ಅಪ್ರಾಪ್ತೆ ಮೇಲೆ ನಿರಂತರ ಸಾಮೂಹಿಕ ಅತ್ಯಾಚಾರ; 11 ಮಂದಿ ಕಾಮುಕರ ಬಂಧನ

Date:

ಅಪ್ರಾಪ್ತ ಬಾಲಕಿಯ ಮೇಲೆ ವಿವಿಧ ಸಂದರ್ಭಗಳಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದ ಪ್ರಕರಣ ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ 11 ಮಂದಿ ಕಾಮುಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಜಾರ್ಖಂಡ್ ಮೂಲದ 17 ವರ್ಷದ ಬಾಲಕಿ ಡಿಸೆಂಬರ್ 18ರಂದು ಆಂಧ್ರ ಪ್ರದೇಶದ ವಿಶಾಖಪಟ್ಟಣಂನಲ್ಲಿ ನಾಪತ್ತೆಯಾಗಿದ್ದಳು. ಆಕೆಯನ್ನು ಎರಡು ಪ್ರತ್ಯೇಕ ಕಾಮುಕರ ಗುಂಪುಗಳು ಹಲವಾರು ಬಾರಿ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಒಡಿಶಾದಲ್ಲಿ ನಾಲ್ಕು ದಿನಗಳ ನಂತರ ಆಕೆ ಪತ್ತೆಯಾಗಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕನ್ನಡ ವಿಚಾರ ಪರಂಪರೆಗೆ ಕೆವಿಎನ್...

ನಮ್ಮೊಳಗಿನ ತಾಕಲಾಟ, ಹೊಯ್ದಾಟ, ತೀರಗಳೇ ತಲುಪದ ಭಾರಿ ಅಲೆಗಳ ಏರಾಟದಲ್ಲಿ ಸಿಲುಕಿ ಒದ್ದಾಡುವಾಗ ಒಮ್ಮೆ ಕೆವಿಎನ್‌ ಜತೆ ಮಾತನಾಡಿದರೆ ಸಾಕು… ಕಂಡ ಆಪ್ತರು “ ಏನೋ ಇವತ್ತು ನಿನಗೆ ಬಂಪರ್‌ ಲಾಟರಿ ಹೊಡೀತಾ’’...

E20 ಹೆಸರಲ್ಲಿ E31 ಸುಲಿಗೆ: ಕರ್ನಾಟಕದಲ್ಲಿ ಮೋದಿ ಸರ್ಕಾರದ...

ದೇಶದ ಇಂಧನ ಮಾರುಕಟ್ಟೆಯ ಇತಿಹಾಸದಲ್ಲೇ ಅತ್ಯಂತ ಕರಾಳವಾದ, ಜನರ ಕಣ್ಣಿಗೆ ಮಣ್ಣು ಎರಚಿ ಅವರ ವಾಹನಗಳ ಎಂಜಿನ್‌ಗಳನ್ನು ನಾಶಪಡಿಸುವ ಮತ್ತು ಜೇಬಿಗೆ ಕತ್ತರಿ ಹಾಕುವ ಬೃಹತ್ ದರೋಡೆಕೋರತನ ಕರ್ನಾಟಕದಲ್ಲಿ ಬಯಲಾಗಿದೆ. ಪೆಟ್ರೋಲ್‌ನಲ್ಲಿ 20%ರ...

ಮೀಟರ್ ಹಾಕಲ್ಲ, ನಿಗದಿತ ಬಾಡಿಗೆಗೆ ಬರಲ್ಲ: ಆಟೋ ಸುಲಿಗೆಯಿಂದ...

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಟೋಗಳ ಸಂಚಾರ ಮತ್ತು ಆಟೋ ಪ್ರಯಾಣಿಕರ ಸಮಸ್ಯೆ ಇಂದು ಸಾರ್ವಜನಿಕ ಚರ್ಚೆಯ ವಿಷಯವಾಗಿದೆ. ನಗರದ ರಸ್ತೆಗಳಲ್ಲಿ ಆಟೋಗಳ ಸಂಖ್ಯೆ ಹೆಚ್ಚುತ್ತಿರುವುದು, ನಿಗದಿತ ದರಕ್ಕಿಂತ ಹೆಚ್ಚಿನ ಬಾಡಿಗೆ ಕೇಳುವುದು,...

ಆಕೆಗೆ ಆಪ್ತನಾಗಿದ್ದ ಜಾರ್ಖಂಡ್‌ ಮೂಲದ ವಲಸೆ ಕಾರ್ಮಿಕನೊಬ್ಬ ಡಿಸೆಂಬರ್ 17ರಂದು ಬಾಲಕಿಯ ಜನ್ಮದಿನ ಆಚರಿಸುವ ನೆಪದಲ್ಲಿ ತನ್ನ ಮನೆ ಸಮೀಪದ ಕೊಠಡಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಬಳಿಕ ಆರೋಪಿ ತನ್ನ ಸ್ನೇಹಿತನನ್ನು ಕರೆಸಿದ್ದ. ಆತನೂ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ಎಂದು ವಿಶಾಖಪಟ್ಟಣಂ ವಲಯ-1 ಉಪ ಪೊಲೀಸ್ ಆಯುಕ್ತ ಕೆ ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.

