ಇ.ಡಿ ಬಂಧನ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಹೇಮಂತ್ ಸೊರೇನ್: ನಾಳೆ ವಿಚಾರಣೆ

Date:

ಇ.ಡಿ ಬಂಧನ ಪ್ರಶ್ನಿಸಿ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಪ್ರಕರಣ ಸಂಬಂಧ ಸುಪ್ರೀಂ ಮುಖ್ಯ ನ್ಯಾಯಾಧೀಶರಾದ ಡಿ ವೈ ಚಂದ್ರಚೂಡ್ ಅವರು ಕೂಡ ನಾಳೆ(ಫೆ.02) ವಿಚಾರಣೆ ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ.

ಹಿರಿಯ ನ್ಯಾಯವಾದಿಗಳಾದ ಅಭಿಷೇಕ್ ಮನು ಸಿಂಘ್ವಿ ಹಾಗೂ ಕಪಿಲ್ ಸಿಬಲ್ ಅವರು ಸೊರೇನ್ ಪರವಾಗಿ ಡಿ ವೈ ಚಂದ್ರಚೂಡ್ ಪೀಠಕ್ಕೆ ತುರ್ತು ವಿಚಾರಣೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ.

ಸೊರೇನ್ ಅವರು ಇದೇ ರೀತಿಯ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್‌ನಲ್ಲಿ ಸಾಲಿಟರ್ ಜನರಲ್ ತುಷಾರ್ ಮೆಹ್ತಾ ಪೀಠಕ್ಕೆ ತಿಳಿಸಿದರು. ಆಗ ಮಧ್ಯ ಪ್ರವೇಶಿಸಿ ಮಾತನಾಡಿದ ಸಿಬಲ್, ಹೈಕೋರ್ಟ್‌ನಿಂದ ಅರ್ಜಿ ಹಿಂಪಡೆಯುವುದಾಗಿ ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಬಲ್ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಾಧೀಶರು ಕೂಡ ಪ್ರಕರಣವನ್ನು ನಾಳೆ ವಿಚಾರಣೆ ನಡೆಸುವುದಾಗಿ ಒಪ್ಪಿಕೊಂಡರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರವಾಹಕ್ಕೆದುರು ದಶಕ ಕಾಲದ ಈಜು-  Scroll.in ಗೆ ಅಭಿನಂದನೆ!

ಅರ್ಜಿಯು ಗಂಭೀರ ಸಮಸ್ಯೆಗಳನ್ನು ಉಲ್ಲಂಘಿಸುತ್ತದೆ ಎಂದು ಸಿಬಲ್ ಪ್ರತಿಪಾದಿಸಿದರು. ಇದಕ್ಕೆ ಉತ್ತರ ನೀಡಿದ ಹೆಚ್ಚುವರಿ ಸಾಲಿಟರ್ ಜನರಲ್ ಎಸ್‌ವಿ ರಾಜು, ಸೊರೇನ್ ವಿರುದ್ಧ ಇರುವ ಆರೋಪಗಳು ಕೂಡ ತುಂಬ ಗಂಭೀರವಾದವು ಎಂದು ಹೇಳಿದರು. ಇ.ಡಿ ಬಂಧನಕ್ಕೂ ಮುನ್ನ ಹೇಮಂತ್ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಸೊರೇನ್ ರಾಜೀನಾಮೆ ನೀಡಿದ ಹಿನ್ನೆಲೆ ಜೆಎಂಎಂನ ಹಿರಿಯ ನಾಯಕರಾದ ಚಂಪಯ್ ಸೊರೇನ್ ಅವರು ಜಾರ್ಖಂಡ್‌ನ ನೂತನ ಮುಖ್ಯಮಂತ್ರಿಯಾಗಿ ಇಂದು(ಫೆ. 1) ಅಧಿಕಾರ ಸ್ವೀಕರಿಸಲಿದ್ದಾರೆ.

ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧನಕ್ಕೂ ಮುನ್ನ ತಮ್ಮ ಬೆಂಬಲಿಗರೊಂದಿಗೆ ಜ. 31ರ ಸಂಜೆ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು.

ಜಾರ್ಖಂಡ್‌ ರಾಜಧಾನಿ ರಾಂಚಿಯಲ್ಲಿ ಸೇನೆಗೆ ಸೇರಿದ ನೂರಾರು ಕೋಟಿ ರೂ. ಬೆಲೆ ಬಾಳುವ ಸುಮಾರು 7 ಎಕರೆ ಭೂಮಿಯನ್ನು ಅಕ್ರಮ ದಾಖಲೆ ಸೃಷ್ಟಿಸುವ ಮೂಲಕ ಕಬಳಿಸಿದ ಆರೋಪ ಹೇಮಂತ್ ಸೊರೇನ್‌ ಮೇಲಿದೆ. ಈ ಪ್ರಕರಣದಲ್ಲಿ ಐಎಎಸ್‌ ಅಧಿಕಾರಿ ಸೇರಿದಂತೆ 14 ಜನರನ್ನು ಇ.ಡಿ. ಈಗಾಗಲೇ ಬಂಧಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಎಪಿ ಜೊತೆ ಮೈತ್ರಿಗೆ ವಿರೋಧ : ದೆಹಲಿ ಕಾಂಗ್ರೆಸ್​ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ರಾಜೀನಾಮೆ

ಆಮ್‌ ಆದ್ಮಿ ಪಕ್ಷದೊಂದಿಗಿನ ಮೈತ್ರಿ ವಿರೋಧಿಸಿ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ...

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...