ಬಿಹಾರದಿಂದ ದೆಹಲಿ ದರ್ಬಾರ್‌ಗೆ: ಬಿಜೆಪಿಯ ನೂತನ ಸಾರಥಿ ನಿತಿನ್ ನಬಿನ್

Date:

ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಾಂಸ್ಥಿಕ ರಚನೆಯಲ್ಲಿ ಮಹತ್ತರ ಬದಲಾವಣೆಯಾಗಿದೆ. ಯುವ ಮುಖಂಡ ಹಾಗೂ ಬಿಹಾರದ ಪ್ರಬಲ ನಾಯಕ ನಿತಿನ್ ನಬಿನ್ ಅವರನ್ನು ಪಕ್ಷದ ‘ರಾಷ್ಟ್ರೀಯ ಕಾರ್ಯಾಧ್ಯಕ್ಷ’ರನ್ನಾಗಿ ನೇಮಕ ಮಾಡುವ ಮೂಲಕ ಹೈಕಮಾಂಡ್ ಪೀಳಿಗೆಯ ಬದಲಾವಣೆಗೆ ನಾಂದಿ ಹಾಡಿದೆ. ಕೇವಲ 45ನೇ ವಯಸ್ಸಿನಲ್ಲಿ ಈ ಉನ್ನತ ಹುದ್ದೆಗೇರಿರುವ ನಿತಿನ್, ಪಕ್ಷದ ಇತಿಹಾಸದಲ್ಲೇ ಅತ್ಯಂತ ಕಿರಿಯ ಕಾರ್ಯಾಧ್ಯಕ್ಷ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

- Advertisement -

ರಾಜಕೀಯ ಹಿನ್ನೆಲೆ ಮತ್ತು ಆರಂಭ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ನಿತಿನ್ ನಬಿನ್ ಅವರ ರಾಜಕೀಯ ಪ್ರವೇಶ ಆಕಸ್ಮಿಕವಾದರೂ, ಅವರಿಗೆ ರಾಜಕೀಯ ವಂಶಪಾರಂಪರಿಕವಾಗಿದೆ. ಇವರು ಬಿಹಾರ ಬಿಜೆಪಿಯ ಹಿರಿಯ ನಾಯಕ ಹಾಗೂ ಶಾಸಕರಾಗಿದ್ದ ದಿವಂಗತ ನಬಿನ್ ಕಿಶೋರ್ ಸಿನ್ಹಾ ಅವರ ಪುತ್ರ. 2006ರಲ್ಲಿ ತಂದೆಯ ನಿಧನದ ನಂತರ ತೆರವಾದ ಪಾಟ್ನಾ ಪಶ್ಚಿಮ ಕ್ಷೇತ್ರದಿಂದ (ನಂತರ ಬಂಕಿಪುರ ಕ್ಷೇತ್ರ) ಸ್ಪರ್ಧಿಸುವ ಮೂಲಕ ರಾಜಕೀಯಕ್ಕೆ ಬಂದರು. ಅಂದಿನಿಂದ ಸತತ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಅವರು, ತಮ್ಮ ಕ್ಷೇತ್ರದಲ್ಲಿ ಅಜೇಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಬಿಹಾರ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಮತ್ತು ನಗರಾಭಿವೃದ್ಧಿ ಸಚಿವರಾಗಿಯೂ ಅವರು ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.

ಸಂಘಟನಾ ಚತುರತೆ ಮತ್ತು ಛತ್ತೀಸ್‌ಗಢದ ಯಶಸ್ಸು:

