ಹೊಸ ಸಂಕೀರ್ಣಕ್ಕೆ ಸಿಜೆಐ ಶಂಕುಸ್ಥಾಪನೆ: ಗುವಾಹಟಿ ಹೈಕೋರ್ಟ್ ಬಾರ್‌ನಿಂದ ಉಪವಾಸ ಸತ್ಯಾಗ್ರಹ

Date:

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಇಂದು ಹೊಸ ಹೈಕೋರ್ಟ್ ಸಂಕೀರ್ಣಕ್ಕೆ ಶಂಕುಸ್ಥಾಪನೆ ಮಾಡಲಿದ್ದು, ಈ ಸಮಾರಂಭವನ್ನು ಗುವಾಹಟಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ಬಹಿಷ್ಕರಿಸಿದೆ. ಹಾಗೆಯೇ ಭಾನುವಾರ ನಾಲ್ಕು ಗಂಟೆಗಳ ಮುಷ್ಕರವನ್ನು, ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದೆ.

- Advertisement -

ಹೊಸ ನ್ಯಾಯಾಂಗ ಪಟ್ಟಣದ ಭಾಗವಾಗಿ ಉತ್ತರ ಗುವಾಹಟಿಯ ರಂಗಮಹಲ್‌ನಲ್ಲಿ ಗುವಾಹಟಿ ಹೈಕೋರ್ಟ್‌ನ ಹೊಸ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ. ಅದರೆ ಗುವಾಹಟಿ ಹೈಕೋರ್ಟ್ ಬಾರ್ ಅಸೋಸಿಯೇಷನ್ ​​(GHCBA) ಸದಸ್ಯರು ಇದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಗುರುವಾರ ಮತ್ತು ಶುಕ್ರವಾರ ಗುವಾಹಟಿ ಹೈಕೋರ್ಟ್‌ನ ಹಳೆಯ ಕಟ್ಟಡದ ಮುಂದೆ ನಾಲ್ಕು ಗಂಟೆಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ನಾಗಾಗಳಲ್ಲಿ ನಾಯಿ ಮಾಂಸ ಸೇವನೆ ಒಪ್ಪಿತ ಆಹಾರ ಸಂಪ್ರದಾಯ: ಸರ್ಕಾರದ ನಿಷೇಧ ರದ್ದುಗೊಳಿಸಿದ ಗುವಾಹಟಿ ಹೈಕೋರ್ಟ್

“ನಗರದ ಹೃದಯ ಭಾಗವಾಗಿರುವ ಪ್ರಸ್ತುತ ಸ್ಥಳದಿಂದ ಹೈಕೋರ್ಟ್ ಅನ್ನು ಸ್ಥಳಾಂತರಿಸುವುದನ್ನು ನಾವು ಸಂಪೂರ್ಣವಾಗಿ ವಿರೋಧಿಸುತ್ತೇವೆ. ನಾವು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ನಮ್ಮ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದೇವೆ. ನಮ್ಮ ಯಾವುದೇ ಸದಸ್ಯರು ಸಮಾರಂಭಕ್ಕೆ ಹಾಜರಾಗುವುದಿಲ್ಲ” ಎಂದು GHCBA ಉಪಾಧ್ಯಕ್ಷ ಸಂತನು ಬೋರ್ತಕೂರ್ ತಿಳಿಸಿದ್ದಾರೆ.

ನ್ಯಾಯಾಲಯ ಸಂಕೀರ್ಣವನ್ನು ಸ್ಥಳಾಂತರಿಸುವ ಕ್ರಮವನ್ನು GHCBA ಆರಂಭದಿಂದಲೂ ವಿರೋಧಿಸುತ್ತಿದೆ. ಆದರೆ ಸರ್ಕಾರ ಏಕಪಕ್ಷೀಯವಾಗಿ ನಿರ್ಧರಿಸಿದೆ ಮತ್ತು ಈಗ ಹೊಸ ನ್ಯಾಯಾಂಗ ಮೂಲಸೌಕರ್ಯವನ್ನು ನಿರ್ಮಿಸಲು ಮುಂದಾಗಿದೆ ಎಂದು ಆರೋಪಿಸಿದ್ದಾರೆ.

“ಇಂದು ಶಂಕುಸ್ಥಾಪನೆ ನಡೆಯಲಿದೆ ಎಂದು ತೋರುತ್ತಿದೆ. ಇದರ ನಂತರ, ನಾವು ಇದನ್ನು ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸಲು ಮುಂದಾಗಿದ್ದೇವೆ. ನಮ್ಮ ಕಾರ್ಯಕಾರಿ ಸಮಿತಿ ಮುಂದಿನ ಕೆಲವು ದಿನಗಳಲ್ಲಿ ಸಭೆ ಸೇರಿ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ” ಎಂದು ಬೋರ್ತಾಕೂರ್ ಹೇಳಿದರು.

