‘ನಾನು ರಾಹುಲಿಯನ್ ಅಲ್ಲ’: ಕಾಂಗ್ರೆಸ್‌ಗೆ ಮತ್ತೆ ಮುಜುಗರ ತಂದ ಮಣಿಶಂಕರ್ ಅಯ್ಯರ್

Date:

ಕೇರಳ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಮತ್ತೆ ಮುಜುಗರ ತಂದಿದ್ದಾರೆ. ಕೇರಳದ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಹೊಗಳಿ, ಕಾಂಗ್ರೆಸ್ ನಾಯಕತ್ವದ ವಿರುದ್ಧವೇ ಹರಿಹಾಯ್ದಿರುವ ಅಯ್ಯರ್, ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.

- Advertisement -

ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅಯ್ಯರ್ “ನಾನು ಗಾಂಧಿವಾದಿ, ನೆಹರೂವಾದಿ ಹಾಗೂ ರಾಜೀವ್‌ವಾದಿ. ಆದರೆ ನಾನೊಬ್ಬ ‘ರಾಹುಲಿಯನ್’ (ರಾಹುಲ್ ಗಾಂಧಿ ಅನುಯಾಯಿ) ಅಲ್ಲ,” ಎಂದು ಹೇಳಿದ್ದಾರೆ. ಅಷ್ಟೇ ಅಲ್ಲದೆ, ಕಾಂಗ್ರೆಸ್ ವಕ್ತಾರ ಪವನ್ ಖೇರಾ ಅವರನ್ನು “ಗಿಳಿ” ಎಂದು ಜರಿದ ಅವರು, “ಒಂದು ವೇಳೆ ಖೇರಾ ನನ್ನನ್ನು ಉಚ್ಚಾಟಿಸಿದರೆ, ನಾನು ಸಂತೋಷದಿಂದ ಹೊರಹೋಗುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಭಾನುವಾರ ಕೇರಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಪಿಣರಾಯಿ ವಿಜಯನ್ ಅವರನ್ನು ಉದ್ದೇಶಿಸಿ, “ಕಾಂಗ್ರೆಸ್ ಕೈಬಿಟ್ಟಿರುವ ಜವಾಬ್ದಾರಿಯನ್ನು ನೀವೇ ಹೊತ್ತುಕೊಳ್ಳಿ” ಎಂದು ಹೇಳುವ ಮೂಲಕ ಅಯ್ಯರ್ ವಿವಾದದ ಕಿಡಿ ಹೊತ್ತಿಸಿದ್ದರು.

ಅಯ್ಯರ್ ಹೇಳಿಕೆ ಹೊರಬೀಳುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಕಾಂಗ್ರೆಸ್, ತಕ್ಷಣವೇ ಅಂತರ ಕಾಯ್ದುಕೊಂಡಿದೆ. “ಕಳೆದ ಕೆಲವು ವರ್ಷಗಳಿಂದ ಅಯ್ಯರ್ ಅವರಿಗೂ ಪಕ್ಷಕ್ಕೂ ಸಂಬಂಧವಿಲ್ಲ. ಅವರು ವೈಯಕ್ತಿಕ ನೆಲೆಯಲ್ಲಿ ಮಾತನಾಡುತ್ತಾರೆ,” ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖರ್ಗೆ ಭಾಷಣ ಕಿತ್ತು ಹಾಕಿದ್ದು ಖಂಡನೀಯ; ಅಂದು ದ್ರೋಣಾಚಾರ್ಯ, ಇಂದು ಸಂಘಾಚಾರ್ಯ!

ಮಣಿಶಂಕರ್ ಅಯ್ಯರ್ ಅವರು ಕಾಂಗ್ರೆಸ್ ಪಾಲಿಗೆ ಮುಜುಗರ ತಂದಿರುವುದು ಇದೇ ಮೊದಲೇನಲ್ಲ. 2014ರ ಲೋಕಸಭೆ ಚುನಾವಣೆಗೂ ಮುನ್ನ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ “ಈ ಚಾಯ್‌ವಾಲಾ ಬಂದು ಇಲ್ಲಿ ಚಹಾ ಮಾರಲಿ,” ಎಂದು ಅಯ್ಯರ್ ಲೇವಡಿ ಮಾಡಿದ್ದರು. ಈ ಹೇಳಿಕೆಯನ್ನು ಮೋದಿ ತಮ್ಮ ಚುನಾವಣಾ ಪ್ರಚಾರದ ಪ್ರಬಲ ಅಸ್ತ್ರವನ್ನಾಗಿ ಮಾಡಿಕೊಂಡಿದ್ದರು.

​ಅದಾದ ಬಳಿಕ, 2017ರ ಗುಜರಾತ್ ಚುನಾವಣೆ ವೇಳೆ ಮೋದಿಯವರನ್ನು “ನೀಚ ಮನುಷ್ಯ” ಎಂದು ಕರೆದಿದ್ದರು. ಇದು ಗುಜರಾತ್ ಅಸ್ಮಿತೆಗೆ ಆದ ಅವಮಾನ ಎಂದು ಬಿಜೆಪಿ ಬಿಂಬಿಸಿತ್ತು. ಆಗ ಕಾಂಗ್ರೆಸ್ ಅಯ್ಯರ್ ಅವರನ್ನು ಅಮಾನತುಗೊಳಿಸಿತ್ತು.

​ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಶೈಕ್ಷಣಿಕ ಹಿನ್ನೆಲೆಯ ಬಗ್ಗೆಯೂ 2022ರಲ್ಲಿ ಅಯ್ಯರ್ ನೀಡಿದ್ದ ಹೇಳಿಕೆ ಪಕ್ಷದೊಳಗೆ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜೀವ್ ಗಾಂಧಿ ಕೇಂಬ್ರಿಡ್ಜ್‌ನಲ್ಲಿ ಅನುತ್ತೀರ್ಣರಾಗಿದ್ದರು ಎಂಬರ್ಥದ ಮಾತುಗಳನ್ನು ಆಡಿದಾಗ, ಕಾಂಗ್ರೆಸ್ ನಾಯಕರಾದ ನಾನಾ ಪಟೋಲೆ ಮತ್ತು ಅಶೋಕ್ ಗೆಹ್ಲೋಟ್ ಅವರು ಅಯ್ಯರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಟೀಕಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...