ನಿತಿನ್ ನಬಿನ್ ಕೇವಲ ಜನಪ್ರತಿನಿಧಿಯಲ್ಲ, ಬದಲಿಗೆ ಪಕ್ಷದ ಸಂಘಟನೆಯಲ್ಲಿ ಪಳಗಿದ ನಾಯಕ. ಭಾರತೀಯ ಜನತಾ ಯುವ ಮೋರ್ಚಾದ (BJYM) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ಆದರೆ, ಹೈಕಮಾಂಡ್ ಕಣ್ಣಿಗೆ ಇವರು ಪ್ರಬಲವಾಗಿ ಕಂಡಿದ್ದು ಛತೀಸ್‌ಗಢ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ. ಛತ್ತೀಸ್‌ಗಢದ ಸಹ-ಉಸ್ತುವಾರಿಯಾಗಿ ನೇಮಕಗೊಂಡಿದ್ದ ನಿತಿನ್, ಅಲ್ಲಿನ ಕಾಂಗ್ರೆಸ್ ಸರ್ಕಾರದ ವಿರುದ್ಧ ತಂತ್ರ ರೂಪಿಸಿ, ಪಕ್ಷವನ್ನು ಗೆಲುವಿನ ದಡ ಮುಟ್ಟಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ತೆರೆಮರೆಯಲ್ಲಿ ನಿಂತು ಬೂತ್ ಮಟ್ಟದ ಕಾರ್ಯಕರ್ತರನ್ನು ಹುರಿದುಂಬಿಸುವ ಅವರ ಶೈಲಿ ಕೇಂದ್ರ ನಾಯಕತ್ವದ ಮೆಚ್ಚುಗೆ ಗಳಿಸಿತ್ತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ಯಾಲೆಟ್ ಪೇಪರ್’ ಬಂದರೆ ಎಲ್ಲವೂ ಸರಿಯಾಗುವುದೇ?

ಏಕೆ ಈ ಆಯ್ಕೆ?

ಜೆ.ಪಿ. ನಡ್ಡಾ ಅವರ ಉತ್ತರಾಧಿಕಾರಿಯಾಗಿ ಅಥವಾ ಪಕ್ಷದ ದೈನಂದಿನ ಚಟುವಟಿಕೆಗಳನ್ನು ಮುನ್ನಡೆಸಲು ಒಬ್ಬ ಕ್ರಿಯಾಶೀಲ ಹಾಗೂ ವಿವಾದರಹಿತ ನಾಯಕನ ಅಗತ್ಯವಿತ್ತು. ಆರ್‌ಎಸ್‌ಎಸ್ ಹಿನ್ನೆಲೆಯ ಕುಟುಂಬದಿಂದ ಬಂದಿರುವ ಇವರು, ಸೈದ್ಧಾಂತಿಕವಾಗಿ ಪಕ್ಷಕ್ಕೆ ನಿಷ್ಠರು. ಬಿಹಾರದ ಕಾಯಸ್ಥ ಸಮುದಾಯಕ್ಕೆ ಸೇರಿದವರಾದರೂ, ಹೆಚ್ಚಾಗಿ ಹಿಂದುತ್ವದ ಅಜೆಂಡಾವನ್ನು ನೆಚ್ಚಿಕೊಂಡವರು.

ಗುಜರಾತ್ ಮತ್ತು ಉತ್ತರ ಪ್ರದೇಶದ ಹೊರಗಿನ (ಬಿಹಾರದ) ನಾಯಕನೊಬ್ಬನಿಗೆ ಮಣೆ ಹಾಕುವ ಮೂಲಕ, ಬಿಜೆಪಿ ತನ್ನ ಸಾಂಪ್ರದಾಯಿಕ ಹಿಡಿತವನ್ನು ಮತ್ತು ನಾಯಕತ್ವವನ್ನು ವಿಸ್ತರಿಸುವ ತಂತ್ರಗಾರಿಕೆ ಅನುಸರಿಸಿದೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ, ತಂದೆಯ ನೆರಳಿನಿಂದ ಹೊರಬಂದು, ಸಂಘಟನಾತ್ಮಕ ಸಾಮರ್ಥ್ಯದ ಮೂಲಕವೇ ದೆಹಲಿಯ ಪ್ರಬಲ ಪೀಠವೇರಿರುವ ನಿತಿನ್ ನಬಿನ್, ಮುಂಬರುವ ದಿನಗಳಲ್ಲಿ ಬಿಜೆಪಿಯ ಚಹರೆಯನ್ನು ಹೇಗೆ ಬದಲಿಸಲಿದ್ದಾರೆ ಎಂಬುದು ಕುತೂಹಲಕರ ಸಂಗತಿ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ: ಲೆಕ್ಕಾಚಾರವೇನು?

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು...

ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...