ಮಧ್ಯಪ್ರದೇಶ | ಭೀಕರ ಅಪಘಾತ: ನಾಲ್ವರ ಸಾವು, 11 ಮಂದಿಗೆ ಗಾಯ

Date:

ಮಿನಿ ಬಸ್ ಸಣ್ಣ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿ, 11 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಶಿವಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಶನಿವಾರ ನಡೆದಿದೆ. ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿ.ಮೀ ದೂರದಲ್ಲಿರುವ ರಾಷ್ಟ್ರೀಯ ಹೆದ್ದಾರಿ 46 ರಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

- Advertisement -

ಗುಜರಾತ್ ಮೂಲದ ಸಂಗೀತ ತಂಡವಿದ್ದ ಮಿನಿ ಬಸ್ ವಾರಣಾಸಿಯ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಸರ್ವಾಯ ಪೊಲೀಸ್ ಠಾಣೆಯ ಗೃಹ ಅಧಿಕಾರಿ (SHO) ಅರವಿಂದ್ ಚಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಭೀಕರ ಅಪಘಾತ: ಮೂವರ ಸಾವು, ಆರು ಮಂದಿಗೆ ಗಾಯ

ಬಸ್ ಚಾಲಕನ ನಿಯಂತ್ರಣ ತಪ್ಪಿದ್ದು, ಬೇರೆಯೇ ದಾರಿಗೆ ನುಗ್ಗಿ ಸಣ್ಣ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಸಂಗೀತ ತಂಡದ ಗಾಯಕ ಹಾರ್ದಿಕ್ ಡೇವ್ (37), ಸಂಗೀತ ತಂಡದ ಗಾಯಕ ರಾಜಾ ಠಾಕೂರ್ (28), ಅಂಕಿತ್ ಠಾಕೂರ್ (17) ಮತ್ತು ರಾಜೇಂದ್ರ ಸೋಲಂಕಿ (47) ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 17 ಜನರಿದ್ದ ಮಿನಿ ಬಸ್‌ನ ಚಾಲಕ ನಿದ್ರೆಗೆ ಜಾರಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...