ಮೋಸದ ಜಾಹೀರಾತು; 24 ತರಬೇತಿ ಸಂಸ್ಥೆಗಳಿಗೆ ದಂಡ

Date:

Advertisements
  • ₹77.60 ಲಕ್ಷ ವಿಧಿಸಿದ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ
  • ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ

ದಾರಿ ತಪ್ಪಿಸುವ ಜಾಹೀರಾತು ನೀಡಿ ವಂಚಿಸಿದ ಕಾರಣಕ್ಕೆ 24 ತರಬೇತಿ ಸಂಸ್ಥೆಗಳಿಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರ ₹77.60 ಲಕ್ಷ ದಂಡ ವಿಧಿಸಿದ್ದಲ್ಲದೆ, ರಾಷ್ಟ್ರೀಯ ಗ್ರಾಹಕ ಸಹಾಯವಾಣಿ ಮೂಲಕ ಶಿಕ್ಷಣ ಕ್ಷೇತ್ರದ 600ಕ್ಕೂ ಅಭ್ಯರ್ಥಿಗಳಿಗೆ ₹1.56 ಕೋಟಿ ಮರುಪಾವತಿ ಮಾಡಿದೆ ಎಂದು ಗ್ರಾಹಕ ವ್ಯವಹಾರಗಳ ಇಲಾಖೆ ಮಾಹಿತಿ ನೀಡಿದೆ.

ನಾಗರಿಕ ಸೇವೆ, ಎಂಜಿನಿಯರಿಂಗ್ ಕೋರ್ಸ್ ಮತ್ತಿತರ ಶಿಕ್ಷಣಕ್ಕೆ ತರಬೇತಿ ಕೇಂದ್ರಗಳಲ್ಲಿ ದಾಖಲಾಗಿದ್ದ ಅಭ್ಯರ್ಥಿಗಳು ನಿಯಮ, ಷರತ್ತುಗಳನ್ನು ಅನುಸರಿಸಿದರೂ ಮರುಪಾವತಿ ನಿರಾಕರಿಸಲಾಗಿದೆ ಎಂದು ಅಭ್ಯರ್ಥಿಗಳು ಗ್ರಾಹಕ ರಕ್ಷಣಾ ಪ್ರಾಧಿಕಾರದ ಗಮನ ಸೆಳೆದಿದ್ದರು.

ಗ್ರಾಹಕ ವ್ಯವಹಾರಗಳ ಇಲಾಖೆ ಗ್ರಾಹಕರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಪ್ರಗತಿಪರ ಕಾನೂನುಗಳನ್ನು ಜಾರಿಗೆ ತರುವ ಮೂಲಕ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದೆ. CONFONET ಯೋಜನೆಯಡಿ ವಿಡಿಯೋ ಕಾನ್ಫರೆನ್ಸಿಂಗ್ ಮೋಡ್ ಮೂಲಕ ವಿಚಾರಣೆ ನಡೆಸಲು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗದ (NCDRC) 10 ಪೀಠಗಳು ಮತ್ತು ರಾಜ್ಯ ಗ್ರಾಹಕ ವಿವಾದ ಪರಿಹಾರ ಆಯೋಗಗಳ (SCDRCs) 35 ಪೀಠಗಳಲ್ಲಿ VC ಉಪಕರಣಗಳನ್ನು ಸ್ಥಾಪಿಸಲಾಗಿದೆ. ಇದರಿಂದ ಗ್ರಾಹಕ ಆಯೋಗಗಳಲ್ಲಿ ಈಗ ತೀರ್ಪು ಪ್ರಕ್ರಿಯೆಯ ಸರಳೀಕೃತವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisements

