ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಬೆಳಗ್ಗೆ ರಾಜ್ಯದ ಜಿರಿಬಾಮ್ ಜಿಲ್ಲೆಯಲ್ಲಿ ಐವರು ಸಾವನ್ನಪ್ಪಿದ್ದಾರೆ.
ವ್ಯಕ್ತಿಯೋರ್ವ ನಿದ್ದೆಯಲ್ಲಿರುವಾಗಲೇ ಗುಂಡು ಹಾರಿಸಿ ಕೊಲ್ಲಲಾಗಿದ್ದು, ಅದಾದ ಬಳಿಕ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ 5 ಕಿಮೀ ದೂರದ ಪ್ರತ್ಯೇಕ ಸ್ಥಳದಲ್ಲಿ ವ್ಯಕ್ತಿಯೋರ್ವ ಒಬ್ಬನೇ ವಾಸಿಸುತ್ತಿದ್ದು ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಆತ ನಿದ್ದೆಯಲ್ಲಿರುವಾಗಲೇ ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 10 ಮಂದಿಗೆ ಗಾಯ
ಹತ್ಯೆಯ ನಂತರ, ಜಿಲ್ಲಾ ಕೇಂದ್ರದಿಂದ 7 ಕಿಮೀ ದೂರದಲ್ಲಿರುವ ಬೆಟ್ಟದಲ್ಲಿ ಗುಂಡಿನ ಚಕಮಕಿ ನಡೆದಿದೆ. ನಾಲ್ವರು ಶಸ್ತ್ರಸಜ್ಜಿತರು ಸಾವನ್ನಪ್ಪಿದ್ದಾರೆ ಎಂದು ವರದಿ ಉಲ್ಲೇಖಿಸಿದೆ.
STORY | Five killed in fresh violence in Manipur's Jiribam
— Press Trust of India (@PTI_News) September 7, 2024
READ: https://t.co/pb3ftI4ro3#manipurnews pic.twitter.com/d5nym9ZruS