ಇದರಿಂದ ಆಘಾತಕ್ಕೆ ಒಳಗಾಗಿದ್ದ ಬಾಲಕಿ ಆತ್ಮಹತ್ಯೆ ಮಾಡಿಕೊಳ್ಳಲು ವಿಶಾಖಪಟ್ಟಣಂ ಆರ್‌.ಕೆ ಬೀಚ್‌ಗೆ ತೆರಳಿದ್ದಳು. ಅಲ್ಲಿ ಆಕೆಗೆ ಪ್ರವಾಸಿಗರ ಫೋಟೋ ತೆಗೆಯುವ ವ್ಯಕ್ತಿಯೊಬ್ಬ ಪರಿಚಯವಾಗಿದ್ದು, ಸಹಾಯ ಮಾಡುವ ನೆಪದಲ್ಲಿ ಆಕೆಯನ್ನು ಲಾಡ್ಜ್‌ ಒಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ, ಬಾಲಕಿಯನ್ನು ಮತ್ತೊಂದು ಕೋಣೆಗೆ ಕರೆದೊಯ್ದಿದ್ದಾನೆ. ಅಲ್ಲಿ ಆತನ ಏಳೆಂಟು ಸ್ನೇಹಿತರು ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉತ್ತರ ಪ್ರದೇಶ | ದಲಿತ ಮಹಿಳೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಪೊಲೀಸ್

ದೌರ್ಜನ್ಯದಿಂದ ಕುಗ್ಗಿ ಹೋಗಿದ್ದ ಬಾಲಕಿ ಹೇಗೋ ತಪ್ಪಿಸಿಕೊಂಡು ವಿಶಾಖಪಟ್ಟಣಂನಿಂದ ಒಡಿಶಾಗೆ ತೆರಳಿದ್ದಳು. ಬಾಲಕಿ ಕಾಣದಿದ್ದಾಗ ಆಕೆಯ ಪೋಷಕರು ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಹುಡುಕಾಟ ನಡೆಸಿದಾಗ ಬಾಲಕಿ ಒಡಿಶಾದಲ್ಲಿ ಪತ್ತೆಯಾಗಿದ್ದಾಳೆ. ಡಿಸೆಂಬರ್ 25 ರಂದು ಪೊಲೀಸರು ಆಕೆಯನ್ನು ವಿಶಾಖಪಟ್ಟಣಂಗೆ ಕರೆ ತಂದಿದ್ದಾರೆ.

ಡಿಸೆಂಬರ್ 20, 21 ಮತ್ತು 22 ರಂದು ಫೋಟೋಗ್ರಾಫರ್ ಮತ್ತು ಆತನ ಸ್ನೇಹಿತರು ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಡಿಸೆಂಬರ್ 18 ಮತ್ತು 19 ರಂದು ಕೂಡ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.

ಪೊಲೀಸರು ಬಾಲಕಿಯ ನಾಪತ್ತೆ ಪ್ರಕರಣವನ್ನು ಅತ್ಯಾಚಾರ (ಐಪಿಸಿ ಸೆಕ್ಷನ್ 376) ಆಗಿ ಮಾರ್ಪಡಿಸಿದ್ದಾರೆ ಮತ್ತು ಲೈಂಗಿಕ ಅಪರಾಧದಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ) ಕೂಡ ಸೇರಿಸಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಕೆ ಶ್ರೀನಿವಾಸ್ ರಾವ್ ತಿಳಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕೋಲ್ಕತ್ತಾ ಪೊಲೀಸರ ಕಾವಲಿನಲ್ಲೇ ನನ್ನ ಮನೆ ಮೇಲೆ ದಾಳಿ’ – ಬಿಜೆಪಿ ವಿರುದ್ಧ ಅಭಿಷೇಕ್ ಬ್ಯಾನರ್ಜಿ ಆರೋಪ

ತೃಣಮೂಲ ಕಾಂಗ್ರೆಸ್ (TMC) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಅವರ...

ಭೂ ಮಾಫಿಯಾ, ಬೆದರಿಕೆ ಆರೋಪ: ಫೇಸ್‌ಬುಕ್ ಲೈವ್‌ನಲ್ಲಿ ಕಣ್ಣೀರಿಟ್ಟು ಜಾರ್ಖಂಡ್ ಬುಡಕಟ್ಟು ನಾಯಕಿ ಆತ್ಮಹತ್ಯೆ

ಜಾರ್ಖಂಡ್‌ನ ರಾಂಚಿಯಲ್ಲಿ ಬುಡಕಟ್ಟು ಹಕ್ಕುಗಳ ಹೋರಾಟಗಾರ್ತಿ ಮತ್ತು ನಾಯಕಿ ನಿಶಾ ಕುಮಾರಿ...

ದೇಶದ ಭದ್ರತೆಗೆ ಧಕ್ಕೆಯಾದ ಅಗ್ನಿಪಥ್ ಯೋಜನೆ ತಕ್ಷಣವೇ ರದ್ದುಗೊಳಿಸಿ: ಕಾಂಗ್ರೆಸ್ ಆಗ್ರಹ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಶಸ್ತ್ರ ಪಡೆಗಳ 'ಅಗ್ನಿಪಥ್' ನೇಮಕಾತಿ ಯೋಜನೆಯನ್ನು...

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮತದ ಮೂಲಕ ಆಕ್ರೋಶ ಹೊರಹಾಕಿ: ಕಾಂಗ್ರೆಸ್ ಕರೆ

ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆಯಾಗುತ್ತಿದೆ, ಇದರಿಂದ ಸಾಲದ ಸುಳಿಯಲ್ಲಿ ಸಿಲುಕಿ ಸಾಮಾನ್ಯ...