ತಮಿಳರ ನಿಂದನೆ: ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ದೂರು

Date:

ಬೆಂಗಳೂರಿನ ರಾಮೇಶ್ವರಂ ಕಫೆಯಲ್ಲಿ ಮಾ.1 ರಂದು ನಡೆದಿದ್ದ ಸ್ಫೋಟ ಪ್ರಕರಣದಲ್ಲಿ ತಮಿಳುನಾಡಿನ ವ್ಯಕ್ತಿಯೊಬ್ಬ ಭಾಗಿಯಾದ ಕಾರಣಕ್ಕೆ ತಮಿಳುನಾಡಿನ ಎಲ್ಲರನ್ನು ತೀವ್ರವಾದಿಗಳು ಎಂದು ನಿಂದಿಸಿದ್ದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಡಳಿತರೂಢ ಡಿಎಂಕೆ ಪಕ್ಷ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

- Advertisement -

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ತಮ್ಮ ಚುನಾವಣಾ ಉದ್ದೇಶಗಳಿಗಾಗಿ ಕರ್ನಾಟಕ ಹಾಗೂ ತಮಿಳುನಾಡಿನ ಜನರ ನಡುವೆ ಉದ್ದೇಶಪೂರ್ವಕವಾಗಿ ದ್ವೇಷವನ್ನು ಕೆರಳಿಸುವ ಕಾರಣಕ್ಕಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಡಿಎಂಕೆಯ ಸಂಘಟನಾತ್ಮಕ ಕಾರ್ಯದರ್ಶಿ ಆರ್‌ ಎಸ್‌ ಭಾರತಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕನ್ನಡಿಗ ಹಾಗೂ ತಮಿಳರ ಎರಡು ಸಮುದಾಯಗಳ ನಡುವೆ ದ್ವೇಷ ಮತ್ತು ಹಗೆತನವನ್ನು ಸೃಷ್ಟಿಸಲು ತಮಿಳುನಾಡು ಜನರನ್ನು ತೀವ್ರವಾದಿಗಳು ಎಂದು ಸಾಮಾನ್ಯೀಕರಿಸಿದ್ದಾರೆ. ಹೇಳಿಕೆ ನೀಡಲಾಗಿರುವ ಆರೋಪಗಳು ತಮಿಳು ಸಮುದಾಯದ ನಡುವೆ ದ್ವೇಷವನ್ನು ಹೊತ್ತಿಸುವ ಗಂಭೀರ ಸ್ವರೂಪವನ್ನು ಹೊಂದಿದೆ” ಎಂದು ಆರ್‌ ಎಸ್‌ ಭಾರತಿ ದೂರಿನಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ಬಿಜೆಪಿ-ಜೆಡಿಎಸ್ ನಡುವಿನ ಬಿರುಕಲ್ಲ, ಬಿಕ್ಕಟ್ಟಲ್ಲ, ಆಟ

ಕರಂದ್ಲಾಜೆ ಅವರ ಹೇಳಿಕೆಯು ಬೇಜವಾಬ್ದಾರಿಯುತವಾಗಿದ್ದು, ಪ್ರಧಾನಿಯಿಂದ ಹಿಡಿದು ಬಿಜೆಪಿಯ ಎಲ್ಲ ನಾಯಕರು ಕೊಳಕು ರಾಜಕೀಯವನ್ನು ನಿಲ್ಲಿಸುವಂತೆ ಡಿಎಂಕೆ ಅಧ್ಯಕ್ಷ ಹಾಗೂ ಮುಖ್ಯಮಂತ್ರಿಯು ಆದ ಎಂ ಕೆ ಸ್ಟಾಲಿನ್‌ ಹೇಳಿದ್ದಾರೆ.

ಈ ಹೇಳಿಕೆಯು ದ್ವೇಷ ಭಾಷಣಕ್ಕೆ ಸಮಾನವಾಗಿದೆ. ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ.ಕೇಂದ್ರ ಸಚಿವರು ಎರಡು ಸಮುದಾಯಗಳ ನಡುವೆ ಬಾಂಧವ್ಯಗಳನ್ನು ಕೆಡಿಸುತ್ತಿದ್ದಾರೆ. ಅಲ್ಲದೆ ಕರ್ನಾಟಕದಲ್ಲಿನ ತಮಿಳು ಜನರಿಗೆ ಸಂಭಾವ್ಯ ಬೆದರಿಕೆ ತಂದೊಡ್ಡಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ ಎಂದು ರಾಜ್ಯಸಭೆಯ ಮಾಜಿ ಸದಸ್ಯರು ಆದ ಭಾರತಿ ತಿಳಿಸಿದ್ದಾರೆ.

ಶೋಭಾ ಕರಂದ್ಲಾಜೆ ಅವರು ಮಾದರಿ ನೀತಿ ಸಂಹಿತೆಯ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 123(3ಎ) ಹಾಗೂ 125 ಸಕ್ಷನ್‌ಅನ್ನು ಉಲ್ಲಂಘಿಸಿದ್ಧಾರೆ ಎಂದು ದೂರು ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...