ದೆಹಲಿಯಲ್ಲಿ 10, 15 ವರ್ಷ ಹಳೆಯ ವಾಹನಗಳಿಗೆ ಇಂಧನ ನಿಷೇಧ; ಉಲ್ಲಂಘಿಸಿದರೆ ವಾಹನ ಜಪ್ತಿ

Date:

Advertisements

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ತಗ್ಗಿಸುವ ಉದ್ದೇಶದಿಂದ, (ಇಂದಿನಿಂದ) 2025ರ ಜುಲೈ 1) ಹಳೆಯ ವಾಹನಗಳಿಗೆ ಇಂಧನ (ಪೆಟ್ರೋಲ್ ಮತ್ತು ಡೀಸೆಲ್) ಮಾರಾಟದ ಮೇಲೆ ನಿಷೇಧ ಹೇಳಲಾಗಿದೆ. ವಾಯು ಗುಣಮಟ್ಟ ನಿರ್ವಹಣೆ ಆಯೋಗದ (CAQM) ನಿರ್ದೇಶನ ಮೇಲೆ ದೆಹಲಿ ಸರ್ಕಾರವು ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದೆ.

ಎಂಡ್-ಆಫ್-ಲೈಫ್ (EoL) ವಾಹನಗಳೆಂದು ಗುರುತಿಸಲಾದ 15 ವರ್ಷಕ್ಕಿಂತ ಹಳೆಯ ವಾಹನಗಳು (ಪೆಟ್ರೋಲ್, ಮತ್ತು ಸಿಎನ್‌ಜಿ) ಮತ್ತು 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ಮಾರಾಟವನ್ನು ನಿಷೇಧಿಸಲಾಗಿದೆ. ಈ ನಿಯಮವು ದೆಹಲಿಯಲ್ಲಿ ನೋಂದಾಯಿತವಾದ ಅಥವಾ ಇತರ ರಾಜ್ಯಗಳಲ್ಲಿ ನೋಂದಾಯಿತವಾದ ಎಲ್ಲ ವಾಹನಗಳಿಗೂ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ.

ದೆಹಲಿಯ ಒಟ್ಟು ಮಾಲಿನ್ಯದ ಪೈಕಿ 51% ಮಾಲಿನ್ಯವು ವಾಹನಗಳಿಂದಲೇ ಆಗುತ್ತಿದೆ. ಚಳಿಗಾಲದಲ್ಲಿ ಮಾಲಿನ್ಯ ಪ್ರಮಾಣವು ಹೆಚ್ಚಾಗುವ ಕಾರಣ, ಮಳೆ ಮತ್ತು ಚಳಿಗಾಲದಲ್ಲಿ ವಾಯು ಮಾಲಿನ್ಯವನ್ನು ತಡೆಯಲು ಹೆಚ್ಚು ಇಂಗಾಲವನ್ನು ಹೊರಸೂಸುವ ಹಳೆಯ ವಾಹನಗಳ ಬಳಕೆಯನ್ನು ತಡೆಯಬೇಕಿದೆ. ಆದ್ದರಿಂದ, ಹಳೆಯ ವಾಹನಗಳಿಗೆ ಇಂಧನ ಮಾರಾಟವನ್ನು ನಿರ್ಬಂಧಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ.

Advertisements

ಈ ನಿಷೇಧವನ್ನು 2018ರ ಸುಪ್ರೀಂ ಕೋರ್ಟ್ ತೀರ್ಪಿಗೆ ಅನುಗುಣವಾಗಿ ಹೊರಡಿಸಲಾಗಿದೆ. ಅಂದಿನ ನ್ಯಾಯಾಲಯದ ಆದೇಶವು ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ವಾಹನಗಳನ್ನು ನಿಷೇಧಿಸಿತ್ತು. ಜೊತೆಗೆ, ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು (NGT) ತನ್ನ 2014ರ ಆದೇಶದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ನಿಲುಗಡೆ ಮಾಡುವುದನ್ನು ಕೂಡ ನಿಷೇಧಿಸಿತ್ತು ಸರ್ಕಾರ ಸಮರ್ಥಿಸಿಕೊಂಡಿದೆ.

ಹೊಸ ನಿಯಮವನ್ನು ಜಾರಿಗೊಳಿಸಲು ‘ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್ ಕ್ಯಾಮೆರಾ’ಗಳನ್ನು ದೆಹಲಿಯ ಸುಮಾರು 350 ಪೆಟ್ರೋಲ್ ಪಂಪ್‌ಗಳಲ್ಲಿ ಅಳವಡಿಸಲಾಗಿದೆ. ಇವು ವಾಹನಗಳ ನಂಬರ್ ಪ್ಲೇಟ್‌ಗಳನ್ನು ‘VAHAN’ ಡೇಟಾಬೇಸ್‌ ಆಧಾರದ ಮೇಲೆ ವಾಹನದ ಇಂಧನ ಪ್ರಕಾರ, ಅದರ ವಯಸ್ಸು ಹಾಗೂ ನೋಂದಣಿ ವಿವರಗಳನ್ನು ಪರಿಶೀಲಿಸುತ್ತದೆ. ಸಾರಿಗೆ ಇಲಾಖೆಗೆ ಮಾಹಿತಿ ನೀಡುತ್ತದೆ.

