ಜೆಎಂಎಂ ಮಾಜಿ ಸಿಎಂ ಹೇಮಂತ್ ಸೊರೇನ್ ಅವರ ನಾದಿನಿ ಜೆಎಂಎಂ ಶಾಸಕಿ ಸೀತಾ ಸೊರೇನ್ ಇಂದು ಬಿಜೆಪಿಗೆ ಸೇರ್ಪಡೆಯಾದರು.
ಜೆಎಂಎಂ ಪಕ್ಷ ತ್ಯಜಿಸಿದ ಕೆಲವೇ ಗಂಟೆಗಳಲ್ಲಿ ಸೀತಾ ಸೋರೇನ್ ಬಿಜೆಪಿ ಸೇರ್ಪಡೆಗೊಂಡಿದ್ದು, ರಾಜ್ಯ ಆಡಳಿತ ಪಕ್ಷ ತಮ್ಮನ್ನು ನಿರ್ಲಕ್ಷಿಸಿ, ಪ್ರತ್ಯೇಕಗೊಳಿಸುತ್ತಿದೆ ಎಂದು ಸೀತಾ ಅವರು ಆರೋಪಿಸಿದ್ದಾರೆ.
ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಹಾಗೂ ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಲಕ್ಷ್ಮಿಕಾಂತ್ ಬಾಜ್‌ಪಾಯ್ ಅವರ ಉಪಸ್ಥಿತಿಯಲ್ಲಿ ನವದೆಹಲಿಯಲ್ಲಿ ಬಿಜೆಪಿ ಸೇರ್ಪಡೆಯಾದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೇಳುವುದು ಹಬ್ಬ, ಮಾಡುವುದು ಯುದ್ಧ, ಸಾಯುವುದು ಸೈನಿಕರು
ಮೂರು ಬಾರಿಯಿಂದ ಶಾಸಕಿಯಾಗಿರುವ ಸೀತಾ ಅವರು ಬಿಜೆಪಿ ಸೇರ್ಪಡೆಗೊಂಡಿರುವುದು ಬುಡಕಟ್ಟು ಮತಗಳನ್ನೇ ಪ್ರದಾನವಾಗಿ ನಂಬಿಕೊಂಡಿರುವ ಜೆಎಂಎಂ ಪಕ್ಷದ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.
ಕೆಲವು ದಿನಗಳ ಹಿಂದಷ್ಟೆ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜೆಎಂಎಂ ನಾಯಕ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು. ಬಂಧನವಾದ ನಂತರ ಹೇಮಂತ್ ಸೊರೇನ್ ಅವರು ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಿದ್ದರು. ನಂತರದಲ್ಲಿ ಚಂಪೈ ಸೊರೇನ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
