ಮಹಾರಾಷ್ಟ್ರ | ಭಾರೀ ಮಳೆಗೆ ಪಲ್ಟಿಯಾದ ಗಣೇಶ ವಿಗ್ರಹ: ಅಡಿಯಲ್ಲಿ ಸಿಲುಕಿದ ಭಕ್ತರು

Date:

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಮಂಟಪಕ್ಕೆ ತರುತ್ತಿದ್ದ ವೇಳೆ ಭಾರೀ ಮಳೆ ಹಾಗೂ ಬಿರುಗಾಳಿಗೆ ಸಿಲುಕಿ ಗಣೇಶ ಮೂರ್ತಿ ದಿಢೀರ್ ಪಲ್ಟಿಯಾದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ನಾಲಾಸೋಪಾರದಲ್ಲಿ ನಡೆದಿದೆ. ಈ ವೇಳೆ ಮೂರ್ತಿಯ ಅಡಿಯಲ್ಲಿ ಸುಮಾರು 4 ರಿಂದ 5 ಭಕ್ತರು ಸಿಲುಕಿಕೊಂಡಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಇತರೆ ಭಕ್ತರು ಅವರನ್ನು ರಕ್ಷಿಸಿದ್ದಾರೆ.

- Advertisement -

ನಾಲಾಸೋಪಾರ ಈಸ್ಟ್‌ನ ಮೊರೆಗಾಂವ್ ಸಾರ್ವಜನಿಕ ಗಣೇಶೋತ್ಸವ ಮಂಡಳಿಯ ಸದಸ್ಯರು ಕಾರಖಾನೆಯಿಂದ ಗಣೇಶ ವಿಗ್ರಹವನ್ನು ಟ್ರಾಲಿ ಮೇಲೆ ಇರಿಸಿಕೊಂಡು ತಮ್ಮ ಪಂಡಾಲ್‌ನತ್ತ ಮೆರವಣಿಗೆಯಲ್ಲಿ ತರುತ್ತಿದ್ದರು. ನಾಲಾಸೋಪಾರ ಪಶ್ಚಿಮದ ಫನ್ ಫಿಯೆಸ್ಟಾ ಥಿಯೇಟರ್ ಹಾಗೂ ಯಶವಂತ್ ಗೌರವ್ ಪ್ರದೇಶದ ಬಳಿ ಮೆರವಣಿಗೆ ತಲುಪಿದಾಗ ಇದ್ದಕ್ಕಿದ್ದಂತೆ ಭಾರೀ ಮಳೆ ಮತ್ತು ಬಿರುಗಾಳಿ ಆರಂಭವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನೂ ಓದಿ: ಮಹಾರಾಷ್ಟ್ರಕ್ಕೆ ‘ಶಕ್ತಿ’ ಚಂಡಮಾರುತದ ಭೀತಿ: ಕರ್ನಾಟಕದಲ್ಲಿ ಭಾರೀ ಮಳೆ ಸೂಚನೆ

Advertisements

ವಿಗ್ರಹವು ಮಳೆಯಲ್ಲಿ ನೆನೆಯಬಾರದೆಂದು ಭಕ್ತರು ಅದರ ಮೇಲೆ ಪ್ಲಾಸ್ಟಿಕ್ ಶೀಟ್ (ತಾಡಪಾಲು) ಹೊದಿಸಲು ಯತ್ನಿಸಿದರು. ಈ ವೇಳೆ ಗಡಿಬಿಡಿಯಲ್ಲಿ ಹಾಗೂ ಗಾಳಿಯ ರಭಸಕ್ಕೆ ಟ್ರಾಲಿಯ ಸಮತೋಲನ ತಪ್ಪಿ ಬೃಹತ್ ಗಣೇಶ ಮೂರ್ತಿಯು ಪಕ್ಕಕ್ಕೆ ವಾಲಿ ನೆಲಕ್ಕುರುಳಿತು.

ಮೂರ್ತಿ ಕೆಳಗೆ ಬೀಳುತ್ತಿದ್ದಂತೆ ಅಲ್ಲಿ ಗೊಂದಲ ಹಾಗೂ ಆತಂಕದ ವಾತಾವರಣ ನಿರ್ಮಾಣವಾಯಿತು. ಮೂರ್ತಿಯ ತಳಭಾಗದಲ್ಲಿ ನಾಲ್ಕೈದು ಭಕ್ತರು ಸಿಲುಕಿಕೊಂಡಿದ್ದರು. ತಕ್ಷಣವೇ ಸ್ಥಳದಲ್ಲಿದ್ದ ಇತರ ಭಕ್ತರು ಹಾಗೂ ಸಾರ್ವಜನಿಕರು ಒಂದಾಗಿ ಮೂರ್ತಿಯನ್ನು ಮೇಲಕ್ಕೆತ್ತಿ ಸಿಲುಕಿದ್ದವರನ್ನು ಸುರಕ್ಷಿತವಾಗಿ ಹೊರಗೆಳೆದಿದ್ದಾರೆ.

ಅೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ. ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೂರ್ತಿಗೂ ಯಾವುದೇ ಹಾನಿಯಾಗಿಲ್ಲ ಎಂದು ಪೊಲೀಸರು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...

ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ...

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ...