ಗುಂಪು ಹಲ್ಲೆ: ಕಳ್ಳತನದ ಶಂಕೆಯಲ್ಲಿ ಯುವಕನನ್ನು ಹೊಡೆದು ಕೊಂದ ಗ್ರಾಮಸ್ಥರು

Date:

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬ್ಯಾಟರಿ ಕದ್ದಿದ್ದಾನೆ ಎಂಬ ಶಂಕೆಯಲ್ಲಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಥಳಿಸಿ ಬರ್ಬರವಾಗ ಕೊಂದಿರುವ ಘಟನೆ ಜಾರ್ಖಂಡ್‌ನ ಪಲಮುದಲ್ಲಿ ನಡೆದಿದೆ.

- Advertisement -

ಪಲಮುವಿನ ಪದ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತೆಲಿಯಾಹಿ ಗ್ರಾಮದಲ್ಲಿ ಶನಿವಾರ ತಡರಾತ್ರಿ ಘಟನೆ ನಡೆದಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಬ್ಯಾಟರಿ ಕಳ್ಳತನದ ಶಂಕೆಯ ಮೇಲೆ ಗ್ರಾಮಸ್ಥರು ಯುವಕನೊಬ್ಬನನ್ನು ಹಿಡಿದು ಕ್ರೂರವಾಗಿ ಥಳಿಸಿ ಕೊಂದಿದ್ದಾರೆ. ಮೃತನನ್ನು ಮುರ್ಮಾ ಗ್ರಾಮದ ನಿವಾಸಿ ಪವನ್ ರಾಮ್ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

“ಟ್ರ್ಯಾಕ್ಟರ್‌ನಿಂದ ಪವನ್ ಬ್ಯಾಟರಿ ಕದಿಯಲು ಪ್ರಯತ್ನಿಸುತ್ತಿದ್ದನೆಂಬ ಸುದ್ದಿ ಗ್ರಾಮದಲ್ಲಿ ಹರಡಿದೆ. ಕೂಡಲೇ, ಸ್ಥಳಕ್ಕೆ ಜನಸಮೂಹ ಜಮಾಯಿಸಿದೆ. ನಂತರ ಆ ವ್ಯಕ್ತಿಯನ್ನು ಹಗ್ಗದಿಂದ ಕಟ್ಟಿ, ಕೋಲುಗಳಿಂದ ಅಮಾನುಷವಾಗಿ ಥಳಿಸಲಾಗಿದೆ. ಆತ ಬಿಟ್ಟುಬಿಡುವಂತೆ ಕೋರಿಕೊಂಡರೂ, ಬಿಡದ ಗ್ರಾಮಸ್ಥರ ಗುಂಪು ಆತನನ್ನು ಥಳಿಸಿದೆ” ಎಂದು ವರದಿಯಾಗಿದೆ.

ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಪವನ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆತ ಮೃತಪಟ್ಟಿದ್ದಾನೆಂದು ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

“ಪರಾಧದಲ್ಲಿ ಭಾಗಿಯಾಗಿರುವ ಜನರನ್ನು ಗುರುತಿಸಲಾಗುತ್ತಿದೆ. ಒಬ್ಬ ವ್ಯಕ್ತಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ” ಎಂದು ಪದ್ವಾ ಪೊಲೀಸ್ ಠಾಣೆಯ ಉಸ್ತುವಾರಿ ಅಂಚಿತ್ ಕುಮಾರ್ ಹೇಳಿದ್ದಾರೆ.

“ಪಾಡ್ವಾ ಪೊಲೀಸ್ ಠಾಣೆಯಲ್ಲಿ ಹೆಸರಿಸಲಾದ ನಾಲ್ವರು ವ್ಯಕ್ತಿಗಳು ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಗುಣದಿಂದ ದೇಶದಲ್ಲಿ ಅಪರಾಧ ಕೃತ್ಯ ಹೆಚ್ಚಳ: ಜಸ್ಟಿಸ್ ದೀಪಾಂಕರ್ ದತ್ತಾ

ಸುಪ್ರೀಂ ಕೋರ್ಟ್‌ನ ಕ್ಷಮಿಸುವ ಮತ್ತು ದಯೆ ತೋರುವ ಪ್ರವೃತ್ತಿಯಿಂದಾಗಿಯೇ ಇಂದು ದೇಶದಲ್ಲಿ...

ಅನರ್ಹತೆ ನೋಟಿಸ್: ಲೋಕಸಭಾ ಸ್ಪೀಕರ್ ಬಳಿ ಮತ್ತೆ 15 ದಿನ ಕಾಲಾವಕಾಶ ಕೋರಿದ ಟಿಎಂಸಿ ಬಂಡಾಯ ಸಂಸದರು

ಪಕ್ಷಾಂತರ ನಿರೋಧಕ ಕಾಯ್ದೆಯಡಿ ಎದುರಿಸುತ್ತಿರುವ ಅನರ್ಹತೆ ಅರ್ಜಿಗೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...