ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿಹಿಡಿದಿದ್ದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶರು ಇತ್ತೀಚೆಗೆ ದೆಹಲಿಯಲ್ಲಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ‘ನ್ಯಾಯಾಧೀಶರ ಸಭೆ’ಯ ಹಾಜರಾಗಿದ್ದರು ಎಂದು ವರದಿಯಾಗಿದೆ.
ಹಿಜಾಬ್ ನಿಷೇಧ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಎತ್ತಿ ಹಿಡಿದಿದ್ದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹೇಮಂತ್ ಗುಪ್ತಾ ಅವರು ಭಾನುವಾರ ನಡೆದ ವಿಎಚ್‌ಪಿ ಸಭೆಯಲ್ಲಿ ಭಾಗವಹಿಸಿದ್ದರು ಎಂದು ತಿಳಿದುಬಂದಿದೆ.
“ನಾನು ಭಾರತದ ಪ್ರಜೆಯಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ. ದೇಶದ ಇತರ ನಾಗರಿಕರಂತೆ ಪ್ರಸ್ತುತ ಸಮಸ್ಯೆಗಳು ಮತ್ತು ವಿಷಯಗಳ ಬಗ್ಗೆ ಚರ್ಚಿಸಲು ಮತ್ತು ಚರ್ಚಾ ವೇದಿಕೆಗಳಲ್ಲಿ ಭಾಗವಹಿಸಲು ನನಗೆ ಸ್ವಾತಂತ್ರ್ಯವಿದೆ” ಎಂದು ಹೇಮಂತ್ ಗುಪ್ತಾ ಹೇಳಿದ್ದಾಗಿ ದಿ ಕ್ವಿಂಟ್ ವರದಿ ಮಾಡಿದೆ.
ವಾರಣಾಸಿ ಮತ್ತು ಮಥುರಾ ದೇವಸ್ಥಾನಗಳ ಸ್ಥಿತಿಗತಿ, ವಕ್ಫ್ (ತಿದ್ದುಪಡಿ) ಮಸೂದೆ ಮತ್ತು ಧಾರ್ಮಿಕ ಮತಾಂತರದ ಕುರಿತ ವಿಚಾರಗಳು ಸೇರಿದಂತೆ ಹಿಂದುತ್ವವಾದಿ ಸಂಘಟನೆಗಳು ಮುನ್ನೆಲೆಗೆ ತಂದಿರುವ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದಿವೆ ಎಂದು ವರದಿಗಳು ಹೇಳುತ್ತಿವೆ. ಇಂತಹ ಚರ್ಚೆಯಲ್ಲಿ ಓರ್ವ ನಿವೃತ್ತ ನ್ಯಾಯಮೂರ್ತಿ ಭಾಗವಹಿಸುವುದು, ಅವರು ತಮ್ಮ ಸೇವಾ ಅವಧಿಯಲ್ಲಿ ನೀಡಿದ್ದ ತೀರ್ಪುಗಳ ಬಗ್ಗೆ ಕಳವಳ, ಅಂತಕ, ಅನುಮಾನಗಳನ್ನು ಹುಟ್ಟುಹಾಕುತ್ತವೆ.
Every top institutions are saffronized