ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ ಮಧ್ಯ ಪ್ರದೇಶದ ಮಾಜಿ ಸಿಎಂ ಕಮಲ್‌ನಾಥ್ ಪುತ್ರ ನಕುಲ್ ನಾಥ್, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪುತ್ರ ವೈಭವ್ ಗೆಹ್ಲೋಟ್ ಸೇರಿದ್ದಾರೆ.
ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗಾಯ್ ಪುತ್ರ ಗೌರವ್ ಗೊಗಾಯ್ ಅವರಿಗೂ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿದೆ.
ಎರಡನೇ ಪಟ್ಟಿಯಲ್ಲಿ 12 ಮಂದಿ ಕಾಂಗ್ರೆಸ್, 7 ಮಂದಿ ಅಸ್ಸಾಂ, 10 ಮಂದಿ ಮಧ್ಯ ಪ್ರದೇಶ, 10 ಮಂದಿ ರಾಜಸ್ಥಾನ ಹಾಗೂ ದಮನ್ ಮತ್ತು ದಿಯುನಿಂದ ಒಬ್ಬರನ್ನು ಆಯ್ಕೆ ಮಾಡಲಾಗಿದೆ.
ಟಿಕೆಟ್ ನೀಡಿದವರಲ್ಲಿ ಶೇ.76.7 ಮಂದಿ ಅಲ್ಪಸಂಖ್ಯಾತ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದವರಿದ್ದಾರೆ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ.
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರ ಗಮನ ಬೇರೆಡೆಗೆ ಸೆಳೆಯಲು ‘ಸಿಎಎ’ ಮುಂದೆ ಮಾಡಿದ ‘ಮೋಶಾ’
