ವಿಡಿಯೋ | ‘ಲಂಚವನ್ನು ಸಮನಾಗಿ ಹಂಚಿಕೊಳ್ಳುತ್ತೇವೆ’; ಗಂಗಾಜಲ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪಾಲಿಕೆ ಸದಸ್ಯರು

Date:

ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರು ತಮಗೆ ಬರುವ ಲಂಚ ಅಥವಾ ಕಮಿಷನ್ ಹಣವನ್ನು ‘ಪ್ರಾಮಾಣಿಕ’ವಾಗಿ ಮತ್ತು ‘ಸಮ’ನಾಗಿ ಹಂಚಿಕೊಳ್ಳುವುದಾಗಿ ಗಂಗಾಜಲವನ್ನು ಕೈಯಲ್ಲಿ ಹಿಡಿದು ಪ್ರಮಾಣ ವಚನ ಸ್ವೀಕರಿಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಬಿಜೆಪಿ ಆಡಳಿತ ಇರುವ ಉತ್ತರ ಪ್ರದೇಶದ ಶಹಜಹಾನ್‌ಪುರ ಮಹಾನಗರ ಪಾಲಿಕೆಯಲ್ಲಿ ಈ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

- Advertisement -

ವೈರಲ್ ವಿಡಿಯೋದಲ್ಲಿ ಕೌನ್ಸಿಲರ್‌ಗಳು ಕೈಯಲ್ಲಿ ಗಂಗಾಜಲದ ಪಾತ್ರೆಯನ್ನು ಹಿಡಿದುಕೊಂಡು ನಿಂತಿರುವುದು ಕಂಡುಬಂದಿದೆ. ನಗರ ಪಾಲಿಕೆಯಿಂದ ಅಥವಾ ಯಾವುದೇ ಕೆಲಸಗಳಿಂದ ಬರುವ ಅಕ್ರಮ ಆದಾಯ/ಲಂಚದ ಹಣವನ್ನು ಒಟ್ಟು 60 ಜನ ಕೌನ್ಸಿಲರ್‌ಗಳಿಗೆ ಸಮಾನವಾಗಿ ಹಂಚಲಾಗುವುದು ಎಂದು ವ್ಯಕ್ತಿಯೊಬ್ಬ ಪ್ರಮಾಣ ವಚನ ಬೋಧಿಸಿದ್ದು, ಉಳಿದವರು ಅದನ್ನು ಪುನರಾವರ್ತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕೌನ್ಸಿಲರ್‌ಗಳು ಕೇವಲ ಹಣ ಹಂಚಿಕೊಳ್ಳಲು ಮಾತ್ರವಲ್ಲದೆ, ಈ ವಿಚಾರದಲ್ಲಿ ಗುಂಪಿನ ಯಾವುದೇ ಸದಸ್ಯನಿಗೆ ಅಥವಾ ಕೌನ್ಸಿಲರ್‌ಗೆ ಕಾನೂನುಬಾಹಿರವಾಗಿ ತೊಂದರೆ ಅಥವಾ ತನಿಖೆ ಎದುರಾದರೆ, ಎಲ್ಲರೂ ಒಟ್ಟಾಗಿ ನಿಂತು ಆತನ ಬೆಂಬಲಕ್ಕೆ ನಿಲ್ಲುತ್ತೇವೆ ಎಂದೂ ಶಪಥ ಮಾಡಿದ್ದಾರೆ.

ಲಂಚ ಮತ್ತು ಭ್ರಷ್ಟಾಚಾರದ ಹಣ ಹಂಚಿಕೊಳ್ಳುವ ಅಕ್ರಮ ಕೆಲಸಕ್ಕಾಗಿ ಪ್ರಮಾಣ ವಚನ ಮಾಡಿರುವುದು ಮತ್ತು ಅದಕ್ಕಾಗಿ ಗಂಗಾಜಲವನ್ನು ಬಳಸಿಕೊಂಡಿದ್ದರ ವಿರುದ್ಧ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆ ಮಹಾನಗರ ಪಾಲಿಕೆ ಆಡಳಿತ ಎಚ್ಚೆತ್ತುಕೊಂಡಿದೆ. ತನಿಖೆಗೆ ಆದೇಶಿಸಿದೆ.

ಶಹಜಹಾನ್‌ಪುರ ಪಾಲಿಕೆ ಆಯುಕ್ತರಾದ ಸೌಮ್ಯಾ ಗುರುರಾಣಿ ಪ್ರತಿಕ್ರಿಯಿಸಿದ್ದು, “ಈ ವಿಡಿಯೋ ಹಳೆಯದು (ನವೆಂಬರ್ 2025ರದ್ದು) ಎಂದು ಹೇಳಲಾಗುತ್ತಿದ್ದರೂ, ಘಟನೆಯ ತೀವ್ರತೆಯನ್ನು ಪರಿಗಣಿಸಿ ತನಿಖೆಗೆ ಆದೇಶಿಸಲಾಗಿದೆ. ವರದಿ ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...