ಗಾಜಿಪುರ ಅತ್ಯಾಚಾರ ಪ್ರಕರಣ | ಹತ್ರಾಸ್, ಕತುವಾ, ಉನ್ನಾವೊ.. ಈಗ ಗಾಜಿಪುರ, ಇದೊಂದು ವ್ಯವಸ್ಥಿತ ಮಾದರಿ : ರಾಹುಲ್‌

Date:

ವಿಶ್ವಕರ್ಮ ಸಮುದಾಯದ ಬಾಲಕಿಯ ಮೇಲೆ ಉತ್ತರ ಪ್ರದೇಶದ ಗಾಜಿಪುರದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಿ, ಸೂಕ್ತ ನ್ಯಾಯ ದೊರಕಿಸಿಕೊಡಬೇಕೆಂದು ಲೋಕಸಭೆಯ ವಿಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್‌ ಖಾತೆ ʼಎಕ್ಸ್‌ʼ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಹುಲ್,‌ ತಮ್ಮ ಮಗಳ ಸಾವಿನ ಬಗ್ಗೆ ಎಫ್‌ಐಆರ್ ದಾಖಲಿಸಲೆಂದು ಪೋಷಕರು ಅಧಿಕಾರಿಗಳ ಮುಂದೆ ಬೇಡುವಂತಹ ಪರಿಸ್ಥಿತಿ ಯಾವ ರಾಜ್ಯ ಅಥವಾ ದೇಶದಲ್ಲಿರುತ್ತದೆಯೋ, ಅಲ್ಲಿನ ಸರ್ಕಾರಕ್ಕೆ ಅಧಿಕಾರದಲ್ಲಿರಲು ಯಾವುದೇ ನೈತಿಕತೆ ಇಲ್ಲ ಎಂದು ಅವರು ಆಕ್ರೋಶ ಹೊರಹಾಕಿದ್ದಾರೆ.

- Advertisement -

ಹತ್ರಾಸ್, ಕತುವಾ, ಉನ್ನಾವೊ.. ಈಗ ಗಾಜಿಪುರ.. ಇದೊಂದು ವ್ಯವಸ್ಥಿತ ಮಾದರಿಯಾಗಿಬಿಟ್ಟಿದೆ. ಮಣಿಪುರದ ಮಗಳು ನ್ಯಾಯಕ್ಕಾಗಿ ಕಾಯುತ್ತಲೇ ಕೊನೆಯುಸಿರೆಳೆದಳು. ಪ್ರತಿ ಬಾರಿಯೂ ದಲಿತರು, ಹಿಂದುಳಿದವರು, ಆದಿವಾಸಿಗಳು ಮತ್ತು ಬಡವರೇ ಬಲಿಪಶುಗಳಾಗಿರುತ್ತಾರೆ. ಅಪರಾಧಿಗೆ ರಕ್ಷಣೆ ಮತ್ತು ಸಂತ್ರಸ್ತರಿಗೆ ಕಿರುಕುಳ ನೀಡುವುದು ಸಾಮಾನ್ಯ ಎಂಬಂತಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ವಿರುದ್ಧ ಕಿಡಿಕಾರಿದ ರಾಹುಲ್, ನಿಮ್ಮ ಆಡಳಿತದಲ್ಲಿ ಹೆಣ್ಣುಮಕ್ಕಳು ಇಷ್ಟೊಂದು ಅಸುರಕ್ಷಿತರಾಗಿರುವುದು ಯಾಕೆ? ಉತ್ತರ ನೀಡಿ ಎಂದು ಒತ್ತಾಯಿಸಿದ್ದಾರೆ.

ಏ.15ರಂದು ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯ ಕರಂಡಾ ಎಂಬಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು.  ಆಕೆಯನ್ನು ಅತ್ಯಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪ ಮಾಡಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...

ಶಿಕಾರಿಪುರ | ಖಾಸಗಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಶಿಕಾರಿಪುರ ಪಟ್ಟಣದ ಗಬ್ಬೂರು ಸಮೀಪ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ...