ಸಾರಿಗೆ ಬಸ್‌ನಲ್ಲಿ ಪಂಜಾಬ್ ಮೂಲಕ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್‌ನಲ್ಲಿ ನಡೆದಿದೆ. ಪ್ರಕರಣದಲ್ಲಿ ರೋಡ್‌ವೇಸ್ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮೊರಾದಾಬಾದ್‌ನಿಂದ ಪಂಜಾಬ್‌ಗೆ ಮರಳುತ್ತಿದ್ದ ಬಾಲಕಿ ಮೇಲೆ ಡೆಹ್ರಾಡೂನ್‌ನ ಅಂತಾರಾಜ್ಯ ಬಸ್ ಟರ್ಮಿನಸ್‌ನಲ್ಲಿ (ISBT) ಕೃತ್ಯ ನಡೆದಿದೆ. ಶನಿವಾರ ತಡರಾತ್ರಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಅಂಕಿಅಂಶಗಳ ಪ್ರಕಾರ, 2021ರಲ್ಲಿ ದೇಶಾದ್ಯಂತ 31,000ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ದೂರು ದಾಖಲಾಗದ, ಬೆಳಕಿಗೆ ಬಾರದು ಅತ್ಯಾಚಾರ ಪ್ರಕರಣಗಳು ಇನ್ನೂ ಹೆಚ್ಚಿವೆ ಎಂದು ಹೇಳಲಾಗಿದೆ.
ಇತ್ತೀಚೆಗೆ, ಕೋಲ್ಕತ್ತಾದಲ್ಲಿ 31 ವರ್ಷದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆ ಕೃತ್ಯ ನಡೆದ ಬಳಿಕ ಮಹಿಳೆಯರ ಸುರಕ್ಷತೆ ಬಗ್ಗೆ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಗಳು ನಡೆಯುತ್ತಿರುವ ಸಂದರ್ಭದಲ್ಲಿಯೇ ಉತ್ತರಾಖಂಡ, ಉತ್ತರ ಪ್ರದೇಶ, ಬೆಂಗಳೂರು ಸೇರಿದಂತೆ ಹಲವೆಡೆ ಅತ್ಯಾಚಾರ ಪ್ರಕರಣಗಳು ನಡೆದಿರುವುದಾಗಿ ವರದಿಯಾಗಿದೆ.