ಭಾರತದ ಮಾಜಿ ಕ್ರಿಕೆಟಿಗ, ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ ನಿಧನ

Date:

Advertisements

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಸ್ಪಿನ್ ಬೌಲರ್ ಬಿಷನ್ ಸಿಂಗ್ ಬೇಡಿ ಅವರು ತಮ್ಮ 77ನೇ ವಯಸ್ಸಿನಲ್ಲಿ ಅಕ್ಟೋಬರ್ 23ರಂದು ನಿಧನರಾಗಿದ್ದಾರೆ. ಪತ್ನಿ ಅಂಜು, ಪುತ್ರ ಅಂಗದ್ ಮತ್ತು ಪುತ್ರಿ ನೇಹಾರನ್ನು ಅಗಲಿದ್ದಾರೆ.

1967 ರಿಂದ 1979ರ ಭಾರತ ತಂಡವನ್ನು ಪ್ರತಿನಿಧಿಸಿದ್ದ ಈ ಲೆಜೆಂಡರಿ ಸ್ಪಿನ್ನರ್, 67 ಟೆಸ್ಟ್, 10 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದರು. ಅವರು ಕ್ರಮವಾಗಿ 266 ವಿಕೆಟ್, 7 ವಿಕೆಟ್ ಪಡೆದಿದ್ದಾರೆ. ಅವರು ತಮ್ಮ 12 ವರ್ಷಗಳ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ 10 ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಪಡೆದರು.

ಬೇಡಿ, ಎರಪಳ್ಳಿ ಪ್ರಸನ್ನ, ಬಿಎಸ್ ಚಂದ್ರಶೇಖರ್ ಮತ್ತು ಎಸ್. ವೆಂಕಟರಾಘವನ್ ಅವರೊಂದಿಗೆ ಭಾರತೀಯ ಸ್ಪಿನ್ ಬೌಲಿಂಗ್ ಇತಿಹಾಸದಲ್ಲಿ ಒಂದು ರೀತಿಯ ಕ್ರಾಂತಿಯನ್ನೇ ಕಂಡ ಕಾಲವದು. 1975ರ ವಿಶ್ವಕಪ್ ಪಂದ್ಯದಲ್ಲಿ, ಬಿಷನ್ ಸಿಂಗ್ ಬೇಡಿ ಅವರ 12-8-6-1 ಭರ್ಜರಿ ಬೌಲಿಂಗ್ ಪೂರ್ವ ಆಫ್ರಿಕಾವನ್ನು ಕೇವಲ 120 ರನ್‌ಗಳಿಗೆ ಕಟ್ಟಿಹಾಕಿತ್ತು. ಭಾರತ ತನ್ನ ಮೊದಲ ಏಕದಿನ ಪಂದ್ಯ ಗೆಲುವಿನಲ್ಲಿ ಬಿಷನ್ ಸಿಂಗ್ ಬೇಡಿ ಪ್ರಮುಖ ಪಾತ್ರ ವಹಿಸಿದ್ದರು.

Advertisements

ಬೇಡಿ

ಸೆಪ್ಟೆಂಬರ್ 25, 1946ರಂದು ಪಂಜಾಬ್‌ನ ಅಮೃತಸರದಲ್ಲಿ ಜನಿಸಿದ ಬಿಷನ್ ಸಿಂಗ್ ಬೇಡಿ, ಅತ್ಯಂತ ನುರಿತ ಎಡಗೈ ಸಾಂಪ್ರದಾಯಿಕ ಸ್ಪಿನ್ನರ್ ಆಗಿದ್ದರು. ಅವರ ಆಕರ್ಷಕವಾದ ಬೌಲಿಂಗ್ ಶೈಲಿಯು ವಿಭಿನ್ನವಾಗಿತ್ತು. ಅವರು 1966ರಲ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಪ್ರಯಾಣವನ್ನು ಪ್ರಾರಂಭಿಸಿದರು. 1979ರವರೆಗೆ ಭಾರತ ತಂಡವನ್ನು ಪ್ರತಿನಿಧಿಸಿದರು.

ಬೇಡಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಆಚೆಗೆ, ಬೇಡಿ ವಿಶಿಷ್ಟವಾದ ದೇಶೀಯ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿದ್ದರು. ವಿಶೇಷವಾಗಿ ದೆಹಲಿ ತಂಡದೊಂದಿಗೆ. ಅವರು ಹಲವಾರು ಸ್ಪಿನ್ ಬೌಲರ್‌ಗಳಿಗೆ ಮಾರ್ಗದರ್ಶಕರಾಗಿ ಸೇವೆ ಸಲ್ಲಿಸಿದರು. ಭಾರತದಲ್ಲಿ ಯುವ ಕ್ರಿಕೆಟ್ ಪ್ರತಿಭೆಗಳನ್ನು ಪೋಷಿಸುವಲ್ಲಿ ಬೇಡಿ ಮಹತ್ವದ ಪಾತ್ರವನ್ನು ವಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಕೇವಲ 20 ದಿನದಲ್ಲಿ 1404 ಡೆಂಗ್ಯೂ ಪ್ರಕರಣ

ಆಟದಿಂದ ನಿವೃತ್ತರಾದ ನಂತರವೂ ಬೇಡಿ ಕ್ರಿಕೆಟ್ ಜಗತ್ತಿನಲ್ಲಿ ಕಮೆಂಟರಿ ಟೇಬಲ್ ಮೇಲೆ ಧ್ವನಿಯಾಗಿ ಮುಂದುವರೆದರು. ನಾನಾ ಕ್ರಿಕೆಟ್ ಸಂಬಂಧಿತ ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X