ತಮಿಳುನಾಡು ವಿದ್ಯಾರ್ಥಿಗಳಿಗೆ ಹಾರ್ವರ್ಡ್, ಆಕ್ಸ್‌ಫರ್ಡ್‌ನಲ್ಲಿ ಉಚಿತ ಶಿಕ್ಷಣ: ಪ್ರತಿಯಾಗಿ ರಾಜ್ಯದಲ್ಲೇ 3 ವರ್ಷ ಸೇವೆ ಕಡ್ಡಾಯ

Date:

ಜಗತ್ತಿನ ಅತ್ಯುನ್ನತ ಶಿಕ್ಷಣ ಸಂಸ್ಥೆಗಳಾದ ಹಾರ್ವರ್ಡ್, ಸ್ಟ್ಯಾನ್‌ಫೋರ್ಡ್, ಆಕ್ಸ್‌ಫರ್ಡ್ ಮತ್ತು ಕೇಂಬ್ರಿಡ್ಜ್‌ನಂತಹ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ (World’s Top 100 Universities) ಪ್ರವೇಶ ಪಡೆಯುವ ತಮಿಳುನಾಡಿನ ಪ್ರತಿಭಾವಂತ ವಿದ್ಯಾರ್ಥಿಗಳ ಬೋಧನಾ ಶುಲ್ಕ ಮತ್ತು ವಿದೇಶದಲ್ಲಿ ವಾಸಿಸುವ ವೆಚ್ಚವನ್ನು ಸಂಪೂರ್ಣವಾಗಿ ಭರಿಸಲು ತಮಿಳುನಾಡು ಸರ್ಕಾರವು ಹೊಸ ಯೋಜನೆ ರೂಪಿಸುತ್ತಿದೆ.

- Advertisement -

ಆದರೆ, ಇದಕ್ಕೆ ಪ್ರತಿಯಾಗಿ ವಿದ್ಯಾರ್ಥಿಗಳು ಹಣದ ರೂಪದಲ್ಲಿ ಯಾವುದೇ ಮರುಪಾವತಿ ಮಾಡಬೇಕಾಗಿಲ್ಲ; ಬದಲಿಗೆ ‘ಸೇವೆಯ ರೂಪದಲ್ಲಿ’ ಅಂದರೆ ಪದವಿ ಮುಗಿದ ಬಳಿಕ ತಮಿಳುನಾಡಿಗೆ ಹಿಂತಿರುಗಿ ಕನಿಷ್ಠ ಮೂರು ವರ್ಷಗಳ ಕಾಲ ರಾಜ್ಯ ಸರ್ಕಾರಕ್ಕೆ ಸೇವೆ ಸಲ್ಲಿಸಬೇಕಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ರಾಯಚೂರು | ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಇದನ್ನೂ ಓದಿ: ಮೋದಿ ಹಾದಿಯಲ್ಲಿ ನಿರ್ಮಲಾ ಸೀತಾರಾಮನ್ – ದರ್ಪದ ಮಾತು, ವಿಪಕ್ಷಗಳ ಗೇಲಿ ಮಾಡೋ ಚಾಳಿ

ವಿದೇಶಿ ಉನ್ನತ ಶಿಕ್ಷಣ ಪಡೆದು ಬರುವ ಈ ಯುವ ಪದವೀಧರರ ಜಾಗತಿಕ ಪರಿಣತಿಯನ್ನು ರಾಜ್ಯದ ನೀತಿ ನಿರೂಪಣೆ, ಬೋಧನೆ, ಸಂಶೋಧನೆ ಮತ್ತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಕಾರ್ಯಗಳಿಗೆ ಬಳಸಿಕೊಳ್ಳುವುದು ಮುಖ್ಯ ಗುರಿಯಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

