‘ಹಸಿವಿನ ವಿರುದ್ಧದ ಜಾಗತಿಕ ಹೋರಾಟವನ್ನು ಭೌಗೋಳಿಕ ರಾಜಕೀಯ ಸಂಘರ್ಷಗಳು ಹಳಿತಪ್ಪಿಸುತ್ತಿವೆ’

Date:

ಹವಾಮಾನ ಬದಲಾವಣೆಯಿಂದ ಹೆಚ್ಚುತ್ತಿರುವ ತಾಪಮಾನದಿಂದಾಗಿ, ಭಾರತವು (ವಿಶೇಷವಾಗಿ ಒಣಭೂಮಿ ಪ್ರದೇಶಗಳು) ತನ್ನ ಭೂಮಿ, ಬೆಳೆ ಉತ್ಪಾದಕತೆ ಹಾಗೂ ಪೌಷ್ಟಿಕಾಂಶದ ಗುಣಮಟ್ಟದಲ್ಲಿ ಗಮನಾರ್ಹ ಕುಸಿತ ಕಾಣಬಹುದು ಎಂದು ಭಾರತೀಯ ಕೃಷಿ ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಅಲ್ಲದೆ, ನಡೆಯುತ್ತಿರುವ ಭೌಗೋಳಿಕ ರಾಜಕೀಯ ಸಂಘರ್ಷಗಳು ಜಾಗತಿಕ ಗಮನವನನ್ನು ಎದುರಾಗುತ್ತಿರುವ ಆಹಾರ ಭದ್ರತಾ ಬಿಕ್ಕಟ್ಟಿನಿಂದ ಬೇರೆಡೆ ಸೆಳೆಯುತ್ತಿವೆ ಎಂದೂ ಹೇಳಿದ್ದಾರೆ.

- Advertisement -

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ‘ಸುಸ್ಥಿರ ಅಭಿವೃದ್ಧಿಗಾಗಿ ಹವಾಮಾನ ಸ್ಥಿತಿಸ್ಥಾಪಕ ಕೃಷಿ: ನಾವೀನ್ಯತೆ ಮತ್ತು ಪರಿಹಾರಗಳು’ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ತಜ್ಞರು ಆಹಾರ ಬಿಕ್ಕಟ್ಟಿನ ಕುರಿತು ಮಾತನಾಡಿದ್ದಾರೆ. ದೆಹಲಿ ಮೂಲದ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (IARI) ನಡೆಸಿದ ಅಧ್ಯಯನಗಳನ್ನು ಉಲ್ಲೇಖಿಸಿರುವ ಹಲವು ತಜ್ಞರು, “ಮುಂದಿನ 25 ವರ್ಷಗಳಲ್ಲಿ ಅಕ್ಕಿ ಉತ್ಪಾದಕತೆ 15% ಮತ್ತು ಗೋಧಿ ಇಳುವರಿ 20% ಕಸಿಯಬಹುದು. ಇದು, ಆಹಾರ ಬಿಕ್ಕಟ್ಟಿನ ಜೊತೆಗೆ, ರೈತರ ಆದಾಯದ ಮೇಲೂ ತೀವ್ರ ಪರಿಣಾಮ ಬೀರುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ICAR) ಮಾಜಿ ಮಹಾನಿರ್ದೇಶಕ ಡಾ. ಹಿಮಾಂಶು ಪಾಠಕ್, “ಹವಾಮಾನ ಬದಲಾವಣೆಯು ಪ್ರಮುಖ ಬೆಳೆಗಳ ಇಳುವರಿಯನ್ನು ಸುಮಾರು 20%ರಷ್ಟು ಕಡಿಮೆ ಮಾಡಬಹುದು. ಫಲವತ್ತತೆ ಮತ್ತು ಭೂಮಿಯ ಅವನತಿಯಿಂದಾಗಿ ಸಾಂಪ್ರದಾಯಿಕ ಬೆಳೆ ಬೆಳೆಯುವ ಪ್ರದೇಶಗಳು 15-20% ರಷ್ಟು ಕುಗ್ಗುತ್ತವೆ. ಇದರರ್ಥ ಆಹಾರ ಬೆಳೆಗಳ ಉತ್ಪಾದಕತೆ ಮತ್ತು ಗುಣಮಟ್ಟ ಕುಸಿಯುತ್ತದೆ. ಜೊತೆಗೆ, ಆಹಾರದಲ್ಲಿ ಸತು ಮತ್ತು ಕಬ್ಬಿಣದಂತಹ ಸೂಕ್ಷ್ಮ ಪೋಷಕಾಂಶಗಳ ಮಟ್ಟವೂ ತೀವ್ರವಾಗಿ ಕಡಿಮೆಯಾಗುತ್ತದೆ. ಬೆಳೆಗಳ ಮೇಲೆ ಹೆಚ್ಚುತ್ತಿರುವ ಜೈವಿಕ ಒತ್ತಡವು ಕೀಟಗಳ ದಾಳಿಗೆ ಕಾರಣವಾಗುತ್ತದೆ. ಇದು ಅಂತಿಮವಾಗಿ ರೈತರ ಆದಾಯವನ್ನು ಕಡಿಮೆ ಮಾಡುತ್ತದೆ” ಎಂದು ವಿವರಿಸಿದ್ದಾರೆ.

“ಹವಾಮಾನ ಬದಲಾವಣೆಯು ಈಗಾಗಲೇ ಜಾಗತಿಕ ವಾಸ್ತವವಾಗಿದೆ. ಇದು ಈಗ ದೇಶದ ಒಣಭೂಮಿ ಪ್ರದೇಶಗಳಲ್ಲಿ ಆಹಾರ ಭದ್ರತೆಗೆ ಗಂಭೀರ ಬೆದರಿಕೆಯನ್ನು ಒಡ್ಡುತ್ತಿದೆ” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: Budget 2026 : ಮಹಿಳೆ-ದಲಿತ-ಬುಡಕಟ್ಟು ಸಮುದಾಯಗಳಿಗೆ ಸಿಕ್ಕಿದ್ದೆಷ್ಟು?

“ಕಳೆದ ವರ್ಷ, ಶುಷ್ಕ ಬುಂದೇಲ್‌ಖಂಡ್ ಪ್ರದೇಶದಲ್ಲಿ 49 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಅಲ್ಲದೆ, ಸಾಮಾನ್ಯವಾಗಿ ಒಂದು ತಿಂಗಳಲ್ಲಿ ಕೇವಲ 30-40 ಮಿಮೀ ಮಳೆಯಾಗುವ ಪ್ರದೇಶದಲ್ಲಿ ಕೇವಲ ಒಂದು ಗಂಟೆಯಲ್ಲಿಯೇ 307 ಮಿಮೀ ಮಳೆ ದಾಖಲಾಗಿದೆ. ಇದು ಹವಾಮಾನ ಬದಲಾವಣೆ ಪರಿಣಾಮ. ಈ ಭಾರೀ ಮಳೆಯಿಂದ ಹಳ್ಳಿಗಳು ಮತ್ತು ಕೃಷಿ ಹೊಲಗಳಲ್ಲಿ ಪ್ರವಾಹ ಉಂಟಾಗಿ, ಬೆಳೆಗಳು ಕೊಚ್ಚಿ ಹೋಗುತ್ತಿವೆ. ಅದೇ ಸಮಯದಲ್ಲಿ, ದೀರ್ಘ ಬರಗಾಲಗಳು ಬೆಳೆಗಳನ್ನು ಒಣಗಿಸಿವೆ” ಎಂದು ವಿವರಿಸಿದ್ದಾರೆ.

“ಅಂತರರಾಷ್ಟ್ರೀಯ ರಾಜಕೀಯ ನಾಯಕರು ಬಂದೂಕು ಯುದ್ಧಗಳು, ಪ್ರಾದೇಶಿಕ ವಿವಾದಗಳು ಹಾಗೂ ಇಂಧನ ಸಂಘರ್ಷಗಳ ಮೇಲೆ ಕೇಂದ್ರೀಕರಿಸುತ್ತಿದ್ದಾರೆ. ಇದರಿಂದ, ಇತ್ತೀಚಿನ ವರ್ಷಗಳಲ್ಲಿ ಹಸಿವಿನ ವಿರುದ್ಧದ ಜಾಗತಿಕ ಹೋರಾಟವು ಮೂಲೆಗೆ ಸರಿದಿದೆ. ಈ ಬೆಳವಣಿಗೆಗಳು ಹಸಿವಿನ ವಿರುದ್ಧದ ಹೋರಾಟವನ್ನು ಹಿಂದಕ್ಕೆ ತಳ್ಳಿವೆ” ಎಂದು ಹೇಳಿದ್ದಾರೆ.

ಹೈದರಾಬಾದ್‌ನ ಐಸಿಎಆರ್-ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ರೈಸ್ ರಿಸರ್ಚ್ (ಐಸಿಎಆರ್-ಐಐಆರ್ಆರ್) ನಿರ್ದೇಶಕಿ ಡಾ. ರಾಮನ್ ಮೀನಾಕ್ಷಿ ಸುಂದರಂ, “ಹವಾಮಾನ ಬದಲಾವಣೆಯು ಬೆಳೆಗಳ ಮೇಲೆ ರೋಗದ ಒತ್ತಡವನ್ನು ಹೆಚ್ಚಿಸಿದೆ. ಕೆಲವು ದಶಕಗಳ ಹಿಂದೆ, ಭತ್ತದ ಬೆಳೆಗಳು ಮೂರು ಪ್ರಮುಖ ರೋಗಗಳನ್ನು ಎದುರಿಸುತ್ತಿದ್ದವು. ಇಂದು, ಹವಾಮಾನ ಬದಲಾವಣೆಯು ಈಗ ಸುಮಾರು 22 ಪ್ರಮುಖ ರೋಗಗಳಿಗೆ ಕಾರಣವಾಗಿದೆ” ಎಂದು ತಿಳಿಸಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಟುಂಬ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಮಧ್ಯಸ್ಥಿಕೆಗೆ ಆದ್ಯತೆ ನೀಡಿ: ಸುಪ್ರೀಂ ನ್ಯಾಯಮೂರ್ತಿ ನಾಗರತ್ನ

ದೇಶದ ಕೌಟುಂಬಿಕ ನ್ಯಾಯಾಲಯಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪ್ರಕರಣಗಳ ಹೊರೆಯನ್ನು ಕಡಿಮೆ...

ಯುದ್ಧದ ಕರಾಳ ನೆರಳು: ರಷ್ಯಾ ಕನಸು ನಚ್ಚುನೂರಾಗಿ ಉಕ್ರೇನ್‌ನಲ್ಲಿ ಬಂಧಿಯಾದ ಭಾರತೀಯ ಯುವಕ!

ಉತ್ತಮ ಜೀವನ ರೂಪಿಸಿಕೊಳ್ಳಬೇಕು, ದೇಶ ವಿದೇಶ ಸುತ್ತಿ ಆರ್ಥಿಕವಾಗಿ ಕುಟುಂಬವನ್ನು ಬೆಂಬಲಿಸಬೇಕು...