ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 10 ಮಂದಿಗೆ ಗಾಯ

Date:

ಹಲವು ತಿಂಗಳುಗಳ ನಂತರ ಮಣಿಪುರದದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಇಂಫಾಲ್ ಪಶ್ಚಿಮದ ಕೌತ್ರುಕ್ ಪ್ರದೇಶದಲ್ಲಿ ಗುಂಡಿನ ದಾಳಿ ಮತ್ತು ಬಾಂಬ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಪೊಲೀಸ್ ಸಿಬ್ಬಂದಿ, ಟಿವಿ ವರದಿಗಾರ ಸೇರಿದಂತೆ ಹತ್ತು ಜನರು ಗಾಯಗೊಂಡಿದ್ದಾರೆ.

- Advertisement -

ಕೌತ್ರುಕ್‌ನಲ್ಲಿ ನಡೆದ ದಾಳಿಯಲ್ಲಿ, ಕುಕಿ ಸಮುದಾಯಕ್ಕೆ ಸೇರಿದಂತೆ ಬಂಡುಕೋರರು ಡ್ರೋನ್‌ಗಳನ್ನು ಬಳಸಿಕೊಂಡು ಹಲವಾರು ಆರ್‌ಪಿಜಿಗಳನ್ನು (ರಾಕೆಟ್ ಚಾಲಿತ ಗ್ರೆನೇಡ್‌ಗಳು) ಪ್ರಯೋಗಿಸಿದ್ದಾರೆ ಎಂದು ಮಣಿಪುರ ಪೊಲೀಸರ ಅಧಿಕೃತ ಹೇಳಿಕೆ ತಿಳಿಸಿದೆ. ಹಳ್ಳಿಯನ್ನು ಗುರಿಯಾಗಿಸಲು ಏಳು ಸ್ಪೋಟಕಗಳನ್ನು ಬಳಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಣಿಪುರದಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದೆ. ಇನ್ನು ಆರು ತಿಂಗಳಲ್ಲೇ ಮಣಿಪುರದಲ್ಲಿ ಸಂಪೂರ್ಣ ಶಾಂತಿ ತರಲಾಗುವುದು. ಈ ವಿಚಾರದಲ್ಲಿ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ” ಎಂದು ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಹೇಳಿಕೆ ಕೆಲವೇ ದಿನಗಳಲ್ಲಿ ಮತ್ತೆ ಹಿಂಸಾಚಾರ ನಡೆದು ಇಬ್ಬರು ಪ್ರಾಣ ಕಳೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಮಣಿಪುರ ಹಿಂಸಾಚಾರ | ಮೊದಲ ಬಾರಿ ಸಿಎಂ ಬಿರೇನ್ ಸಿಂಗ್ ಭೇಟಿ ಮಾಡಿದ ಮೋದಿ

“ಯುದ್ಧಗಳಲ್ಲಿ ಡ್ರೋನ್ ಬಾಂಬ್‌ಗಳನ್ನು ಸಾಮಾನ್ಯವಾಗಿ ಬಳಸಲಾಗುತ್ತದೆ. ಮಣಿಪುರದಲ್ಲಿ ಭದ್ರತಾ ಪಡೆಗಳು ಮತ್ತು ನಾಗರಿಕರನ್ನು ಗುರಿಯಾಗಿ ಡ್ರೋನ್‌ಗಳ ದಾಳಿ ಅಧಿಕವಾಗುತ್ತಿದೆ. ಪ್ರಾಯಶಃ ತಾಂತ್ರಿಕ ಪರಿಣತಿ ಮತ್ತು ಬೆಂಬಲದಿಂದ ಹೆಚ್ಚು ತರಬೇತಿ ಪಡೆದ ವೃತ್ತಿಪರರು ಇದನ್ನು ಮಾಡುತ್ತಿದ್ದಾರೆ ಎಂಬುದನ್ನು ನಾವು ತಳ್ಳಿಹಾಕಲಾಗದು” ಎಂದು ಮಣಿಪುರ ಪೊಲೀಸರ ಅಧಿಕೃತ ಹೇಳಿಕೆ ತಿಳಿಸಿದೆ.

ಭಾನುವಾರ ಮಧ್ಯಾಹ್ನ 2:00 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ಪ್ರಾರಂಭವಾಗಿದೆ. ರಾತ್ರಿ 7:30 ವೇಳೆಗೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗ್ರಾಮದಲ್ಲಿನ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ. ಅದಾದ ಬಳಿಕ ಹೆಚ್ಚಿನ ಗ್ರಾಮಸ್ಥರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...