ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಶಿಕ್ಷಕರ ಬಂಧನ

Date:

ಎನ್‌ಸಿಸಿ ಶಿಬಿರಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರೇ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಪ್ರಕರಣ ಬೆಳಕಿಗೆ ಬಂದು ಆರು ತಿಂಗಳಾದ ಬಳಿಕ, ಪ್ರಕರಣದಲ್ಲಿ ಮೂವರು ಶಿಕ್ಷಕರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಬರಗೂರು ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು ಕೃಷ್ಣಗಿರಿ ಪೊಲೀಸರು ಬಂಧಿಸಿದ್ದಾರೆ. 13 ವರ್ಷದ ವಿದ್ಯಾರ್ಥಿನಿಯ ಮೇಲೆ ಸಾಮಾಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಕಳೆದೊಂದು ತಿಂಗಳಿನಿಂದ ವಿದ್ಯಾರ್ಥಿನಿ ಅನಾರೋಗ್ಯಕ್ಕೆ ತುತ್ತಾಗಿದ್ದರು. ಇತ್ತೀಚೆಗೆ, ಶಾಲೆಯ ಮುಖ್ಯೋಪಾಧ್ಯಾಯ ಮತ್ತು ಸಹ ಶಿಕ್ಷಕಿ ಆಕೆಯ ಆರೋಗ್ಯ ವಿಚಾರಿಸಲು ವಿದ್ಯಾರ್ಥಿನಿಯ ಮನೆಗೆ ತೆರಳಿದ್ದರು. ಈ ವೇಳೆ, ಬಾಲಕಿ ತನ್ನ ಮೇಲೆ ಮೂವರು ಶಿಕ್ಷಕರು ಜನವರಿ 2 ಮತ್ತು 3ರಂದು ಅತ್ಯಾಚಾರ ಎಸಗಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ಬಳಿಕ, ಮುಖ್ಯೋಪಾಧ್ಯಾಯ ಮತ್ತು ಬಾಲಕಿಯ ಪೋಷಕರು ಬರಗೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರು ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಮೂವರು ಆರೋಪಿ ಶಿಕ್ಷಕರ ವಿರುದ್ಧ ಪೋಕ್ಸೋ ಕಾಯ್ದೆಯ ಸೆಕ್ಷನ್ 5 (ಎಫ್), ಬಿಎನ್‌ಎಸ್‌ ಸೆಕ್ಷನ್ 329 (3) ಮತ್ತು 351(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸಂತ್ರಸ್ತ ಬಾಲಕಿಯ ಪೋಷಕರು ಶಾಲೆಯ ಎದುರು ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಶಿಕ್ಷಕರಿಗೆ ಮರಣದಂಡನೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ತೆರಳಿದ್ದು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಪ್ರತಿಭಟನಾಕಾರು ಪ್ರತಿಭಟನೆಯನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...