ಕೇಂದ್ರೀಯ ವಿದ್ಯಾಲಯ ಜತೆ ವಿಲೀನ ವಿರೋಧಿಸಿ ರಸ್ತೆಗಿಳಿದ ‘ಜೆನ್‌ ಆಲ್ಫಾ’: ಭೋಪಾಲ್‌ನಲ್ಲಿ ಶಾಲಾ ಮಕ್ಕಳ ಬೃಹತ್‌ ಪ್ರತಿಭಟನೆ

Date:

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಅಡಿಯಲ್ಲಿರುವ ಪ್ರತಿಷ್ಠಿತ ಪ್ರಾತ್ಯಕ್ಷಿಕಾ ಬಹುಪಯೋಗಿ ಶಾಲೆಗಳನ್ನು (ಡಿಎಂಎಸ್‌ / ರೀಜನಲ್ ಶಾಲೆ) ಕೇಂದ್ರೀಯ ವಿದ್ಯಾಲಯ ಸಂಘಟನೆಯೊಂದಿಗೆ (ಕೆವಿಎಸ್) ವಿಲೀನಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ‘ಜೆನ್ ಆಲ್ಫಾ’ ಪೀಳಿಗೆಯ ಶಾಲಾ ಮಕ್ಕಳು ಬೀದಿಗಿಳಿದು ಧರಣಿ ಸತ್ಯಾಗ್ರಹ ನಡೆಸಿದರು.

- Advertisement -

​ಶಿಕ್ಷಣ ಕ್ಷೇತ್ರದಲ್ಲಿ ನಾವೀನ್ಯತೆ ಹಾಗೂ ಪ್ರಾಯೋಗಿಕ ಬೋಧನಾ ವಿಧಾನಗಳನ್ನು ಅಭಿವೃದ್ಧಿಪಡಿಸುವ ಉದ್ದೇಶದಿಂದ 1965ರ ಡಿಸೆಂಬರ್‌ನಲ್ಲಿ ಇಂತಹ ಪ್ರಾಯೋಗಿಕ ಶಾಲೆಗಳನ್ನು ಸ್ಥಾಪಿಸಲಾಯಿತು. ದೇಶದ ಕೇವಲ ನಾಲ್ಕು ನಗರಗಳಾದ ಭೋಪಾಲ್, ಮೈಸೂರು, ಅಜ್ಮೇರ್ ಮತ್ತು ಭುವನೇಶ್ವರಗಳಲ್ಲಿ ಮಾತ್ರ ಈ ವಿಶಿಷ್ಟ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಶಿಕ್ಷಣ ಸಂಶೋಧನೆಯಲ್ಲಿ ಮಹತ್ವದ ಪಾತ್ರ ವಹಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

​ಶಾಲಾ ಆವರಣದ ಮುಂಭಾಗ ಜಮಾಯಿಸಿದ ವಿದ್ಯಾರ್ಥಿಗಳು, ಈ ಶಾಲೆಗಳನ್ನು ಕೆವಿಎಸ್ ಆಡಳಿತಾತ್ಮಕ ಚೌಕಟ್ಟಿನಡಿ ತರುವುದರಿಂದ ಸಂಸ್ಥೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಸಾಮಾನ್ಯ ಶಾಲಾ ವ್ಯವಸ್ಥೆಯೊಂದಿಗೆ ವಿಲೀನಗೊಳಿಸುವುದರಿಂದ ಇಲ್ಲಿನ ವಿಶಿಷ್ಟ ಪ್ರಾಯೋಗಿಕ ಕಲಿಕಾ ಮಾದರಿ ಮತ್ತು ಸ್ವತಂತ್ರ ಅಸ್ತಿತ್ವ ನಾಶವಾಗಲಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು.

​ವಿಲೀನ ವಿರೋಧಿ ಘೋಷಣೆಗಳನ್ನು ಕೂಗಿದ ವಿದ್ಯಾರ್ಥಿಗಳು, ಬಳಿಕ ಪ್ರಾದೇಶಿಕ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರೊ. ಎಸ್. ಕೆ. ಗುಪ್ತಾ ಅವರಿಗೆ ಮನವಿ ಪತ್ರ ಸಲ್ಲಿಸಿದರು. ವಿಲೀನ ಪ್ರಸ್ತಾಪವನ್ನು ಸಂಪೂರ್ಣವಾಗಿ ಕೈಬಿಟ್ಟು, ಈ ಶಾಲೆಗಳನ್ನು ಶೈಕ್ಷಣಿಕ ನಾವೀನ್ಯತೆಯ ಸಂಶೋಧನಾ ಕೇಂದ್ರಗಳನ್ನಾಗಿಯೇ ಉಳಿಸಿಕೊಂಡು ಮತ್ತಷ್ಟು ಬಲಪಡಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

​ತಮ್ಮ ಬೇಡಿಕೆಗಳನ್ನು ಶಿಕ್ಷಣ ಇಲಾಖೆ ಹಾಗೂ ಸಂಬಂಧಪಟ್ಟ ಪ್ರಾಧಿಕಾರಗಳು ಈಡೇರಿಸದಿದ್ದರೆ, ಮುಂಬರುವ ದಿನಗಳಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಹಂತ ಹಂತವಾಗಿ ತೀವ್ರಗೊಳಿಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ಪ್ರಾದೇಶಿಕ ಶಾಲೆಗಳ ಅಸ್ತಿತ್ವ ಉಳಿಸಿಕೊಳ್ಳಲು ‘ಜೆನ್ ಆಲ್ಫಾ’ ವಿದ್ಯಾರ್ಥಿಗಳು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...