ದಲಿತ ವಿಧವೆಯ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

Date:

ದಲಿತ ಸಮುದಾಯದ 35 ವರ್ಷದ ವಿಧವೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಬಿಹಾರದ ನಳಂದ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಜೂನ್ 30ರಂದು ಚಾಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಕೃತ್ಯ ನಡೆದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

- Advertisement -

ಸಂತ್ರಸ್ತ ಮಹಿಳೆಯು ನಾಗರ್ನೌಸಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾರೆ. ಆರೋಪಿಗಳಲ್ಲಿ ಒಬ್ಬನಾದ ವಿಕಾಸ್ ಎಂಬಾತ, “ಮೊಬೈಲ್ ಫೋನ್‌ಗೆ ರೀಚಾರ್ಜ್ ಮಾಡಿಕೊಡುತ್ತೇನೆ ಮತ್ತು ಅಗತ್ಯವಿರುವ ಔಷಧಗಳನ್ನು ನೀಡುತ್ತೇನೆ” ಎಂದು ನಂಬಿಸಿ ಸಂತ್ರಸ್ತೆಯನ್ನು ರಾಂಪುರ ರೈಲ್ವೆ ನಿಲ್ದಾಣಕ್ಕೆ ಕರೆಸಿಕೊಂಡಿದ್ದಾನೆ. ಬಳಿಕ ತನ್ನ ಮೋಟಾರ್ ಸೈಕಲ್‌ನಲ್ಲಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ತನ್ನ ಇತರೆ ಇಬ್ಬರು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅತ್ಯಾಚಾರದ ನಂತರ, ವಿಷಯವನ್ನು ಹೊರಗೆ ಹೇಳಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ ಆರೋಪಿಗಳು, ಮಹಿಳೆಯನ್ನು ವಿವಸ್ತ್ರಗೊಳಿಸಿ ಮೊಬೈಲ್ ಫೋನ್‌ ಕಿತ್ತುಕೊಂಡು ಸ್ಥಳದಿಂದ ಪರಾರಿಯಾದರು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಬಟ್ಟೆಯಿಲ್ಲದೆ ಅತಂತ್ರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಕಂಡು ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಮಹಿಳೆಯೊಬ್ಬರು ಸಲ್ವಾರ್ ನೀಡಿದರೆ, ಪುರುಷರೊಬ್ಬರು ಟವಲ್ ನೀಡಿ ಸಹಾಯ ಮಾಡಿದ್ದಾರೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಚಾಂಡಿ ಠಾಣೆಯ ಪೊಲೀಸರು, ಮಹಿಳೆಯನ್ನು ರಕ್ಷಿಸಿ ಆಕೆಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ನಳಂದ ಪೊಲೀಸ್ ವರಿಷ್ಠಾಧಿಕಾರಿ (SP) ಭರತ್ ಸೋನಿ ನೀಡಿರುವ ಮಾಹಿತಿಯಂತೆ, ಘಟನೆ ನಡೆದ 6 ಗಂಟೆಗಳ ಒಳಗೆ ವಿಶೇಷ ತನಿಖಾ ತಂಡ (SIT) ರಚಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಟಿಎಂಸಿ ಬ್ಯಾಂಕ್ ಖಾತೆಗಳ ಫ್ರೀಜ್ ಮಾಡಲು ಇಷ್ಟೊಂದು ತರಾತುರಿ ಏನಿತ್ತು: ಕೋಲ್ಕತ್ತಾ ಹೈಕೋರ್ಟ್ ಪ್ರಶ್ನೆ

ಲಕ್ಷ್ಮಿಬಿಘಾ ಗ್ರಾಮದ ವಿಕಾಸ್ ಗೋಪೆ, ನಿತೀಶ್ ಕುಮಾರ್ ಮತ್ತು ಶೈಲೇಶ್ ಕುಮಾರ್ ) ಬಂಧಿತ ಆರೋಪಿಗಳು. ಭಾರತೀಯ ನ್ಯಾಯ ಸಂಹಿತೆ (BNS) ಅಡಿ ಅತ್ಯಾಚಾರ, ಕಳ್ಳತನ, ಅವಮಾನ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಎಫ್‌ಐಆರ್ ದಾಖಲಾಗಿದೆ. ಬಂಧಿತರಾದ ವಿಕಾಸ್ ಮತ್ತು ನಿತೀಶ್‌ ಈಗಾಗಲೇ ಕೊಲೆ ಮತ್ತು ಅಕ್ರಮ ಶಸ್ತ್ರಾಸ್ತ್ರ ಸಾಗಣೆ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಸಾಗರ | ಗೂಡ್ಸ್ ಆಟೋ ಢಿಕ್ಕಿ; ಚಿಕಿತ್ಸೆ ಫಲಿಸದೆ ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೂಡ್ಸ್ ಆಟೋ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ...

ಏಷ್ಯನ್ ಗೇಮ್ಸ್: 4 ದಶಕಗಳ ಬಳಿಕ ಮಹಿಳಾ ಹಾಕಿಯಲ್ಲಿ ಭಾರತಕ್ಕೆ ಒಲಿದ ಸುವರ್ಣ ಪದಕ

ಜಪಾನಿನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಮಹಿಳಾ ಹಾಕಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...