ಬೆಂಬಲ ಬೆಲೆಗೆ ಸುಗ್ರೀವಾಜ್ಞೆ ಬೇಡಿಕೆ: ಇಂದು ಸಂಜೆ ಕೇಂದ್ರದ ಜತೆ ರೈತ ಮುಖಂಡರ ಸಭೆ

Date:

ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಭಾನುವಾರ(ಫೆ.18) ಕೇಂದ್ರದ ಪ್ರತಿನಿಧಿಗಳ ಜತೆ ನಾಲ್ಕನೇ ಸುತ್ತಿನ ಮಾತುಕತೆ ನಡೆಸಲು ಸಜ್ಜಾಗಿದ್ದಾರೆ. ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತರಿಗೆ ಕಾನೂನು ಜಾರಿಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘಟನೆಗಳು ಮುಂದಿಟ್ಟಿವೆ. ಕನಿಷ್ಠ ಬೆಂಬಲ ಬೆಲೆ ಖಾತರಿ ಕುರಿತಂತೆ ಸುಗ್ರೀವಾಜ್ಞೆ ಜಾರಿಗೊಳಿಸಬೇಕು ಎಂಬ ಬೇಡಿಕೆಯೊಂದಿಗೆ ರೈತ ಸಂಘಟನೆಗಳು ಸಭೆಗೆ ಹಾಜರಾಗಲಿವೆ.

ರೈತ ಮುಖಂಡರು ಕೇಂದ್ರ ಸಚಿವರಾದ ಅರ್ಜುನ ಮುಂಡಾ, ಪಿಯೂಶ್ ಗೋಯಲ್ ಮತ್ತು ನಿತ್ಯಾನಂದ ರಾಯ್ ಅವರನ್ನು ಸಂಜೆ 6 ಗಂಟೆಗೆ ಚಂಡೀಗಢದಲ್ಲಿ ಭೇಟಿ ಮಾಡುವರು. ಇದಕ್ಕೂ ಮೊದಲು ನಡೆದ ಮೂರು ಸುತ್ತುಗಳ ಮಾತುಕತೆಗಳಲ್ಲಿ ಹಲವು ವಿಷಯಗಳ ಬಗ್ಗೆ ಪರಸ್ಪರ ಒಮ್ಮತಕ್ಕೆ ಬರಲಾಗಿದ್ದರೂ, ಪ್ರಮುಖ ವಿಷಯಗಳು ಇತ್ಯರ್ಥವಾಗದೇ ಹಾಗೇ ಉಳಿದಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತಸ್ನೇಹಿ- ಚುನಾವಣಾ ಸಮಯದ ಗಿಮಿಕ್ ಆಗದಿರಲಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿನ್ನೆ ರೈತ ಮುಖಂಡರು ಸರ್ಕಾರದ ಮೇಲೆ ಒತ್ತಡ ತಂದು, ಎಂಎಸ್‍ಪಿಗೆ ಕಾನೂನಾತ್ಮಕ ಗ್ಯಾರೆಂಟಿ ನೀಡುವ ಸಲುವಾಗಿ ಸುಗ್ರೀವಾಜ್ಞೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದರು. ಆ ಬಳಿಕ ಅದನ್ನೇ ಕಾನೂನಾಗಿ ಪರಿವರ್ತಿಸುವಂತೆ ಸಲಹೆ ಮುಂದಿಟ್ಟಿವೆ.

ಭಾನುವಾರ ಸಭೆಯ ಬಳಿಕ ನಮಗೆ ಶುಭ ಸುದ್ದಿ ಬರುವ ನಿರೀಕ್ಷೆ ಇದೆ ಎಂದು ರೈತ ಮುಖಂಡರಾದ ಸರ್ವನ್ ಸಿಂಗ್ ಪಂಧೇರ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಂಎಸ್‍ಪಿ ಕಾನೂನಿನ ಹೊರತಾಗಿ, ದೆಹಲಿ ಚಲೋ ಚಳವಳಿ ನಡೆಸುತ್ತಿರುವ ರೈತರು, ಸ್ವಾಮಿನಾಥನ್ ಆಯೋಗದ ವರದಿಯನ್ನು ಜಾರಿಗೊಳಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ರೈತರು ಹಾಗೂ ಕೃಷಿ ಕಾರ್ಮಿಕರಿಗೆ ಪಿಂಚಣಿ ನೀಡಬೇಕು ಹಾಗೂ ರೈತರ ವಿರುದ್ಧದ ಪೊಲೀಸ್ ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ| ಆಸ್ಪತ್ರೆಯ ಶುಲ್ಕ ಪಾವತಿಸಲಾಗದೆ ಸ್ವಂತ ಮಗುವನ್ನೇ ಮಾರಾಟ ಮಾಡಿದ ತಂದೆ

ಉತ್ತರ ಪ್ರದೇಶದ ಕುಷಿನಗರದಲ್ಲಿ ಖಾಸಗಿ ಆಸ್ಪತ್ರೆಯೊಂದರಲ್ಲಿ ಶುಲ್ಕ ಪಾವತಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ...

ಸ್ವಂತ ಕುಟುಂಬ ಒಡೆಯುವುದನ್ನು ಸಮಾಜ ಇಷ್ಟಪಡಲ್ಲ, ನನ್ನ ತಪ್ಪಿನ ಅರಿವಾಗಿದೆ: ಅಜಿತ್ ಪವಾರ್

"ಕುಟುಂಬಗಳಲ್ಲಿನ ಬಿರುಕುಗಳನ್ನು ಸಮಾಜವು ಇಷ್ಟಪಡುವುದಿಲ್ಲ. ನನ್ನ ತಪ್ಪಿನ ಅರಿವು ನನಗಾಗಿದೆ" ಎಂದು...

ಲಕ್ನೋ ಕಟ್ಟಡ ಕುಸಿತ | ಮೃತರ ಸಂಖ್ಯೆ 8ಕ್ಕೆ ಏರಿಕೆ, 28 ಮಂದಿಗೆ ಗಾಯ

ಲಕ್ನೋ ಕಟ್ಟಡ ಕುಸಿತ ಪ್ರಕರಣದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಭಾನುವಾರ ಮುಂಜಾನೆ...

ಮಣಿಪುರದ ಮೊದಲ ಸಿಎಂ ಮನೆ ಗುರಿಯಾಗಿಸಿ ರಾಕೆಟ್ ದಾಳಿ; ‘ಸಾರ್ವಜನಿಕ ತುರ್ತು ಪರಿಸ್ಥಿತಿ’ ಘೋಷಣೆ

ಶಂಕಿತ ಬುಡಕಟ್ಟು ಉಗ್ರರು ಶುಕ್ರವಾರ ಮಣಿಪುರದ ಬಿಷ್ಣುಪುರ್ ಜಿಲ್ಲೆಯಲ್ಲಿ ಮಣಿಪುರದ ಮೊದಲ...