ಆಹಾರ ಸುರಕ್ಷತಾ ಕಾಯ್ದೆ ತಿಕ್ಕಾಟ: FSSAI ವಿರುದ್ಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ!

Date:

ಆಹಾರ ಉತ್ಪನ್ನಗಳ ತಪಾಸಣೆ ಮತ್ತು ಪರವಾನಗಿ ನೀಡುವ ಅಧಿಕಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತು ‘ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ’ದ (FSSAI) ನಡುವೆ ಕಾನೂನು ಸಮರ ಆರಂಭವಾಗಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿರುವ FSSAI ರಾಜ್ಯಗಳ ಅಧಿಕಾರವನ್ನು ಕಸಿದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಮಹಾರಾಷ್ಟ್ರ ಸರ್ಕಾರ, FSSAI ನಿಯಮಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.

- Advertisement -

ಸರ್ಕಾರವು ತನ್ನ ಅರ್ಜಿಯಲ್ಲಿ; “FSSAI ‘ಕೇಂದ್ರೀಯ ಆಹಾರ ಸುರಕ್ಷತಾ ಅಧಿಕಾರಿಗಳನ್ನು’ ನೇಮಿಸುವ ಮೂಲಕ ಅಕ್ರಮವಾಗಿ ಪರ್ಯಾಯ ವ್ಯವಸ್ಥೆಯನ್ನು ಸೃಷ್ಟಿಸಿದೆ ಮತ್ತು 2006ರ ಕಾಯ್ದೆಯಡಿ ರಾಜ್ಯ ಕಮಿಷನರ್‌ಗಳಿಗೆ ಇದ್ದ ಪರವಾನಗಿ ಮತ್ತು ಜಾರಿ ಅಧಿಕಾರಗಳನ್ನು ಕಸಿದುಕೊಂಡಿದೆ” ಎಂದು ಪ್ರತಿಪಾದಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಅಲ್ಲದೆ, FSSAI ಸಂಸ್ಥೆ 2023ರ ಮೇನಲ್ಲಿ ಹೊರಡಿಸಿದ್ದ ಆದೇಶವನ್ನು ಸರ್ಕಾರ ವಿರೋಧಿಸಿದೆ. ಈ ಆದೇಶದ ಪ್ರಕಾರ, ಕೇಂದ್ರದ ಪರವಾನಗಿ ಹೊಂದಿರುವ ಕಂಪನಿಗಳ ಮೇಲೆ ತಪಾಸಣೆ ನಡೆಸದಂತೆ ರಾಜ್ಯದ ಅಧಿಕಾರಿಗಳಿಗೆ ನಿಷೇಧ ಹೇರಲಾಗಿತ್ತು. ಅಷ್ಟೇ ಅಲ್ಲದೆ, ‘ಫಾಸ್ಕೋಸ್’ (FoSCoS – Food Safety Compliance System) ವೆಬ್‌ಸೈಟ್ ಮೂಲಕವೇ ಎಲ್ಲ ಉದ್ಯಮಗಳನ್ನು ಕೇಂದ್ರೀಕೃತಗೊಳಿಸಲಾಗಿತ್ತು. ಫಾಸ್ಕೋಸ್ ಎಂಬುದು 2012ರಿಂದ ಜಾರಿಯಲ್ಲಿದ್ದ ಎಫ್‌ಎಲ್‌ಆರ್‌ಎಸ್ ವ್ಯವಸ್ಥೆಯ ನವೀಕೃತ ಆವೃತ್ತಿಯಾಗಿದ್ದು, ದೇಶಾದ್ಯಂತ ಪರವಾನಗಿ ನೀಡುವುದನ್ನು ನಿಯಂತ್ರಿಸುತ್ತದೆ.

ಈ ಆದೇಶವನ್ನು ಸಂವಿಧಾನಬಾಹಿರವೆಂದು ಕರೆದಿರುವ ಸರ್ಕಾರವು, “FSSAI ಹೊರಡಿಸಿದ ನಿಯಮಗಳನ್ನು ತಕ್ಷಣವೇ ರದ್ದುಗೊಳಿಸಬೇಕು, ತಪಾಸಣೆ ಮೇಲಿನ ನಿಷೇಧಕ್ಕೆ ತಡೆ ನೀಡಬೇಕು, ಪರವಾನಗಿ ಡೇಟಾಬೇಸ್ ಅನ್ನು ಮತ್ತೆ ರಾಜ್ಯದ ನಿಯಂತ್ರಣಕ್ಕೆ ನೀಡಬೇಕು” ಎಂದು ನ್ಯಾಯಾಲಯವನ್ನು ಕೋರಿದೆ.

ಈ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಮಹೇಶ್ ಸಿ. ತ್ರಿಪಾಠಿ ಮತ್ತು ನ್ಯಾಯಮೂರ್ತಿ ಅದ್ವೈತ್ ಸೇಥ್ನಾ ಅವರನ್ನೊಳಗೊಂಡ ಪೀಠವು ಕೈಗೆತ್ತಿಕೊಳ್ಳಲಿದೆ ಎಂದು ಕೋರ್ಟ್ ಮೂಲಗಳು ತಿಳಿಸಿವೆ.

2006ರ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆಯಡಿ ಸ್ಥಾಪನೆಯಾದ FSSAI, ಆಹಾರ ಸಂಬಂಧಿತ ಮಾನದಂಡಗಳನ್ನು ರೂಪಿಸುವುದು, ಪ್ರಮಾಣೀಕರಣ ಸಂಸ್ಥೆಗಳು ಹಾಗೂ ಪ್ರಯೋಗಾಲಯಗಳ ಮಾನ್ಯತೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸುವುದು ಮತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ವೈಜ್ಞಾನಿಕ ಸಲಹೆ ನೀಡುವುದು ಸೇರಿದಂತೆ ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ವಿಮಾನ ಇಂಧನ ತೆರಿಗೆ ಇಳಿಸಿದ ತಮಿಳುನಾಡು ಸಿಎಂ ವಿಜಯ್‌

ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಿಮಾನಯಾನ ಸಂಸ್ಥೆಗಳಿಗೆ...

ಪಂಜಾಬ್‌ ಹೊಗೆ ಹರಿಯಾಣ ಬಿಟ್ಟು ನೇರವಾಗಿ ದೆಹಲಿಗೆ ಬರಲು ಪೈಪ್‌ಲೈನ್ ಇದೆಯೇ? BJPಗೆ AAP ಲೇವಡಿ

ಪಂಜಾಬ್‌ನಲ್ಲಿ ಭತ್ತದ ಹುಲ್ಲನ್ನು ಸುಡಲಾಗುತ್ತಿದೆ. ಅದರ ಹೊಗೆ ದೆಹಲಿಯಲ್ಲಿ ವಾಯು ಮಾಲಿನ್ಯಕ್ಕೆ...

‘ಉಗ್ರ ಕೃತ್ಯದ ಆರೋಪಿಗೆ ಇಷ್ಟೊಂದು ವಿನಾಯಿತಿ ಏಕೆ?’- ಅಮೆರಿಕ ಪ್ರಜೆ ವ್ಯಾನ್‌ಡೈಕ್ ಬಿಡುಗಡೆಗೆ ಕಾಂಗ್ರೆಸ್ ಕಿಡಿ

ಮ್ಯಾನ್ಮಾರ್‌ ಶಸ್ತ್ರಾಸ್ತ್ರ ತರಬೇತಿ ಪ್ರಕರಣದಲ್ಲಿ ಆರೋಪಿಯಾಗಿರುವ ಅಮೆರಿಕದ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್...