ಹಳೆಯ ವಾಹನಗಳನ್ನು ಪತ್ತೆ ಮಾಡಿ, ನಿರ್ಬಂಧಿಸಲು ದೆಹಲಿ ಸಾರಿಗೆ ಇಲಾಖೆ, ದೆಹಲಿ ಪೊಲೀಸ್, ಟ್ರಾಫಿಕ್ ಪೊಲೀಸ್ ಮತ್ತು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸಿಬ್ಬಂದಿಗಳನ್ನು ಒಳಗೊಂಡ 350 ತಂಡಗಳನ್ನು ಪೆಟ್ರೋಲ್ ಪಂಪ್‌ಗಳಲ್ಲಿ ನಿಯೋಜಿಸಲಾಗಿದೆ. ಈ ತಂಡಗಳು ಇಂಧನ ನಿಷೇಧ ನಿಯಮವನ್ನು ಉಲ್ಲಂಘಿಸುವ ವಾಹನಗಳನ್ನು ಜಪ್ತಿ ಮಾಡುತ್ತವೆ. ಮೊದಲ ದಿನವೇ (ಜುಲೈ 1) 16 ವಾಹನಗಳನ್ನು ಜಪ್ತಿ ಮಾಡಲಾಗಿದೆ. ನಿಯಮವನ್ನು ಉಲ್ಲಂಘಿಸುವ ವಾಹನಗಳಿಗೆ ಮೋಟಾರು ವಾಹನ ಕಾಯಿದೆ 1988ರ ಸೆಕ್ಷನ್ 192ರ ಅಡಿಯಲ್ಲಿ ದಂಡ ವಿಧಿಸಲಾಗುತ್ತದೆ ಎಂದು ವರದಿಯಾಗಿದೆ.

ಈ ಲೇಖನ ಓದಿದ್ದೀರಾ?: ಮೋದಿ 3.0 | ಒಂದೇ ವರ್ಷದಲ್ಲಿ 947 ಹೇಟ್‌ ಕ್ರೈಮ್; ಆತಂಕ ಹುಟ್ಟಿಸುತ್ತೆ APCR ವರದಿ

“ಪೆಟ್ರೋಲ್ ಪಂಪ್‌ ಕೇಂದ್ರಗಳು 15 ವರ್ಷಕ್ಕಿಂತ ಹಳೆಯ ಪೆಟ್ರೋಲ್ ಮತ್ತು ಸಿಎನ್‌ಜಿ ವಾಹನಗಳು ಹಾಗೂ 10 ವರ್ಷಕ್ಕಿಂತ ಹಳೆಯ ಡೀಸೆಲ್ ವಾಹನಗಳಿಗೆ ಇಂಧನ ವಿತರಣೆ ಮಾಡಲಾಗುವುದಿಲ್ಲ” ಎಂಬ ಸೂಚನೆಯನ್ನು ಪ್ರದರ್ಶಿಸಲು ಸೂಚಿಸಲಾಗಿದೆ.

ದೆಹಲಿ ಸರ್ಕಾರದ ಕ್ರಮವನ್ನು ಎಎಪಿ ಟೀಕಿಸಿದೆ. ಎಎಪಿ ನಾಯಕ ಸೌರಭ್ ಭಾರದ್ವಾಜ್ ಅವರು ಈ ನಿಷೇಧವನ್ನು ಗೊಂದಲಮಯ ಮತ್ತು ಅಪರಿಣಾಮಕಾರಿ ಎಂದು ಟೀಕಿಸಿದ್ದಾರೆ. ಪೇಟಿಎಂ ಸಂಸ್ಥಾಪಕ ವಿಜಯ್ ಶೇಖರ್ ಶರ್ಮಾ ಅವರು ಈ ನಿಷೇಧವು ಜನರನ್ನು ವಾಹನ ಖರೀದಿಯ ಬದಲಿಗೆ ವಾಹನಗಳನ್ನು ಲೀಸ್‌ಗೆ ಪಡೆಯುವಂತೆ ಪ್ರೇರೇಪಿಸಬಹುದು ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಸುಮಾರು 62 ಲಕ್ಷ EoL ವಾಹನಗಳಿವೆ. ಇವುಗಳಲ್ಲಿ 41 ಲಕ್ಷ ದ್ವಿಚಕ್ರ ವಾಹನಗಳು ಮತ್ತು 18 ಲಕ್ಷ ನಾಲ್ಕು ಚಕ್ರ ವಾಹನಗಳು ಸೇರಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X