ಮಹಾರಾಷ್ಟ್ರ | ಶಾಲೆಗೆ ತಡವಾಗಿ ಬಂದಿದ್ದಕ್ಕೆ 100 ಬಸ್ಕಿ ಹೊಡೆಸಿದ ಶಿಕ್ಷಕರು; ಬಾಲಕಿ ಸಾವು

Date:

ಶಾಲೆಗೆ ತಡವಾಗಿ ಬಂದಿದ್ದಕ್ಕೆ ಶಿಕ್ಷೆಯಾಗಿ 100 ಬಸ್ಕಿ ಹೊಡೆಸಿದ ಪರಿಣಾಮ 13 ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ತಹಸಿಲ್‌ನಲ್ಲಿ ನಡೆದಿದೆ.

- Advertisement -

ಮೃತ ಬಾಲಕಿಯನ್ನು ವಸಾಯಿ ಪ್ರದೇಶದ ಸತಿವಲಿಯಲ್ಲಿರುವ ಶ್ರೀ ಹನುಮಂತ್ ವಿದ್ಯಾ ಮಂದಿರ ಪ್ರೌಢಶಾಲೆಯ ವಿದ್ಯಾರ್ಥಿನಿ ಅಂಶಿಕಾ ಗೌಡ್ (13) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮಹಾರಾಷ್ಟ್ರ | ಬಾಲಾಪರಾಧಿ ಗೃಹದಿಂದ ಆರು ಬಾಲಕಿಯರು ಪರಾರಿ

ಮಕ್ಕಳ ದಿನಾಚರಣೆಯಾದ ಶುಕ್ರವಾರ ಈ ಘಟನೆ ನಡೆದಿದೆ. ಶಾಲೆಯ ಬ್ಯಾಗ್ ಬೆನ್ನಿಗೆ ನೇತು ಹಾಕಿಕೊಂಡೇ ಬಾಲಕಿ 100 ಬಾರಿ ಬಸ್ಕಿ ಹೊಡೆಯುವಂತೆ ಶಿಕ್ಷಕರು ಒತ್ತಡ ಹೇರಿದ್ದಾರೆ. ಇದಾದ ಬಳಿಕ ಬಾಲಕಿಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿತ್ತು ಎಂದು ಹೇಳಲಾಗಿದೆ.

ಬಾಲಕಿ ಸಂಜೆ ಮನೆಗೆ ಹಿಂದಿರುಗುತ್ತಿದ್ದಂತೆ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮುಂಬೈನ ಸರ್ ಜೆಜೆ ಆಸ್ಪತ್ರೆಗೆ ವರ್ಗಾಯಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ವರದಿಯಾಗಿದೆ.

“ಶಿಕ್ಷೆಯ ನಂತರ, ಆಕೆಗೆ ಕುತ್ತಿಗೆ ಮತ್ತು ಬೆನ್ನು ತೀವ್ರವಾಗಿ ನೋವಾಗಿದೆ. ಆಕೆಗೆ ಎದ್ದೇಳಲೂ ಸಾಧ್ಯವಾಗುತ್ತಿರಲಿಲ್ಲ” ಎಂದು ಆಕೆಯ ಪೋಷಕರು ಹೇಳಿದ್ದಾರೆ.

ಸದ್ಯ ವಾಲಿವ್ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವಿನ ಪ್ರಕರಣ ದಾಖಲಾಗಿದೆ. ಮತ್ತೊಂದೆಡೆ, ಅಂಶಿಕಾ ಸಾವಿನ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಬ್ಲಾಕ್ ಶಿಕ್ಷಣ ಅಧಿಕಾರಿ ಪಾಂಡುರಂಗ್ ಗಲಾಂಗೆ ಹೇಳಿದ್ದಾರೆ.

ಘಟನೆಯ ವಿರುದ್ಧ ಎಂಎನ್‌ಎಸ್ ಮತ್ತು ಎನ್‌ಸಿಪಿ (ಎಸ್‌ಪಿ) ಸ್ಥಳೀಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಶಾಲೆ, ಅದರ ಅಧಿಕಾರಿಗಳು ಮತ್ತು ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಸದ್ಯ ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...