ಸಿಎಂ ವಿಜಯ್ ಜನ್ಮದಿನ ಪ್ರಯುಕ್ತ ತಮಿಳುನಾಡಿನ ಮೃಗಾಲಯಗಳಲ್ಲಿ 2 ದಿನ ಉಚಿತ ಪ್ರವೇಶ

Date:

ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್‌ ವಿಜಯ್ ಅವರ 52ನೇ ಜನ್ಮದಿನದ (ಜೂನ್ 22) ಪ್ರಯುಕ್ತ, ಜೂನ್ 21 ಮತ್ತು 22ರಂದು ರಾಜ್ಯದ ಮೂರು ಪ್ರಮುಖ ಮೃಗಾಲಯಗಳಿಗೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಈ ಕುರಿತು ಅರಣ್ಯ ಸಚಿವ ಆರ್.ವಿ. ರಂಜಿತ್‌ಕುಮಾರ್ ಅಧಿಕೃತ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿಗಳ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

- Advertisement -

ಚೆನ್ನೈ ಬಳಿಯ ವಂಡಲೂರಿನ ಅರಿಗ್ನರ್ ಅಣ್ಣಾ ಜೈವಿಕ ಉದ್ಯಾನ, ವೆಲ್ಲೂರು ಜಿಲ್ಲೆಯ ಅಮೀರ್ತಿ ಮೃಗಾಲಯ ಹಾಗೂ ಸೇಲಂನ ಕುರುಂಬಪಟ್ಟಿ ಮೃಗಾಲಯಗಳಲ್ಲಿ ಈ ಉಚಿತ ಪ್ರವೇಶದ ಸೌಲಭ್ಯ ಲಭ್ಯವಿರಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಲು ಆನ್‌ಲೈನ್‌ ಮೂಲಕ ಮುಂಚಿತವಾಗಿ ಟಿಕೆಟ್ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ. ಸ್ಥಳಾಭಾವದ ಕಾರಣದಿಂದ ಗಿಂಡಿ ಚಿಲ್ಡ್ರನ್ಸ್ ಪಾರ್ಕ್‌ ಅನ್ನು ಈ ಯೋಜನೆಯಿಂದ ಕೈಬಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಎರಡು ದಿನಗಳ ಉಚಿತ ಪ್ರವೇಶದಿಂದ ಮೃಗಾಲಯಗಳ ನಿರ್ವಹಣೆಗೆ ಯಾವುದೇ ಆರ್ಥಿಕ ನಷ್ಟವಾಗುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಟಿಕೆಟ್‌ನ ಸಂಪೂರ್ಣ ವೆಚ್ಚವನ್ನು (ಅಂದಾಜು 1 ಕೋಟಿ ರೂ.) ಸಚಿವರ ಕೌಟುಂಬಿಕ ಟ್ರಸ್ಟ್ ಭರಿಸಲಿದೆ. ಜನ್ಮದಿನದ ವಿಶೇಷ ಅಂಗವಾಗಿ ಅರಣ್ಯ ಇಲಾಖೆಯ ವತಿಯಿಂದ ರಾಜ್ಯಾದ್ಯಂತ ಗಿಡ ನೆಡುವ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

ಇದನ್ನು ಓದಿದ್ದೀರಾ? ಪಂಜಾಬ್‌ ಸಿಎಂಗೆ ‘ಗುರುದ್ರೋಹಿ’ ಪಟ್ಟ: ಚುನಾವಣಾ ಹೊತ್ತಲ್ಲೇ ಆಪ್‌ಗೆ ನುಂಗಲಾರದ ತುತ್ತು

ಪ್ರಸ್ತುತ ಬೇಸಿಗೆಯ ತಾಪಮಾನ ಇರುವುದರಿಂದ ವಂಡಲೂರು ಮೃಗಾಲಯದಲ್ಲಿ ವಿಪರೀತ ಜನಸಂದಣಿ ಉಂಟಾಗುವ ಆತಂಕವನ್ನು ವನ್ಯಜೀವಿ ತಜ್ಞರು ವ್ಯಕ್ತಪಡಿಸಿದ್ದರು. ಕೇವಲ 15,000 ಜನರ ಸಾಮರ್ಥ್ಯದ ಮೃಗಾಲಯಕ್ಕೆ ಏಕಾಏಕಿ ಲಕ್ಷಕ್ಕೂ ಅಧಿಕ ಮಂದಿ ಭೇಟಿ ನೀಡಿದರೆ, ವನ್ಯಜೀವಿಗಳಿಗೆ ಮತ್ತು ಸಾರ್ವಜನಿಕರ ಸುರಕ್ಷತೆಗೆ ತೊಂದರೆಯಾಗುವ ಬಗ್ಗೆ ಎಚ್ಚರಿಕೆ ನೀಡಲಾಗಿತ್ತು.

ತಜ್ಞರ ಕಳವಳಕ್ಕೆ ಸ್ಪಂದಿಸಿರುವ ಅರಣ್ಯ ಇಲಾಖೆ, ಜನದಟ್ಟಣೆ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ವಂಡಲೂರು ಮೃಗಾಲಯಕ್ಕೆ ದಿನಕ್ಕೆ ಗರಿಷ್ಠ 50,000 ಆನ್‌ಲೈನ್‌ ಟಿಕೆಟ್‌ಗಳನ್ನು ಮಾತ್ರ ವಿತರಿಸಲು ಮಿತಿ ಹೇರಲಾಗಿದೆ. ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಮುಖ್ಯ ವನ್ಯಜೀವಿ ವಾರ್ಡನ್ ನೇತೃತ್ವದಲ್ಲಿ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...