ಗುವಾಹಟಿ ನಗರದ ಹೃದಯಭಾಗದಲ್ಲಿರುವ ಹೈಕೋರ್ಟ್ ಸಂಕೀರ್ಣವನ್ನು ಬ್ರಹ್ಮಪುತ್ರದ ಉತ್ತರ ದಂಡೆಗೆ ಸ್ಥಳಾಂತರಿಸಲು ಸರ್ಕಾರ ಮುಂದಾಗಿದೆ. ಈ ಪ್ರಸ್ತಾಪ ಸರ್ಕಾರ ಮುಂದಿಟ್ಟಾಗಲೇ GHCBA ನಿರಂತರವಾಗಿ ವಿರೋಧಿಸುತ್ತಾ ಬಂದಿದೆ, ಪ್ರತಿಭಟಿಸುತ್ತಿದೆ. ಆದರೆ ಅಸ್ಸಾಂ ಅಡ್ವೊಕೇಟ್ ಜನರಲ್ ದೇವಜಿತ್ ಸೈಕಿಯಾ ಈ ಪ್ರತಿಭಟನೆಯ ಹಿಂದೆ ರಾಜಕೀಯ ಪಕ್ಷಗಳಿವೆ ಎಂದು ದೂರಿದ್ದಾರೆ.

ಸುಮಾರು 49 ಎಕರೆ ಭೂಮಿಯ ರಂಗಮಹಲ್‌ನಲ್ಲಿ ಹೊಸ ನ್ಯಾಯಾಂಗ ಪಟ್ಟಣವನ್ನು ನಿರ್ಮಿಸಲು ಸರ್ಕಾರ ಯೋಜಿಸುತ್ತಿದೆ. ಕಳೆದ ವರ್ಷ ನವೆಂಬರ್‌ನಲ್ಲಿ, ಉತ್ತರ ಗುವಾಹಟಿಯಲ್ಲಿ ನ್ಯಾಯಾಂಗ ಪಟ್ಟಣವನ್ನು ನಿರ್ಮಿಸಲು ರಾಜ್ಯ ಸಚಿವ ಸಂಪುಟವು ಮೊದಲ ಹಂತದಲ್ಲಿ 479 ಕೋಟಿ ರೂ.ಗಳನ್ನು ಅನುಮೋದಿಸಿತ್ತು. ಈ ಹಿಂದೆ ಎಲ್ಲಾ ಪಾಲುದಾರರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಯೋಜನೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕೆಂದು GHCBA ಒತ್ತಾಯಿಸಿತ್ತು.

ಗುವಾಹಟಿ ಹೈಕೋರ್ಟ್ ಪ್ರಸ್ತುತ ಬ್ರಹ್ಮಪುತ್ರ ನದಿಯ ದಕ್ಷಿಣ ದಂಡೆಯ ಮಧ್ಯ ಗುವಾಹಟಿಯ ಉಜಾನ್ ಬಜಾರ್ ಪ್ರದೇಶದಲ್ಲಿದೆ. ಇದು ಒಂದು ಐತಿಹಾಸಿಕ ಕಟ್ಟಡವನ್ನು ಹೊಂದಿದ್ದು ಕೆಲವು ವರ್ಷಗಳ ಹಿಂದಷ್ಟೇ ಅತ್ಯಾಧುನಿಕ ಬಹುಕೋಟಿ ಮೌಲ್ಯದ ಆಧುನಿಕ ಬಹುಮಹಡಿಯನ್ನೂ ನಿರ್ಮಿಸಲಾಗಿದೆ. ಎರಡೂ ಕಟ್ಟಡಗಳು ಮಹಾತ್ಮ ಗಾಂಧಿ ರಸ್ತೆಯ ಎರಡು ಬದಿಗಳಲ್ಲಿ ಮುಖಾಮುಖಿಯಾಗಿವೆ. ಭೂ ಸುರಂಗದ ಮೂಲಕ ಸಂಪರ್ಕ ಹೊಂದಿವೆ. ಎಸ್ಕಲೇಟರ್ ಸೌಲಭ್ಯಗಳನ್ನೂ ಹೊಂದಿವೆ. ಹಳೆಯ ಹೈಕೋರ್ಟ್ ಸಂಕೀರ್ಣದ ಪಕ್ಕದಲ್ಲಿ ಹೊಸ ಸಮಾವೇಶ ಕೇಂದ್ರವನ್ನು ಸಹ ನಿರ್ಮಿಸಲಾಗುತ್ತಿದೆ. ಈಗಾಗಲೇ ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಹೊಸ ಕಟ್ಟಡ ಕಟ್ಟಿರುವಾಗ ಈಗ ಮತ್ತೆ ಬೇರೆ ಪ್ರದೇಶದಲ್ಲಿ ಹೊಸದಾಗಿ ಕಟ್ಟಡಗಳನ್ನು ಕಟ್ಟುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...