ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ; ಬೆಂಗಳೂರಿಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ಹಾರಾಟ ಸ್ಥಗಿತ

Date:

ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಕಾಣಿಸಿಕೊಂಡ ಹಿನ್ನೆಲೆ ಲಂಡನ್‌ನಿಂದ ಬೆಂಗಳೂರಿಗೆ ಹಾರಾಟ ನಡೆಸಲು ನಿಗದಿಯಾಗಿದ್ದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.

- Advertisement -

ದೋಷ ಕಾಣಿಸಿಕೊಂಡ ಬಗ್ಗೆ ಪೈಲಟ್‌ ವರದಿ ಮಾಡಿದ ಬಳಿಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ನಿಗದಿಯಂತೆ AI132 ಸಂಖ್ಯೆಯ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಲಂಡನ್‌ನಿಂದ ಬೆಂಗಳೂರಿಗೆ ತೆರಳಬೇಕಿತ್ತು. ಆದರೆ ವಿಮಾನ ಹಾರಾಟಕ್ಕೆ ಮುಂಚಿತವಾಗಿ ಪೈಲಟ್‌ ಕಾರ್ಯ ವಿಧಾನಗಳನ್ನು ಪರಿಶೀಲಿಸುವಾಗ ಫ್ಯೂಯಲ್ ಕಂಟ್ರೋಲ್‌ ಸ್ವಿಚ್‌ನಲ್ಲಿ ದೋಷ ಕಾಣಿಸಿಕೊಂಡಿರುವುದನ್ನು ಗುರುತಿಸಿದರು. ಈ ಬಗ್ಗೆ ವಿಮಾನಯಾನ ಸಂಸ್ಥೆಗೆ ವರದಿ ಮಾಡಿದರು. ಕೂಡಲೇ ಎಚ್ಚೆತ್ತ ಸಂಸ್ಥೆ ಆ ವಿಮಾನ ಸೇವೆಯನ್ನು ರದ್ದುಗೊಳಿಸಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ| ₹100 ತೆರಿಗೆಯಲ್ಲಿ ₹5 ಕೂಡ ವಾಪಸು ಸಿಗ್ತಿಲ್ಲ; ರಾಜ್ಯಕ್ಕೆ ಮೋದಿ ಮುಂದುವರೆಸಿದ ಅಗಾಧ ಅನ್ಯಾಯ!

ಈ ಕುರಿತು ವಿಮಾನಯಾನ ಸಂಸ್ಥೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. “ನಮ್ಮ ಪೈಲಟ್‌ಗಳಲ್ಲಿ ಒಬ್ಬರು ಇಂಧನ ನಿಯಂತ್ರಣ ಸ್ವಿಚ್‌ನಲ್ಲಿ ದೋಷ ಇರುವ ಬಗ್ಗೆ ವರದಿ ಮಾಡಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ಬಂದಿದೆ. ಆರಂಭಿಕ ಮಾಹಿತಿ ಸ್ವೀಕರಿಸಿದ ಬಳಿಕ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಿದ್ದೇವೆ” ಎಂದು ಹೇಳಿದೆ.

ಅಲ್ಲದೇ ಈ ವಿಷಯವನ್ನು ಏರ್‌ ಇಂಡಿಯಾ ಸಂಸ್ಥೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ದ ಗಮನಕ್ಕೆ ತಂದಿದೆ. ವಿಮಾನ ತಯಾರಕರೊಂದಿಗೆ ಸಮನ್ವಯದ ಜೊತೆಗೆ ಹೆಚ್ಚಿನ ತಾಂತ್ರಿಕ ಪರಿಶೀಲನೆ ನಡೆಯುತ್ತಿವೆ ಎಂದು ಏರ್ ಇಂಡಿಯಾ ದೃಢಪಡಿಸಿದೆ.

2025 ರಲ್ಲಿ ಅಹಮದಾಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ ಡಿಜಿಸಿಎ ನಿರ್ದೇಶನದಂತೆ ಏರ್‌ ಇಂಡಿಯಾ ತನ್ನ ಎಲ್ಲ ಬೋಯಿಂಗ್‌ 787 ವಿಮಾನಗಳಲ್ಲಿ ಇಂಧನ ನಿಯಂತ್ರಣ ಸ್ವಿಚ್‌ಗಳ ತಪಾಸಣೆ ನಡೆಸಿತ್ತು. ಆ ನಂತರ ಯಾವುದೇ ಸಮಸ್ಯೆಗಳು ಕಂಡುಬಂದಿರಲಿಲ್ಲ. ಏರ್ ಇಂಡಿಯಾದಲ್ಲಿ, ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯು ಪ್ರಮುಖ ಆದ್ಯತೆಯಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲೆ ಉಳಿಯಲಿ, ಕೌಶಲ್ಯ ಬೆಳೆಯಲಿ: ಕರ್ನಾಟಕ ಪರ್ವ 2026ಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಶನಿವಾರ ವೈವಿಧ್ಯತೆಯಲ್ಲಿ ಏಕತೆ, ಕೌಶಲ್ಯದಲ್ಲಿ ಸ್ವಾವಲಂಬನೆ ಎಂಬ...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...