಬಗ್ಗೆ ಹೊಣೆಗಾರಿಕೆ ನಿಗದಿಯಾಗಬೇಕು ಎಂಬ ಆಶಯವನ್ನು ಅವರು ವ್ಯಕ್ತಪಡಿಸಿದ್ದಾರೆ.

ದಿವ್ಯಾ ಮಿತ್ತಲ್‌ ಅವರ ರಾಜಕೀಯ ಪ್ರವೇಶದ ಹಿಂದೆ ಹಲವು ಕಾರಣಗಳಿವೆ. ತಮ್ಮದೇ ಆದ ‘ಜನ ನೀತಿ ಭಾರತ್‌’ ಪಕ್ಷವನ್ನು ಸ್ಥಾಪಿಸಿ 2027ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವ ಅವರ ಮುಂದಿನ ರಾಜಕೀಯ ನಡೆ, ಪಕ್ಷದ ಕಾರ್ಯಸೂಚಿ ಮತ್ತು ಚುನಾವಣಾ ಫಲಿತಾಂಶಗಳು ಮುಂದಿನ ದಿನಗಳಲ್ಲಿ ಸ್ಪಷ್ಟತೆ ನೀಡಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ ದೇಸೀ ತಳಿಗಳನ್ನು ಉಳಿಸಲು ಬದುಕನ್ನೇ ಮುಡಿಪಿಟ್ಟ ‘ಬೀಜಗಳ ಕಾವಲುಗಾರ’!

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...