ರಾಮ ಮಂದಿರ ಉದ್ಘಾಟನೆಯಲ್ಲಿ ಪಾಲ್ಗೊಳ್ಳದೆ ಆಹ್ವಾನ ತಿರಸ್ಕರಿಸಿರುವ ವಿಪಕ್ಷಗಳ ನಡೆಗೆ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಟೀಕಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಪಕ್ಷದವರಿಗೆ ಅಸೂಯೆ ಉಂಟಾಗಿದೆ. ರಾಮ ಮಂದಿರ ನಿರ್ಮಾಣವಾಗುತ್ತದೆಂದು ಅವರು ಎಂದಿಗೂ ಭಾವಿಸಿರಲಿಲ್ಲ. ಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಇಡೀ ದೇಶ ಸಂಭ್ರಮದಲ್ಲಿದೆ. ವಿಪಕ್ಷದವರು ಕಷ್ಟದ ಸ್ಥಿತಿಯಲ್ಲಿದ್ದಾರೆ. ಮಂದಿರ ನಿರ್ಮಾಣಕ್ಕೆ ಅಲ್ಪಸಂಖ್ಯಾತರಾದ ಕ್ರಿಶ್ಚಿಯನ್ನರು ಸೇರಿದಂತೆ ದೇಶದ ಶೇ.82 ಹಿಂದೂಗಳು ಪ್ರತಿಭಟಿಸಲಿಲ್ಲ. ಪಾರ್ಸಿಗಳು, ಯಹೂದಿಗಳೆಲ್ಲರೂ ಬೆಂಬಲಿಸಿದ್ದಾರೆ ಎಂದರು.
ಮುಸ್ಲಿಂ ಸಮುದಾಯದಲ್ಲಿಯೂ ಕೂಡ ಬಹತೇಕರು ನಾವು ಭಾರತದಲ್ಲಿ ವಾಸಿಸಲು ಆಯ್ಕೆ ಮಾಡಿಕೊಂಡಿದ್ದೇವೆ ಎಂದು ಹೇಳುತ್ತಾರೆ. ಆದ್ದರಿಂದ ನಾವು ಇದಕ್ಕೆ ಅವಕಾಶ ಕಲ್ಪಿಸಬೇಕು. ಹೊರಗಿನಿಂದ ಹಣ ಪಡೆಯುತ್ತಿರುವ ಮತಾಂಧರು ಮಾತ್ರ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್ ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ
ಭಾರತದ ಪ್ರಮುಖ ಸ್ವಾಮೀಜಿಗಳಾದ ಶಂಕರಾಚಾರ್ಯರು, ಒರಿಸ್ಸಾದ ಗೋವರ್ಧನ ಮಠದ ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ಉತ್ತರಾಖಂಡದ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಅಯೋಧ್ಯೆಯ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗವಹಿಸಲು ನಿರಾಕರಿಸಿರುವುದನ್ನು ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.
ಶಂಕರಾಚಾರ್ಯರು ತಮ್ಮ ರಾಮ ಮಂದಿರಕ್ಕೆ ಆಹ್ವಾನದಿಂದ ಹೊರಗುಳಿಯಲು ಧಾರ್ಮಿಕ ಗ್ರಂಥಗಳನ್ನು ಉಲ್ಲೇಖಿಸಿದ್ದಾರೆ. ಅಪೂರ್ಣ ದೇವಾಲಯದಲ್ಲಿ ಪ್ರಾಣ ಪ್ರತಿಷ್ಠಾಪನಾ ಪೂಜೆಯನ್ನು ಮಾಡುವುದನ್ನು ಪ್ರಾಚೀನ ಗ್ರಂಥಗಳು ಅನುಮೋದಿಸುವುದಿಲ್ಲ ಎಂದು ತಿಳಿಸಿರುವುದನ್ನು ರಾಜ್ಯಸಭೆಯ ಮಾಜಿ ಸದಸ್ಯ ಹೇಳಿದ್ದಾರೆ.