ಗ್ರಾಹಕ ಸಂರಕ್ಷಣಾ ಕಾಯ್ದೆ 1986 ರದ್ದುಪಡಿಸಿ 2019ರ ಹೊಸ ಕಾಯ್ದೆ ಜಾರಿ

ಜಾಗತೀಕರಣ, ತಂತ್ರಜ್ಞಾನ, ಇ-ವಾಣಿಜ್ಯ ಮಾರುಕಟ್ಟೆಗಳಲ್ಲಿ ಗ್ರಾಹಕರ ರಕ್ಷಣೆಗಾಗಿ ಗ್ರಾಹಕ ಸಂರಕ್ಷಣಾ ಕಾಯ್ದೆ 1986 ಅನ್ನು ರದ್ದುಪಡಿಸಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಇದರಿಂದ ಗ್ರಾಹಕರು ಆನ್‌ಲೈನ್‌ನಲ್ಲಿ ದೂರು ಸಲ್ಲಿಕೆ, ವಿಚಾರಣೆಗಾಗಿ ವೀಡಿಯೊ ಕಾನ್ಫರೆನ್ಸಿಂಗ್, 21 ದಿನಗಳಲ್ಲಿ ದೂರುಗಳ ಸ್ವೀಕಾರ ಮತ್ತು ತ್ವರಿತ ಪರಿಹಾರ ಸಾಧ್ಯವಾಗುತ್ತಿದೆ.

ಗ್ರಾಹಕ ವ್ಯವಹಾರಗಳ ಇಲಾಖೆ ದೇಶಾದ್ಯಂತ ಗ್ರಾಹಕರಿಗೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (NCH) ಸೌಲಭ್ಯ ಒದಗಿಸಿದೆ. ಹಿಂದಿ, ಇಂಗ್ಲಿಷ್, ಕಾಶ್ಮೀರಿ, ಪಂಜಾಬಿ, ನೇಪಾಳಿ, ಗುಜರಾತಿ, ಮರಾಠಿ, ಕನ್ನಡ, ತೆಲುಗು, ತಮಿಳು, ಮಲಯಾಳಂ, ಮೈಥಿಲಿ, ಸಂಥಾಲಿ, ಬಂಗಾಳಿ, ಒಡಿಯಾ, ಅಸ್ಸಾಮಿ ಮತ್ತು ಮಣಿಪುರಿ ಸೇರಿದಂತೆ 17 ಭಾಷೆಗಳಲ್ಲಿ ಗ್ರಾಹಕರು ಟೋಲ್-ಫ್ರೀ ಸಂಖ್ಯೆ 1915 ಮೂಲಕ ನೋಂದಾಯಿಸಬಹುದು. ಅಲ್ಲದೇ, ಇಂಟಿಗ್ರೇಟೆಡ್ ಗ್ರೀವೆನ್ಸ್ ರಿಡ್ರೆಸಲ್ ಮೆಕ್ಯಾನಿಸಂ (INGRAM), ಓಮ್ನಿ-ಚಾನೆಲ್ ಐಟಿ-ಶಕ್ತಗೊಂಡ ಕೇಂದ್ರ ಪೋರ್ಟಲ್, ವಿವಿಧ ಚಾನೆಲ್‌ಗಳ ಮೂಲಕವೂ ನೋಂದಾಯಿಸಬಹುದು.

ವಿಮಾನ ಕಂಪನಿಗಳಿಂದ ₹ 1,454 ಕೋಟಿ ಮರುಪಾವತಿ

ಕೋವಿಡ್-19 ಲಾಕ್‌ಡೌನ್‌ ವೇಳೆ ವಿಮಾನ ಸಂಚಾರ ರದ್ದಾದ ಪ್ರಯುಕ್ತ ಕಂಪನಿಗಳು CCPA ನಿರ್ದೇಶನದಂತೆ ಗ್ರಾಹಕರಿಗೆ ₹ 1,454 ಕೋಟಿ ಮರುಪಾವತಿಸಿವೆ. ವಿಮಾನ ಕಂಪನಿಗಳು ತಮ್ಮ ವೆಬ್‌ಸೈಟ್‌ ನವೀಕರಿಸಬೇಕೆಂದು CCPA ಆದೇಶಿಸಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆನ್‌ಲೈನ್‌ ಜೂಜಾಟ ತಡೆಗೆ ಕಠಿಣ ಕಾನೂನು; ಸಂಸತ್ತಿನಲ್ಲಿ ಆನ್‌ಲೈನ್ ಗೇಮಿಂಗ್‌ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಮಂಡನೆ

ಭಾರತದ ಡಿಜಿಟಲ್ ಮನರಂಜನಾ ಕ್ಷೇತ್ರದಲ್ಲಿ ಭಾರೀ ಬದಲಾವಣೆಯನ್ನು ತರಲು ಸಿದ್ಧವಾಗಿರುವ ಆನ್‌ಲೈನ್...

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

Download Eedina App Android / iOS

X