ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

Date:

13 ವರ್ಷದ ಬಾಲಕಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಮೂವರು ಕಾಮುಕರು ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಇನ್‌ಸ್ಟಾಗ್ರಾಮ್‌ನಲ್ಲಿ ಬಾಲಕಿಗೆ ಪರಿಚಿತನಾಗಿದ್ದ ವ್ಯಕ್ತಿ ಮತ್ತು ಆತನ ಸ್ನೇಹಿತರು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮೂವರು ಆರೋಪಿಗಳಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ಇನ್‌ಸ್ಟಾಗ್ರಾಮ್‌ನಲ್ಲಿ ಆರೋಪಿಯೊಬ್ಬನೊಂದಿಗೆ ಸ್ನೇಹ ಬೆಳೆಸಿ ಮತ್ತೊಬ್ಬ ವ್ಯಕ್ತಿಗೆ ಪರಿಚಯವಾಗಿದ್ದಳು. ಇಬ್ಬರೂ ಆಕೆಯೊಂದಿಗೆ ಸಾಮಾಜಿಕ ಮಾಧ್ಯಮದಲ್ಲಿ ಚಾಟ್ ಮಾಡುತ್ತಿದ್ದರು. ಜೂನ್ 1ರಂದು ಈ ಇಬ್ಬರು ಮತ್ತು ಇನ್ನೊಬ್ಬ ಆರೋಪಿ ಆಕೆಯನ್ನು ಭೇಟಿ ಮಾಡಲು ಆಕೆಯ ಹಳ್ಳಿಗೆ ತೆರಳಿದ್ದರು. ತಮ್ಮೊಂದಿಗೆ ಲಾಂಗ್‌ಡ್ರೈವ್‌ಗೆ ಬರುವಂತೆ ಬಾಲಕಿಯನ್ನು ಒತ್ತಾಯಿಸಿದ್ದರು” ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ನಿರಂಜನ್ ಶರ್ಮಾ ತಿಳಿಸಿದ್ದಾರೆ.

“ಅವರ ಬಲವಂತಕ್ಕೆ ಮಣಿದ ಬಾಲಕಿ ಅವರೊಂದಿಗೆ ಡ್ರೈವ್ ಹೋಗಲು ಒಪ್ಪಿಕೊಂಡಿದ್ದಾಳೆ. ಆಕೆಯನ್ನು ಕರೆದೊಯ್ದ ಆರೋಪಿಗಳಲ್ಲಿ ಓರ್ವ ಕಾಮುಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಒಬ್ಬ ಕಾರನ್ನು ಚಲಾಯಿಸಿದರೆ, ಮತ್ತೊಮ್ಮ ಕೃತ್ಯವನ್ನು ವಿಡಿಯೋ ಮಾಡಿಕೊಂಡಿದ್ದಾನೆ” ಆರೋಪಿಸಲಾಗಿದೆ.

ಕೃತ್ಯದ ವಿಡಿಯೋವನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಕಾಮುಕರು, ಪದೇ-ಪದೇ ಬಾಲಕಿಯನ್ನು ಭೇಟಿ ಮಾಡಲು ಕರೆಯುತ್ತಿದ್ದರು. ಭೇಟಿ ಮಾಡಲು ಬರಲಿದ್ದರೆ, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀರು ತಿಳಿಸಿದ್ದಾರೆ.

ಬಾಲಕಿ ಆರೋಪಿಗಳ ಬೆದರಿಕೆಗೆ ಮಣಿಯದಿದ್ದಾಗ, ಕೃತ್ಯದ ವಿಡಿಯೋವನ್ನು ಹರಿಬಿಡಲಾಗಿದೆ. ಬಳಿಕ, ಬಾಲಕಿಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರನ್ನು ಬಂಧಿಸಿದ್ದು, ಮುರನೇ ಆರೋಪಿಗಾಗಿ ಶೋಧ ನಡೆಯುತ್ತಿದೆ ಎಂದು ವರದಿಯಾಗಿದೆ.

ಅಪರಾಧಕ್ಕೆ ಬಳಸಿದ್ದ ಮೊಬೈಲ್ ಫೋನ್ ಮತ್ತು ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಸೃಷ್ಟಿಸುವ ಕೃತಕ ಪ್ರೋಟೀನ್‌ಗಳಿಗೆ ಗೂಗಲ್‌ನಿಂದ ‘ಡಿಜಿಟಲ್ ಮುದ್ರೆ’: ಜೈವಿಕ ಅಪಾಯ ತಡೆಯಲು ಹೊಸ ಅಸ್ತ್ರ

ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ಲ್ಯಾಬ್‌‌ಗಳಲ್ಲಿ ಹೊಸ ಬಗೆಯ ಪ್ರೋಟೀನ್‌ಗಳನ್ನು...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌: ಯಾಕೀ ವಿವಾದ?

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ....

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...