ಈ ಯೋಜನೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಜಾರಿಗೆ ತರಲು ಉನ್ನತ ಶಿಕ್ಷಣ ಇಲಾಖೆಯು ಸಂಬಂಧಪಟ್ಟ ಎಲ್ಲಾ ಪಾಲುದಾರರೊಂದಿಗೆ ಚರ್ಚೆ ನಡೆಸುತ್ತಿದೆ. ಸರ್ಕಾರ ಮತ್ತು ವಿದ್ಯಾರ್ಥಿಗಳಿಗೆ ಇಬ್ಬರಿಗೂ ಅನುಕೂಲವಾಗುವ, ಪ್ರಾಯೋಗಿಕವಾಗ ಬಹುದಾದ ಸರಳ ನಿಯಮಗಳನ್ನು ರೂಪಿಸುವ ಕುರಿತು ಕಸರತ್ತು ನಡೆಯುತ್ತಿದೆ.

ಈ ಯೋಜನೆಯ ಪ್ರಯೋಜನ ಪಡೆಯುವ ವಿದ್ಯಾರ್ಥಿಗಳು ನಿಗದಿತ ನಿಯಮಗಳನ್ನು ಉಲ್ಲಂಘಿಸಿದರೆ ಅಥವಾ ಸರ್ಕಾರದ ನಿಬಂಧನೆಗಳನ್ನು ಪೂರೈಸದಿದ್ದರೆ ಅಂತಹ ಸಂದರ್ಭಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳ ಬಗ್ಗೆಯೂ ಸ್ಪಷ್ಟನೆ ನೀಡಲು ಇಲಾಖೆ ಚಿಂತನೆ ನಡೆಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನೊಬೆಲ್’ ಪುರಸ್ಕೃತೆಗೆ ಶುಭಾಷಯ ಕೋರದ ಮೋದಿ ಸರ್ಕಾರ; ‘ಕ್ಷುದ್ರ ಆಡಳಿತ’ ಎಂದು ತರೂರ್ ವಾಗ್ದಾಳಿ

ಈ ವರ್ಷದ ಪ್ರತಿಷ್ಠಿತ ನೊಬೆಲ್ ಶಾಂತಿ ಪುರಸ್ಕಾರಕ್ಕೆ ಭಾಜನರಾಗಿರುವ ಭಾರತೀಯ ಮೂಲದ...

ಮಣಿಪುರದಲ್ಲಿ ಮುಂದುವರಿದ ರಕ್ತಪಾತ: ತೌಬಾಲ್‌ನಲ್ಲಿ ಭುಗಿಲೆದ್ದ ಘರ್ಷಣೆ; ಒಬ್ಬರು ಸಾವು, ಹಲವರಿಗೆ ಗಾಯ

ಮಣಿಪುರದಲ್ಲಿ ಹಿಂಸಾಚಾರ ಹೆಚ್ಚಳವಾಗುತ್ತಲೇ ಇದೆ. ತೌಬಾಲ್ ಜಿಲ್ಲೆಯಲ್ಲಿ ಭಾನುವಾರ ನಡೆದ ತೀವ್ರ...

ಬಾಲಿವುಡ್‌ ನಟ ಟೈಗರ್‌ ಶ್ರಾಫ್‌ ಕಾರಿನ ಮೇಲೆ ಗುಂಡಿನ ದಾಳಿ: ಹೊಣೆ ಹೊತ್ತ ಲಾರೆನ್ಸ್ ಬಿಷ್ಣೋಯ್‌ ಗ್ಯಾಂಗ್?‌

ಬಾಲಿವುಡ್ ನಟ ಟೈಗರ್ ಶ್ರಾಫ್ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಭಾನುವಾರ ಗುಂಡಿನ...

ಬಸವಕಲ್ಯಾಣ | ಕೃಷಿ, ಪರಿಸರ ಸಾಹಿತ್ಯದ ಭಾಗವಾಗಲಿ

ಪರಿಸರ ಪ್ರಜ್ಞೆ ಇಂದಿನ ಅಗತ್ಯವಾಗಿದ್ದು, ಕೃಷಿ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳು...