ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

Date:

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್ ಒಂದು 2.3 ಕೋಟಿ ರೂ. ದೋಚಿರುವ ಘಟನೆ ದೆಹಲಿಯ ವಿವೇಕ್ ವಿಹಾರ್‌ನಲ್ಲಿ ನಡೆದಿದೆ.

- Advertisement -

ಗಾಜಿಯಾಬಾದ್‌ನ ಇಂದಿರಾಪುರಂ ನಿವಾಸಿ, ಹಣಕಾಸು, ಆಸ್ತಿ ವ್ಯವಹಾರ ಮತ್ತು ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಮನ್‌ಪ್ರೀತ್ ಎಂಬ ಉದ್ಯಮಿ ಈ ಸಂಬಂಧ ದೂರು ನೀಡಿದ್ದಾರೆ. ಮನ್‌ಪ್ರೀತ್ ವಿವೇಕ್ ವಿಹಾರ್‌ನಲ್ಲಿರುವ ತಮ್ಮ ಕಟ್ಟಡದಲ್ಲಿದ್ದ 2.5 ಕೋಟಿ ರೂ. ಮೌಲ್ಯದ ಗಳಿಕೆಯನ್ನು ಇಟ್ಟುಕೊಂಡಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಇದನ್ನು ಓದಿದ್ದೀರಾ? ಸಿಬಿಐ, ಇಡಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾದ ಕೇಜ್ರಿವಾಲ್‌ ಸರ್ಕಾರ

“ಆಗಸ್ಟ್ 19ರಂದು ಅವರು ತಮ್ಮ ಸ್ನೇಹಿತ ರವಿಶಂಕರ್ ಬಳಿ ತಮ್ಮ ಮನೆಯಿಂದ 1.10 ಕೋಟಿ ರೂ. ತೆಗೆದುಕೊಂಡು ಬರುವಂತೆ ತಿಳಿಸಿದ್ದಾರೆ. ಶಂಕರ್ ನಗದು ಚೀಲದೊಂದಿಗೆ ಕಟ್ಟಡದಿಂದ ಹೊರಬಂದ ತಕ್ಷಣ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಎರಡು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ತಾವು ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡಿದ್ದಾರೆ. ಹಾಗೆಯೇ ಶಂಕರ್ ಅವರನ್ನು ಥಳಿಸಿ ಚೀಲವನ್ನು ಕಸಿದುಕೊಂಡಿದ್ದಾರೆ” ಎಂದು ದೂರಿನಲ್ಲಿ ತಿಳಿಸಿರುವುದಾಗಿ ಉಪ ಪೊಲೀಸ್ ಆಯುಕ್ತ (ಶಹದಾರ) ಪ್ರಶಾಂತ್ ಗೌತಮ್ ಹೇಳಿದರು.

ಹಾಗೆಯೇ ಸಿಬಿಐ ಅಧಿಕಾರಿಗಳೆಂದು ಹೇಳಿಕೊಂಡ ಆರೋಪಿಗಳು ಕಟ್ಟಡದ ಒಳಗೆ ಹೋಗಿ ಮನ್‌ಪ್ರೀತ್ ಅವರ ಉದ್ಯೋಗಿ ದೀಪಕ್ ಮಹೇಶ್ವರಿ ಅವರನ್ನು ಥಳಿಸಿ, ಅಲ್ಲಿ ಇರಿಸಲಾಗಿದ್ದ ಉಳಿದ ಹಣವನ್ನು ಕದ್ದೊಯ್ದಿದ್ದಾರೆ ಎಂದು ವರದಿಯಾಗಿದೆ.

ಹಾಗೆಯೇ ಶಂಕರ್ ಮತ್ತು ಮಹೇಶ್ವರಿ ಅವರನ್ನು ಸಿಬಿಐ ವಶಕ್ಕೆ ಪಡೆಯುತ್ತೇವೆ ಎಂದು ಹೇಳಿಕೊಂಡ ನಕಲಿ ಸಿಬಿಐ ಅಧಿಕಾರಿಗಳು, ಇಬ್ಬರನ್ನೂ ಕಾರಿನಲ್ಲಿ ಕೂರಿಸಿ, ಶಂಕರ್ ಅವರನ್ನು ಚಿಂತಾಮಣಿ ಅಂಡರ್‌ಪಾಸ್ ಬಳಿ ಮತ್ತು ಮಹೇಶ್ವರಿಯನ್ನು ನಿಗಮ್‌ಬೋಧ್ ಘಾಟ್‌ನಲ್ಲಿ ಬಿಟ್ಟಿದ್ದಾರೆ. ಹಾಗೆಯೇ ಈ ಘಟನೆಯನ್ನು ಯಾರಿಗೂ ತಿಳಿಸದ್ದಂತೆ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಇನ್ನು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗಿದ್ದು, ತನಿಖೆಯ ಸಮಯದಲ್ಲಿ ವಾಹನಗಳನ್ನು ಸಾಕೇತ್ ಮೆಟ್ರೋ ನಿಲ್ದಾಣದ ಬಳಿ ಇರುವ ಎನ್‌ಜಿಒವೊಂದು ಬಾಡಿಗೆಗೆ ಪಡೆದಿದೆ ಎಂದು ತಿಳಿದುಬಂದಿದೆ. ಈ ಸಂಬಂಧ ಎನ್‌ಜಿಒ ಕಾರ್ಯದರ್ಶಿ ಮತ್ತು ಅಸ್ಸಾಂ ಮೂಲದ ಪಪೋರಿ ಬರುವಾ (31) ಮತ್ತು ತುಘಲಕಾಬಾದ್ ನಿವಾಸಿ ದೀಪಕ್ (32) ಎಂದು ಗುರುತಿಸಲಾದ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ.

“ಇಬ್ಬರ ಬಳಿಯಿಂದ 1.08 ಕೋಟಿ ರೂ. ನಗದು ವಶಪಡಿಸಿಕೊಳ್ಳಲಾಗಿದೆ. ಉಳಿದ ಶಂಕಿತರನ್ನು ಮತ್ತು ಹಣವನ್ನು ಪತ್ತೆಹಚ್ಚಲು ಕಾರ್ಯಾಚರಣೆ ನಡೆಯುತ್ತಿದೆ. ರೋಡೆ ಮತ್ತು ಕ್ರಿಮಿನಲ್ ಪಿತೂರಿಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಉಪಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ಟಿವಿಕೆ, ಬಂಗಾಳದಲ್ಲಿ ಬಿಜೆಪಿಗೆ ಜಯ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು...

ಪ್ರತಿಭಟನೆ ಹಿನ್ನೆಲೆ ಮೆಟ್ರೋ ಬಂದ್; ‘ನೊಣ ಕೊಲ್ಲೋಕೆ ಸುತ್ತಿಗೆ ಬೇಡ’ – ಮಾರ್ಮಿಕವಾಗಿ ನುಡಿದ ಸುಪ್ರೀಂ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಿರುವ ಪ್ರತಿಭಟನೆಯನ್ನು ತಡೆಯಲು...

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...