1.5 ಕೋಟಿ ರೂ.ತೆರಿಗೆ ಬಾಕಿ : ತ.ನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ ಬಂಗಲೆ ಜಪ್ತಿ

Date:

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಐಷಾರಾಮಿ ಬಂಗಲೆಯನ್ನು ಬೃಹತ್ ಹೈದರಾಬಾದ್ ಮಹಾನಗರ ಪಾಲಿಕೆ (ಜಿಎಚ್ಎಂಸಿ) ಅಧಿಕಾರಿಗಳು ಮಾ.31(ಮಂಗಳವಾರ) ಜಪ್ತಿ ಮಾಡಿದ್ದಾರೆ. ಸುಮಾರು 1.5 ಕೋಟಿ ರೂಪಾಯಿಗಳಿಗೂ ಹೆಚ್ಚು ಆಸ್ತಿ ತೆರಿಗೆಯನ್ನು ದೀರ್ಘಕಾಲದಿಂದ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಪಾಲಿಕೆ ತಿಳಿಸಿದೆ.

- Advertisement -

ಹೈದರಾಬಾದ್‌ನ ಶ್ರೀನಗರ ಕಾಲೋನಿಯಲ್ಲಿರುವ ಈ ಆಸ್ತಿಯು 2017ರಿಂದಲೂ ತೆರಿಗೆ ಸುಸ್ತಿದಾರರ ಪಟ್ಟಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 2016ರಲ್ಲಿ ಜಯಲಲಿತಾ ಅವರ ನಿಧನದ ನಂತರ, ಅವರ ಕಾನೂನುಬದ್ಧ ವಾರಸುದಾರರಿಗೆ ತೆರಿಗೆ ಪಾವತಿಸುವಂತೆ ಅಧಿಕಾರಿಗಳು ಹಲವಾರು ಬಾರಿ ನೋಟಿಸ್ ನೀಡಿದ್ದರು. ಇತ್ತೀಚೆಗೆ ಫೆಬ್ರವರಿ ತಿಂಗಳಲ್ಲೂ ಮತ್ತೊಮ್ಮೆ ಎಚ್ಚರಿಕೆ ನೋಟಿಸ್ ನೀಡಲಾಗಿತ್ತು. ಆದರೆ ವಾರಸುದಾರರಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ, ತೆರಿಗೆ ಪಾವತಿಗೆ ನೀಡಿದ್ದ ಗಡುವು ಮುಗಿದ ಬೆನ್ನಲ್ಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಟ್ಟಡಕ್ಕೆ ಸೀಲ್ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಜಯಲಲತಾ ಮನೆಗೂ ವಿಜಯ್ ಮಲ್ಯಗೂ ಏನು ಸಂಬಂಧ ?

ಈ ಮನೆಯನ್ನು ಈ ಹಿಂದೆ ಉದ್ಯಮಿ ವಿಜಯ್ ಮಲ್ಯ ಅವರಿಗೆ ಗುತ್ತಿಗೆ ನೀಡಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಮಲ್ಯ ಅವರ ಬಳಿ ಈ ಆಸ್ತಿ ಇದ್ದ ಅವಧಿಯಲ್ಲೇ ತೆರಿಗೆ ಬಾಕಿ ಉಳಿಯಲು ಆರಂಭವಾಗಿತ್ತು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಪ್ರಸ್ತುತ ಈ ಕಟ್ಟಡದ ಒಟ್ಟು ಬಾಕಿ ಮೊತ್ತವು ಬಡ್ಡಿ ಸೇರಿ 1.5 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಜಯಲಲಿತಾ ಅವರ ನಿಧನದ ನಂತರ ಈ ಆಸ್ತಿಯ ನಿರ್ವಹಣೆ ಮತ್ತು ಮಾಲೀಕತ್ವದ ವಿಷಯದಲ್ಲಿ ಉಂಟಾದ ಗೊಂದಲಗಳು ತೆರಿಗೆ ಬಾಕಿ ಉಳಿಯಲು ಮುಖ್ಯ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಹಾಸನ ಮಣ್ಣಿನ ಹೆಣ್ಣು ದನಿಗಳು | ಪ್ರಯೋಗಶೀಲ ಮಲೆನಾಡಿನ ಮಹಿಳೆಯರು

WhatsApp Image 2026 03 31 at 14.11.56

ತೆರಿಗೆ ಸುಸ್ತಿದಾರರ ವಿರುದ್ಧ ಜಿಎಚ್‌ಎಂಸಿ ಸಮರ

ಮಾರ್ಚ್ 31ರ ಆರ್ಥಿಕ ವರ್ಷದ ಅಂತ್ಯದ ಹಿನ್ನೆಲೆಯಲ್ಲಿ ಹೈದರಾಬಾದ್ ಮಹಾನಗರ ಪಾಲಿಕೆಯು ತೆರಿಗೆ ವಸೂಲಾತಿಗಾಗಿ ಬೃಹತ್ ಕಾರ್ಯಾಚರಣೆ ಹಮ್ಮಿಕೊಂಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಎಚ್‌ಎಂಸಿ ಕಮಿಷನರ್ ಆರ್.ವಿ. ಕರ್ಣನ್, “ನಾವು ಎಲ್ಲಾ ಪ್ರಮುಖ ಸುಸ್ತಿದಾರರಿಗೆ ನೋಟಿಸ್ ನೀಡಿದ್ದೇವೆ. ಜಯಲಲಿತಾ ಅವರ ವಾರಸುದಾರರಿಗೆ ಸೇರಿದ ಆಸ್ತಿಯೂ ಇದರಲ್ಲಿ ಸೇರಿದೆ. ಕೇವಲ ಈ ಬಂಗಲೆ ಮಾತ್ರವಲ್ಲದೆ, ಹೈದರಾಬಾದ್‌ನಾದ್ಯಂತ ಕೋಟಿಗಟ್ಟಲೆ ತೆರಿಗೆ ಬಾಕಿ ಉಳಿಸಿಕೊಂಡಿರುವ 100ಕ್ಕೂ ಹೆಚ್ಚು ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳನ್ನು ಇತ್ತೀಚಿನ ವಾರಗಳಲ್ಲಿ ಸೀಲ್ ಮಾಡಲಾಗಿದೆ,” ಎಂದು ಸ್ಪಷ್ಟಪಡಿಸಿದ್ದಾರೆ.

ಸದ್ಯ ಜಿಎಚ್‌ಎಂಸಿ ವ್ಯಾಪ್ತಿಯಲ್ಲಿ ಸುಮಾರು 1,400 ಕೋಟಿ ರೂ.ಗಳಿಗೂ ಅಧಿಕ ಆಸ್ತಿ ತೆರಿಗೆ ಬಾಕಿ ಇದ್ದು, ತೆರಿಗೆ ಪಾವತಿದಾರರಿಗೆ ಬಡ್ಡಿ ಮನ್ನಾ ಮಾಡುವ ‘ಒನ್ ಟೈಮ್ ಸೆಟಲ್‌ಮೆಂಟ್'(ಒಂದು ಬಾರಿಗೆ ಬಾಕಿ ಪಾವತಿ) ಯೋಜನೆಯನ್ನೂ ಪಾಲಿಕೆ ಘೋಷಿಸಿದೆ. ಈ ಗಡುವು ಮುಗಿಯುವವರೆಗೆ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ...

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...