IMFನ ಭಾರತದ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮಾಜಿ RBI ಗವರ್ನರ್ ಉರ್ಜಿತ್ ಪಟೇಲ್ ನೇಮಕ

Date:

ಅಂತರರಾಷ್ಟ್ರೀಯ ಹಣಕಾಸು ನಿಧಿಗೆ (IMF) ಭಾರತದ ಹೊಸ ಕಾರ್ಯನಿರ್ವಾಹಕ ನಿರ್ದೇಶಕರಾಗಿ (ED) ಅರ್ಥಶಾಸ್ತ್ರಜ್ಞ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಾಜಿ ಗವರ್ನರ್ ಡಾ. ಉರ್ಜಿತ್ ಪಟೇಲ್ ಅವರನ್ನು ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ.

- Advertisement -

ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಗುರುವಾರ ಹೊರಡಿಸಿದ ಅಧಿಕೃತ ಆದೇಶದ ಪ್ರಕಾರ, ಪಟೇಲ್ ಅವರು ಅಧಿಕಾರ ವಹಿಸಿಕೊಂಡ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಐಎಂಎಫ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

2022ರಿಂದ ಐಎಂಎಫ್‌ನ ಇಡಿ ಹುದ್ದೆಯಲ್ಲಿದ್ದ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಡಾ. ಕೃಷ್ಣಮೂರ್ತಿ ಸುಬ್ರಮಣಿಯನ್ ಅವರನ್ನು 2025ರ ಮೇ ತಿಂಗಳಲ್ಲಿ ತೆಗೆದುಹಾಕಲಾಗಿತ್ತು. ಇದೀಗ, ಆ ಹುದ್ದೆಗೆ ಪಟೇಲ್ ಅವರನ್ನು ನೇಮಿಸಲಾಗಿದೆ.

ಪಟೇಲ್‌ ಅವರು 2016ರಿಂದ 2018ರವರೆಗೆ ಆರ್‌ಬಿಐ ಗವರ್ನರ್‌ ಆಗಿದ್ದರು. ಸರ್ಕಾರಕ್ಕೆ ಲಾಭಾಂಶ ವರ್ಗಾವಣೆ ವಿಚಾರದಲ್ಲಿ ಆರ್‌ಬಿಐ ಮತ್ತು ಕೇಂದ್ರ ಸರ್ಕಾರದ ನಡುವಿನ ತಿಕ್ಕಾಟ ನಡೆದಾಗ, 2018ರ ಡಿಸೆಂಬರ್‌ನಲ್ಲಿ ತಮ್ಮ ಹುದ್ದೆಗೆ ಪಟೇಲ್ ಹಠಾತ್ತನೆ ರಾಜೀನಾಮೆ ನೀಡಿ, ಆರ್‌ಬಿಐನಿಂದ ಹೊರಬಂದಿದ್ದರು. ಬಳಿಕ, ಅವರು ಏಷ್ಯನ್ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್ಮೆಂಟ್ ಬ್ಯಾಂಕ್ (AIIB) ನಲ್ಲಿ ಹೂಡಿಕೆ ಕಾರ್ಯಾಚರಣೆಗಳ (ವಿಭಾಗ 1) ಉಪಾಧ್ಯಕ್ಷರಾಗಿದ್ದರು. ಅವರು 2024ರ ಜನವರಿಯಲ್ಲಿ ತಮ್ಮ ಕುಟುಂಬದಲ್ಲಿನ ಆರೋಗ್ಯ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದರು.

ಈ ಲೇಖನ ಓದಿದ್ದೀರಾ?: ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ‘ಬಾಯಲ್ಲಿ ಬೆಲ್ಲ, ಎದೆಯಲ್ಲಿ ಕತ್ತರಿ’ಯಾಗದಿರಲಿ…

1963ರಲ್ಲಿ ಜನಿಸಿದ ಪಟೇಲ್ 1998 ರಿಂದ 2001ರವರೆಗೆ ಹಣಕಾಸು ಸಚಿವಾಲಯದ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಹಣಕಾಸು ನೀತಿ, ಆರ್ಥಿಕ ನೀತಿ ಸಂಶೋಧನೆ, ಅಂಕಿಅಂಶಗಳು ಮತ್ತು ಮಾಹಿತಿ ನಿರ್ವಹಣೆ, ಠೇವಣಿ ವಿಮೆ, ಸಂವಹನ ಮತ್ತು ಮಾಹಿತಿ ಹಕ್ಕನ್ನು ನಿರ್ವಹಣೆ ಕ್ಷೇತ್ರದಲ್ಲಿ ಸರ್ಕಾರದ ಭಾಗವಾಗಿ ಸೇವೆ ಸಲ್ಲಿಸಿದ್ದಾರೆ.

ಅಲ್ಲದೆ, ರಿಲಯನ್ಸ್ ಇಂಡಸ್ಟ್ರೀಸ್, ಐಡಿಎಫ್‌ಸಿ ಲಿಮಿಟೆಡ್, ಎಂಸಿಎಕ್ಸ್ ಲಿಮಿಟೆಡ್ ಮತ್ತು ಗುಜರಾತ್ ರಾಜ್ಯ ಪೆಟ್ರೋಲಿಯಂ ಕಾರ್ಪೊರೇಷನ್ ಸೇರಿದಂತೆ ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿಯೂ ಕೆಲಸ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...