ನವದೆಹಲಿ ಜಿ-20 ಶೃಂಗಸಭೆ ಮುಕ್ತಾಯ: 2024ರ ಶೃಂಗಸಭೆ ಬ್ರೆಜಿಲ್‌ನಲ್ಲಿ

Date:

ಭಾರತದಲ್ಲಿ ನಡೆಯುತ್ತಿರುವ 2023ರ ಶೃಂಗಸಭೆ ಮುಕ್ತಾಯಗೊಂಡಿದ್ದು, 2024 ರ ಜಿ20 ಶೃಂಗಸಭೆಯ ಅಧ್ಯಕ್ಷತೆಯನ್ನು ಬ್ರೆಜಿಲ್‌ ದೇಶ ವಹಿಸಿಕೊಂಡಿದೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಜಿ-20 ಶೃಂಗಸಭೆಯ ಅಧ್ಯಕ್ಷತೆ ಜವಾಬ್ದಾರಿಯನ್ನು ಬ್ರೆಜಿಲ್‌ ದೇಶದ ಅಧ್ಯಕ್ಷರಿಗೆ ಹಸ್ತಾಂತರಿಸಿದ್ದಾರೆ.

ಜಿ-20 ಶೃಂಗಸಭೆಯ ಭಾಗವಾಗಿ 2ನೇ ದಿನದಂದು (ಸೆ.10) ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಬೆಳಗ್ಗೆ ವಿಶ್ವ ನಾಯಕರು ದೆಹಲಿಯಲ್ಲಿರುವ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪನಮನ ಸಲ್ಲಿಸಿದರು. ಬಳಿಕ ನಡೆದ ಅಧಿವೇಶನದಲ್ಲಿ ಪ್ರಧಾನಿ ಮೋದಿ ಅವರು ಮುಂದಿನ ವರ್ಷದ ಜಿ-20ಯ ಅಧ್ಯಕ್ಷತೆ ವಹಿಸಿಕೊಳ್ಳಲು ಬ್ಯಾಟನ್‌ ಅನ್ನು ಬ್ರೆಜಿಲ್‌ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸೆ.9 ರಂದು ನವದೆಹಲಿಯ ಭಾರತ್ ಮಂಟಪಂ ಇಂಟರ್‌ನ್ಯಾಷನಲ್ ಎಕ್ಸಿಬಿಷನ್-ಕನ್ವೆನ್ಷನ್ ಸೆಂಟರ್‌ನಲ್ಲಿ ಜಿ-20 ನಾಯಕರ ಶೃಂಗಸಭೆಗೆ ಚಾಲನೆ ನೀಡಲಾಗಿತ್ತು. ಜಿ-20ಯ ನಾಯಕರು ಆಫ್ರಿಕಾ ಒಕ್ಕೂಟವನ್ನು ಕಾಯಂ ಸದಸ್ಯರನ್ನಾಗಿ ತಮ್ಮ ಗುಂಪಿಗೆ ಸ್ವಾಗತಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರೋಟೋಕಾಲ್ ಉಲ್ಲಂಘನೆ: ಬೈಡನ್‌ ಜಿ20 ಬೆಂಗಾವಲು ಪಡೆಯ ಚಾಲಕನ ಬಂಧನ

ಜಿ-20 ಅಧ್ಯಕ್ಷ ಸ್ಥಾನವನ್ನು ಹೊಂದಿರುವ ಭಾರತವು ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಧ್ಯೇಯವಾಕ್ಯವನ್ನು ಈ ವರ್ಷದ ಶೃಂಗಸಭೆಯ ವಿಷಯ ಎಂದು ಪ್ರತಿಪಾದಿಸಿದೆ.

ಸಮಾರೋಪ ಸಮಾರಂಭದ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ‘ಅತ್ಯುತ್ತಮವಾಗಿ ಜಿ-20ಯ ಶೃಂಗಸಭೆ ಮುಕ್ತಾಯವಾಗಿದೆ ಎಂದು ನಾನು ಘೋಷಿಸುತ್ತೇನೆ’ ಎಂದು ಹೇಳಿದರು. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯದ ಮಾರ್ಗಸೂಚಿಯು ಆಹ್ಲಾದಕರವಾಗಿರಲಿ. ಪ್ರಪಂಚದಾದ್ಯಂತ ಭರವಸೆ ಮತ್ತು ಶಾಂತಿ ಇರಲಿ. 140 ಕೋಟಿ ಭಾರತೀಯರ ಶುಭ ಹಾರೈಕೆಗಳೊಂದಿಗೆ, ನಾನು ನಿಮಗೆಲ್ಲರಿಗೂ ಧನ್ಯವಾದಗಳನ್ನು ತಿಳಿಸುತ್ತೇನೆ’ ಎಂದು ಅವರು ತಿಳಿಸಿದರು.

ಶೃಂಗಸಭೆಯ ಎರಡನೇ ದಿನದಂದು ಜಾಗತಿಕ ನಾಯಕರು ನವದೆಹಲಿಯ ರಾಜ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಅಮೆರಿಕ ಅಧ್ಯಕ್ಷ ಜೋ ಬೈಡನ್, ಬ್ರಿಟನ್ ಪ್ರಧಾನಿ ರಿಷಿ ಸುನಕ್, ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್, ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಮತ್ತು ಇತರ ನಾಯಕರು ಮತ್ತು ಪ್ರತಿನಿಧಿಗಳು ಮಹಾತ್ಮ ಗಾಂಧಿ ಅವರ ಸ್ಮಾರಕಕ್ಕೆ ಪುಷ್ಪಾರ್ಚನೆ ಸಲ್ಲಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹರಿಯಾಣದಲ್ಲಿ ಬಿಜೆಪಿ ವಿರೋಧಿ ಅಲೆ | ಬಿಜೆಪಿಗೆಷ್ಟು ನಷ್ಟ – ಕಾಂಗ್ರೆಸ್‌ಗೆ ಎಷ್ಟು ಲಾಭ?

ಹರಿಯಾಣದ ಎಲ್ಲ 10 ಲೋಕಸಭಾ ಕ್ಷೇತ್ರಗಳಿಗೆ ಮೇ 25ರಂದು ಮತದಾನ ಮುಗಿದಿದೆ....

ರಾಜ್‌ಕೋಟ್‌ ಗೇಮ್‌ ಝೋನ್‌ ಅಗ್ನಿ ಅವಘಡ: ಇಬ್ಬರು ಪೊಲೀಸರು ಸೇರಿ ಐವರು ಅಧಿಕಾರಿಗಳ ಅಮಾನತು

ಸುಮಾರು 25ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ರಾಜ್‌ಕೋಟ್ ಗೇಮ್‌ ಝೋನ್‌...

ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ...

ತೆಲಂಗಾಣ | ಮಳೆ ಅನಾಹುತಕ್ಕೆ ಭಾನುವಾರ 12 ಮಂದಿ ಬಲಿ

ದಕ್ಷಿಣ ಭಾರತದ ನಾನಾ ಭಾಗಗಳಲ್ಲಿ ಅಕಾಲಿಕ ಮಳೆಯ ಅಬ್ಬರ ಹೆಚ್ಚಾಗಿದೆ. ಭಾನುವಾರವೂ...